ರಾಜ್ಯಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ: ಮಹಿಳಾ ಅಧಿಕಾರಿಯ ಸೋದರ ಮತ್ತು ಬೆಂಗಳೂರು ಡಿಸಿ ಹೇಳಿದ್ದೇನು?
ಭಾನುವಾರ ಬೆಂಗಳೂರು ಜನತೆಗೆ ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗಣಿ ಭೂ ವಿಜ್ಞಾನ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಪ್ರತಿಮಾ(37ವ) ಕೊಲೆ ಘಟನೆಗೆ ಸಂಬಂಧಿಸಿದಂತೆ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.