social_icon
  • Tag results for bandh

ಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು. 

published on : 29th September 2023

ಕಾವೇರಿ ಉಗಮಸ್ಥಳದಲ್ಲೇ 'ಕಾವೇರದ ಬಂದ್'; ಜನಜೀವನ ಸಾಮಾನ್ಯ, ರೈತಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ

ಕಾವೇರಿ ನೀರಿಗಾಗಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಾವೇರಿ ನದಿ ಜನ್ಮಸ್ಥಳ ತಲಕಾವೇರಿಯಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಸಾಗಿದೆ.

published on : 29th September 2023

ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತ: ಡಿಕೆ ಶಿವಕುಮಾರ್; ಅ.5ಕ್ಕೆ ಕೆಆರ್‌ಎಸ್ ಗೆ ಮುತ್ತಿಗೆ ಎಂದ ವಾಟಾಳ್ ನಾಗರಾಜ್

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಿಳಿಸಿದರು.

published on : 29th September 2023

ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ರಾಜ್ಯಾದ್ಯಂತ ಬಂದ್‌ನಿಂದಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದರು.

published on : 29th September 2023

ಕರ್ನಾಟಕ ಬಂದ್: 44 ವಿಮಾನಗಳನ್ನು ರದ್ದು; ಬಸ್ ಸೇವೆ ವ್ಯತ್ಯಯ; ಪ್ರಯಾಣಿಕರಿಗೆ ಸಂಕಷ್ಟ!

ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್‌ನಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಹೊರಡುವ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

published on : 29th September 2023

ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್​ ಕುಮಾರ್​

ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.

published on : 29th September 2023

ಕರ್ನಾಟಕ ಬಂದ್: ಬಂಧಿತರನ್ನು ಬಿಡುಗಡೆ ಮಾಡಿ; ಈ ಒಗ್ಗಟ್ಟು ನೆರೆ ರಾಜ್ಯಕ್ಕೆ ಎಚ್ಚರಿಕೆ ಗಂಟೆಯಾಗಬೇಕು- ಎಚ್‌ಡಿ ಕುಮಾರಸ್ವಾಮಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ವೇಳೆ ಬಂಧಿತರಾಗಿರುವ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಒತ್ತಾಯಿಸಿದ್ದಾರೆ.

published on : 29th September 2023

'ಬುರ್ಖಾ ಧರಿಸಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ: ವಾಟಾಳ್ ನಾಗರಾಜ್ ಏನೆಂದರು?

ಮಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

published on : 29th September 2023

ಕರ್ನಾಟಕ ಬಂದ್​: ತಮಿಳು ಸಂಘಟನೆಗಳ ಒಕ್ಕೂಟ ಬೆಂಬಲ!

ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿದ್ದು, ಬಂದ್‌ಗೆ ರಾಜ್ಯದಲ್ಲಿರುವ ತಮಿಳು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

published on : 29th September 2023

'ಕಾವೇರಿ' ಗಲಾಟೆಗೆ ಕರ್ನಾಟಕ ಬಂದ್‌: ಬೆಂಗಳೂರು, ರಾಜ್ಯದ ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ‘ಕನ್ನಡ ಒಕ್ಕೂಟ’ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಇಂದು ಶುಕ್ರವಾರ ಬೆಂಗಳೂರು ಹಾಗೂ ರಾಜ್ಯದ ಇತರ ದಕ್ಷಿಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

published on : 29th September 2023

ಕಾವೇರಿ ಕಿಚ್ಚು, ಕರುನಾಡು ಬಂದ್: ಜಲಾನಯನ ಜಿಲ್ಲೆಗಳಲ್ಲಿ ತೀವ್ರ ಪ್ರತಿಭಟನೆ, ಹಲವೆಡೆ ಪ್ರತಿಭಟನಾಕಾರರು ಖಾಕಿ ವಶಕ್ಕೆ

ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು(Cauvery water) ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ(Tamil Nadu) ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ(Karnataka bandh) ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಜೋರಾಗಿದೆ.

published on : 29th September 2023

ಕರ್ನಾಟಕ ಬಂದ್: ರಾಜ್ಯಾದ್ಯಂತ ಬಿಗಿ ಭದ್ರತೆ, ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ. 

published on : 28th September 2023

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ಬಿಜೆಪಿ ಬೆಂಬಲವಿರುತ್ತದೆ: ಬಸವರಾಜ ಬೊಮ್ಮಾಯಿ

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಈಗಾಗಲೇ ತಮಿಳುನಾಡಿಗೆ ಹೆಚ್ಚಿನ ನೀರನ್ನು ಹರಿಸಲಾಗಿದ್ದು, ಕಾವೇರಿ ಜಲವಿವಾದ ನ್ಯಾಯಮಂಡಳಿಯ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ಅವರು ಹೇಳಿದರು.

published on : 28th September 2023

ನಾಳೆ ಕರ್ನಾಟಕ ಬಂದ್: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಾಳೆ(ಶುಕ್ರವಾರ) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು ಈ ಬಂದ್​ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದೆ.

published on : 28th September 2023

ಬೆಂಗಳೂರು ಬಂದ್‌ನಿಂದಾಗಿ ಅಂದಾಜು 1,500 ರಿಂದ 2,000 ಕೋಟಿ ರೂ. ನಷ್ಟ; ಕರ್ನಾಟಕ ಬಂದ್‌ಗೆ ಅನುಮತಿಯಿಲ್ಲ- ಪರಮೇಶ್ವರ

ಸೆಪ್ಟೆಂಬರ್ 29ರಂದು ಪ್ರತಿಭಟನೆಗೆ ಮಾತ್ರ ಅವಕಾಶವಿದೆ. ಯಾರಾದರೂ ಬಂದ್ ಆಚರಿಸುವಂತೆ ಬಲವಂತ ಮಾಡಿದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಗುರುವಾರ ಹೇಳಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

published on : 28th September 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9