Bihar, AP

ಬಿಹಾರದ 17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ, 16 ಸ್ಥಾನಗಳಲ್ಲಿ ಜೆಡಿಯು, ಐದರಲ್ಲಿ ಎಲ್‌ಜೆಪಿ ಸ್ಪರ್ಧೆ
ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿಯು 16 ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) 5 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಬೆಂಗಳೂರು: ಬಿಹಾರ ಮೂಲದ ಬಾಲ್ಯವಿವಾಹ ಸಂತ್ರಸ್ತೆ ಆತ್ಮಹತ್ಯೆಗೆ ಶರಣು; ಪತಿ ಬಂಧನ
ಬಾಲ್ಯವಿವಾಹಕ್ಕೆ ತುತ್ತಾಗಿದ್ದ ಬಿಹಾರ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಪತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ನೀಲಂ ಕುಮಾರಿ ಎಂದು ಗುರುತಿಸಲಾಗಿದ್ದು, ಮಾರ್ಚ್ 13 ರಂದು ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮದುವೆ ಮುಗಿಸಿ ಬರುತ್ತಿದ್ದವರು ಮಸಣಕ್ಕೆ: ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ, ಮೂವರು ಮಕ್ಕಳು ಸೇರಿದಂತೆ 7 ಮಂದಿ ದುರ್ಮರಣ
ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ತಾಯಿ ಸತ್ತಾಗ ತಲೆ ಬೋಳಿಸಿಕೊಳ್ಳದ ಪ್ರಧಾನಿ ಮೋದಿ ನಿಜವಾದ ಹಿಂದೂ ಅಲ್ಲ- ಲಾಲು ಪ್ರಸಾದ್ ಯಾದವ್

ಇನ್ನು ಮುಂದೆ ಎನ್‌ಡಿಎನಲ್ಲೇ ಶಾಶ್ವತವಾಗಿ ಇರುತ್ತೇನೆ: ಪ್ರಧಾನಿ ಮೋದಿ ರ‍್ಯಾಲಿಯಲ್ಲಿ ನಿತೀಶ್ ಕುಮಾರ್
ನಿತೀಶ್ ಭರವಸೆ: ಎನ್‌ಡಿಎ ಜೊತೆ ಶಾಶ್ವತ ಸಂಬಂಧ, ಬಿಹಾರದ ಅಭಿವೃದ್ಧಿಗೆ ಹೊಸ ಚಿಗುರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎನಲ್ಲಿ ಶಾಶ್ವತವಾಗಿ ಇರುವುದಾಗಿ ಭರವಸೆ ನೀಡಿದ್ದಾರೆ.

ಲಾಲು ಬೆಂಬಲಿಗ ಎನ್‌ಡಿಎಗೆ ಸೇರ್ಪಡೆ; ಆರ್ ಜೆಡಿ ತೊರೆದ ಐದನೇ ಶಾಸಕ
ಆರ್ ಜೆಡಿ ಶಾಸಕ ಭರತ್ ಬಿಂದ್ ಅವರು ಶುಕ್ರವಾರ ಬಿಹಾರ ವಿಧಾನಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ ಸದಸ್ಯರೊಂದಿಗೆ ಕುಳಿತುಕೊಳ್ಳುವ ಮೂಲಕ ಮತ್ತೊಂದು ಆಘಾತ ನೀಡಿದ್ದಾರೆ.

ಬಿಹಾರ: ಜನವಿಶ್ವಾಸ ಯಾತ್ರೆ ವೇಳೆ ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ
ಜನ ವಿಶ್ವಾಸ ಯಾತ್ರೆ ವೇಳೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಬಿಹಾರ: ಟ್ರಕ್-ಜೀಪ್-ಬೈಕ್ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಸಾವು
ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಜನ ಸಾವು.

ಬಿಹಾರದ ಲಖಿಸರಾಯ್‌ನಲ್ಲಿ ಆಟೋರಿಕ್ಷಾ-ಟೆಂಪೊ ಡಿಕ್ಕಿ: 9 ಮಂದಿ ಸಾವು
ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಅಪರಿಚಿತ ವಾಹನವೊಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟು ಆರು ಮಂದಿ ಗಾಯಗೊಂಡಿದ್ದಾರೆ.

