• Tag results for bjp

ಕಾರ್ಯಕರ್ತರು ತಾನಾಜಿ ಸಾವಂತ್ ಕಚೇರಿ ಧ್ವಂಸಗೊಳಿಸಿದ್ದು, ಠಾಕ್ರೆಗೆ ಮೋಸ ಮಾಡಿದ ಎಲ್ಲರೂ ಇದೇ ಕ್ರಮ ಎದುರಿಸಲಿದ್ದಾರೆ: ಸಂಜಯ್ ರಾವತ್

ತಾನಾಜಿ ಸಾವಂತ್ ಅವರ ಕಚೇರಿಯನ್ನು ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದು, ಉದ್ಧವ್ ಠಾಕ್ರೆಗೆ ಮೋಸ ಮಾಡಿದ ಎಲ್ಲಾ ಶಾಸಕರೂ ಇದೇ ರೀತಿಯ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಶನಿವಾರ ಹೇಳಿದ್ದಾರೆ.

published on : 25th June 2022

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಗೊಂದಲದ ನಡುವೆಯೇ ಶಿವಸೇನೆಯಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ಸರ್ಕಾರ ರಕ್ಷಿಸಲು ಯತ್ನ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರವನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ಶನಿವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.

published on : 25th June 2022

'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್

ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

published on : 24th June 2022

ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ಸಹಿಸಿಕೊಳ್ಳಲು ಕಷ್ಟವೇಕೆ? ನಿಮಗೆ ದೇವರಾಜ್ ಅರಸು ರೀತಿ ಕೆಲಸ ಮಾಡಲು ಸಾಧ್ಯವೇ?

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಎನ್‌ಡಿಎ ನಿರ್ಧಾರ ಸಾಮಾಜಿಕ ನ್ಯಾಯವಲ್ಲ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

published on : 24th June 2022

ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ, ಬೇರೆ ಪಕ್ಷ ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳುತ್ತಿಲ್ಲ: ಮಹಾ ಆಪರೇಷನ್ ಕಮಲಕ್ಕೆ ಕುಮಾರಸ್ವಾಮಿ ಕಿಡಿ

ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಹಾರಾಷ್ಟ್ರ ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

published on : 23rd June 2022

ಮಹಾರಾಷ್ಟ್ರ ಸರ್ಕಾರ ಅಸ್ಥಿರತೆಗೆ ಬಿಜೆಪಿ ಪ್ರಯತ್ನ- ಮಲ್ಲಿಕಾರ್ಜುನ ಖರ್ಗೆ

ಮಹಾರಾಷ್ಟ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

published on : 23rd June 2022

‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸಾಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’

ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

published on : 23rd June 2022

ಮಹಾರಾಷ್ಟ್ರ ಸರ್ಕಾರ ಕಗ್ಗಂಟು: ಸಿಎಂ ಉದ್ಧವ್ ಗೆ ಮತ್ತಷ್ಟು ಸಂಕಷ್ಟ, ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ, ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ತಂತ್ರ!

ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. 

published on : 23rd June 2022

'ಅಗ್ನಿಫಥ್' ಯೋಜನೆಗೆ ವಿರೋಧ ಸಲ್ಲದು: ತಮ್ಮ ಸಹೋದರನ ಪುತ್ರನ ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ; ಎಸ್ ಎಂ ಕೃಷ್ಣ

ಸೇನೆಗೆ ಅಲ್ಪಾವಧಿಗೆ ಯುವಕರ ನೇಮಕಾತಿ ‘ಅಗ್ನಿಪಥ್’ ಯೋಜನೆಯನ್ನು ಶ್ಲಾಘಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಯೋಜನೆಗೆ ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

published on : 23rd June 2022

ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಹಾದಿ ಬಿಜೆಡಿ ಬೆಂಬಲದೊಂದಿಗೆ ಸುಗಮ!

ಬಿಜೆಪಿ ನೇತೃತ್ವದ ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ನಾಮನಿರ್ದೇಶನ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದು ತಮ್ಮ ರಾಜ್ಯದ ಜನತೆಗೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

published on : 22nd June 2022

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ: ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿ

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

published on : 22nd June 2022

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ, ವಿರೋಧ ಪಕ್ಷಗಳನ್ನು ತೆಗಳುವುದೇ ಬಿಜೆಪಿ ಜಾಯಮಾನ: ಮೋದಿ ತೆಗಳಿ ನೆಹರೂ ಹೊಗಳಿದ ಹೆಚ್ ಡಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

published on : 22nd June 2022

ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ: ಪ್ರಧಾನಿ ಮೋದಿ

ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 21st June 2022

ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆ!

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.

published on : 21st June 2022

ಬಿಜೆಪಿಯವರು ಎಷ್ಟು ಮಂದಿ ತಮ್ಮ ಮಕ್ಕಳನ್ನು ಅಗ್ನಿಪಥಕ್ಕೆ ಕಳುಹಿಸುತ್ತಿದ್ದಾರೆ?: ಅಖಿಲೇಶ್ ಯಾದವ್ ಪ್ರಶ್ನೆ

ಸೇನಾ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಯುವಕರಿಗೆ ಮಾಡಿದ ಅವಮಾನ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. 

published on : 21st June 2022
1 2 3 4 5 6 > 

ರಾಶಿ ಭವಿಷ್ಯ