• Tag results for assembly

ವಿಧಾನಸಭೆ ಡೆಪ್ಯುಟಿ ಸ್ಫೀಕರ್ ಸ್ಥಾನಕ್ಕೆ ಶಾಸಕ ಆನಂದ ಮಾಮನಿ ಅವಿರೋಧ ಆಯ್ಕೆ

ಇಂದು ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಲಲಿದ್ದು ಇದಕ್ಕೆ ಮುನ್ನ ವಿಧಾನಸಭೆ ಉಪಾದ್ಯಕ್ಷ ಸ್ಥಾನದ ಆಯ್ಕೆ ನಡೆಯುತ್ತಿದೆ, ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಕೃಷ್ಣಾ ರೆಡ್ಡಿ  ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಶಾನಕ ಆನಂದ ಮಾಮನಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.

published on : 24th March 2020

ಕೊರೋನಾ ಭೀತಿ: ನಾಳೆ ವಿಧಾನಮಂಡಲ ಅಧಿವೇಶನಕ್ಕೆ ತೆರೆ

ಕೊರೋನಾ ವೈರಾಣು ಹರಡುವಿಕೆ ತಡೆ ಕ್ರಮದ ಅಂಗವಾಗಿ ರಾಜ್ಯ ವಿಧಾನಮಂಡಲ ಕಲಾಪವನ್ನು ಮಂಗಳವಾರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.

published on : 23rd March 2020

ಕಾಗದರಹಿತ ಇ-ಸೆಷನ್ ನಡೆಸಲು ಚಿಂತನೆ: ಸುರೇಶ್ ಕುಮಾರ್

ಬೇರೆ ಬೇರೆ ರಾಜ್ಯಗಳಲ್ಲಿರುವಂತೆ ರಾಜ್ಯದ ವಿಧಾನಮಂಡಲ ಕಾರ್ಯಕಲಾಪವನ್ನು ಕಾಗದರಹಿತ ಅಧಿವೇಶನ(ಇ-ಸೆಷನ್) ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇಲ್ಮನೆಗೆ ತಿಳಿಸಿದ್ದಾರೆ.

published on : 23rd March 2020

ರಾಯಚೂರಿನಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸುವ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹೊಸದಾಗಿ ರಾಯಚೂರು ವಿಶ್ವವಿದ್ಯಾಲಯ ಸ್ಥಾಪಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ 2020' ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

published on : 20th March 2020

ಸಿ.ಟಿ‌.ರವಿಯವರ ಅಗಾಧ ಶಕ್ತಿಯನ್ನು ಬಳಸಿಕೊಂಡಿಲ್ಲ: ಅವರ ಯೋಗ್ಯತೆಗೆ ತಕ್ಕ ಸ್ಥಾನ ಸಿಎಂ ನೀಡಿಲ್ಲ

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಖಾತೆ ಬದಲಾವಣೆ ವಿಚಾರ ಕುರಿತು ಚರ್ಚೆಗೆ ಗ್ರಾಸವಾದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

published on : 20th March 2020

ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕಾರ

ಪ್ರತಿಪಕ್ಷಗಳ ಸಭಾತ್ಯಾಗದ ಮಧ್ಯೆ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ  ದೊರೆಯಿತು

published on : 19th March 2020

ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾ: ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ತೀವ್ರ ಗದ್ದಲ

ಮಧ್ಯಪ‍್ರದೇಶದ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿರುವ ರಮಣ ರೆಸಾರ್ಟ್'ಗೆ ಪ್ರವೇಶಿಸಲು ಯತ್ನಿಸಿದ ಅಲ್ಲಿನ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಂಧನ ಪ್ರಶ್ನಿಸಿ ಕಾಂಗ್ರೆಸ್ ಸದಸ್ಯರು ವಿಧಾನಸಭೆಯಲ್ಲಿ ತೀವ್ರ ಗದ್ದಲವೆಬ್ಬಿಸಿದರು.

published on : 19th March 2020

ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಎರಡೂವರೆ ವರ್ಷಕ್ಕೆ ಇಳಿಕೆ: ಮಸೂದೆ

ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ  ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಧಿಕಾರ ಅವಧಿಯನ್ನು ಎರಡೂವರೆ ವರ್ಷಗಳಿಗೆ ಇಳಿಸುವ ಸಂಬಂಧ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌  (ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ  ಬುಧವಾರ ಮಂಡಿಸಲಾಯಿತು.

published on : 18th March 2020

ಇಟಲಿಯಲ್ಲಿರುವ ಕನ್ನಡಿಗರನ್ನು ಕರೆತನ್ನಿ: ಸದನದಲ್ಲಿ ಪ್ರಿಯಾಂಕ್ ಖರ್ಗೆ ಆಗ್ರಹ

ಕೊರೋನಾ ವೈರಸ್‌ ಸೋಂಕು ವ್ಯಾಪಕತೆಯಿಂದ ಭೀತರಾಗಿ ಸ್ವದೇಶಕ್ಕೆ ಮರಳಲು ಪರದಾಡುತ್ತಿರುವ ಕನ್ನಡಿಗರಿಗೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 

published on : 18th March 2020

ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ

ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು

published on : 17th March 2020

ಬಿಜೆಪಿಯಿಂದ ಅವಿಶ್ವಾಸ ನಿರ್ಣಯಕ್ಕೆ ಸಿದ್ದತೆ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ರಾಜೀನಾಮೆ

ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ಈ ನಿರ್ಧಾರ ಕೈಗೊಂಡರು.

published on : 17th March 2020

ಪಾಪು ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ: ಗಣ್ಯರಿಂದ ಗುಣಗಾನ

ನಿನ್ನೆ ನಿಧನರಾದ ಹಿರಿಯ ಸಾಹಿತಿ, ಪತ್ರಕರ್ತ ಡಾ.ಪಾಟೀಲ್ ಪುಟ್ಟಪ್ಪ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಸಂತಾಪ ಸೂಚಿಸಲಾಯಿತು.ಪಾಪು ನಿಧನದ ಹಿನ್ನೆಲೆಯಲ್ಲಿ ಒಂದು ನಿಮಿಷ ಕಾಲ ಮೌನಾಚರಿಸಲಾಯಿತು.

published on : 17th March 2020

ಕೊರೋನಾ ಎಫೆಕ್ಟ್: ಇಂದಿನಿಂದ ಮಾ.20ರವರೆಗೂ ವಿಧಾನಸಭೆ ಗ್ಯಾಲರಿಗೆ ಪ್ರೇಕ್ಷಕರ ನಿರ್ಬಂಧ

ಕೊರೋನಾ ವೈರಸ್ ವಿಶ್ವಪ್ಯಾಪಿ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ. 

published on : 17th March 2020

ಶಿಕ್ಷಕರ ವರ್ಗಾವಣೆ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

published on : 17th March 2020

ಮಧ್ಯ ಪ್ರದೇಶ ಕಮಲ್ ನಾಥ್ ಸರ್ಕಾರ ಸದ್ಯಕ್ಕೆ ಸೇಫ್: ವಿಧಾನಸಭೆಯಲ್ಲಿ ಕೋಲಾಹಲ, ಕಲಾಪ ಮಾರ್ಚ್ 26ಕ್ಕೆ ಮುಂದೂಡಿಕೆ

ಬಿಜೆಪಿಗೆ ಸದ್ಯದ ಮಟ್ಟಿಗೆ ಹಿನ್ನಡೆಯಾಗುವ ರೀತಿಯಲ್ಲಿ ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್ ಪಿ ಪ್ರಜಾಪತಿ ಸೋಮವಾರ ಕಮಲ್ ನಾಥ್ ಸರ್ಕಾರದ ಬಹುಮತ ಪರೀಕ್ಷೆ ನಡೆಸದೆ ಕಲಾಪವನ್ನು ಮಾರ್ಚ್ 26ಕ್ಕೆ ಮುಂದೂಡಿದರು.

published on : 16th March 2020
1 2 3 4 5 6 >