social_icon
  • Tag results for blast

ಪಶ್ಚಿಮ ಬಂಗಾಳ: ಬಿರ್ಭೂಮ್‌ನಲ್ಲಿ ಬಾಂಬ್ ಸ್ಫೋಟ, ಇಬ್ಬರು ಟಿಎಂಸಿ ಕಾರ್ಯಕರ್ತರು ಸಾವು

ಪಂಚಾಯತ್ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ಮೋಟಾರ್ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಾಂಬ್ ಎಸೆದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ...

published on : 6th February 2023

ಖ್ವೆಟ್ಟಾದಲ್ಲಿ ಸ್ಟೋಟ, ಸುರಕ್ಷಿತ ಸ್ಥಳಕ್ಕೆ ಪಾಕ್ ಕ್ರಿಕೆಟಿಗರ ಸ್ಥಳಾಂತರ

ಪಾಕ್ ಆಟಗಾರರು ಆಡುತ್ತಿದ್ದ ಮೈದಾನದ ಕೆಲವು ಮೈಲುಗಳ ಅಂತರದಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ನಾಯಕ ನಾಯಕ ಬಾಬರ್ ಅಜಮ್ ಮತ್ತು ಶಾಹಿದ್ ಅಫ್ರಿದಿ ಸೇರಿದಂತೆ ಟಾಪ್ ಆಟಗಾರರನ್ನು ಭಾನುವಾರ  ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.

published on : 5th February 2023

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ; ಟಿಎಂಸಿ ಕಾರ್ಯಕರ್ತ ಬಲಿ, ಪಂಚಾಯತಿ ಮುಖ್ಯಸ್ಥನ ಸಹೋದರನಿಗೆ ಗಾಯ

ಬಿರ್ಭೂಮ್ ಜಿಲ್ಲೆಯ ಮಾರ್ಗ್ರಾಮ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಸಾವಿಗೀಡಾಗಿದ್ದು, ಆಡಳಿತ ಪಕ್ಷದ ಪಂಚಾಯತ್ ಮುಖ್ಯಸ್ಥನ ಸಹೋದರನಿಗೆ ಗಾಯವಾಗಿದೆ.

published on : 5th February 2023

ಇಂಫಾಲ: ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟ

ಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

published on : 4th February 2023

ಪಾಕ್ ನಲ್ಲಿ ಉಗ್ರರ ಅಟ್ಟಹಾಸ: ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 46 ಮಂದಿ ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!

ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

published on : 30th January 2023

ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣ; ವಿಚಾರಣಾಧೀನ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ

ಮಲ್ಲೇಶ್ವರಂ ಸ್ಫೋಟದ ಆರೋಪಿ ಮತ್ತು ವಿಚಾರಣಾಧೀನ ಕೈದಿ (ಯುಟಿಪಿ) ತಮಿಳುನಾಡು ಮೂಲದ ಸೈಯದ್ ಅಲಿ (35) ಎಂಬಾತನ ಮೇಲೆ ಐವರು ಸಹ ಕೈದಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

published on : 30th January 2023

ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್‌ಐಎ

ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.

published on : 29th January 2023

ಜಮ್ಮು-ಕಾಶ್ಮೀರ: ಬಾಂಬ್ ಸ್ಫೋಟ ಘಟನೆ ನಡುವೆ ಭದ್ರತೆಯೊಂದಿಗೆ ಭಾರತ್ ಜೋಡೋ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ 

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದ ಮರುದಿನ ಬಿಗಿ ಭದ್ರತೆಯೊಂದಿಗೆ ಕಾಂಗ್ರೆಸ್ ನಾಯಕ ಭಾರತ್ ಜೋಡೋ ಯಾತ್ರೆಯನ್ನು ಜಮ್ಮು-ಕಾಶ್ಮೀರದ ಕತುವಾ ಜಿಲ್ಲೆಯ ಹಿರನ್ ನಗರದಿಂದ ಪುನಾರಂಭ ಮಾಡಿದ್ದಾರೆ.

published on : 22nd January 2023

ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 22nd January 2023

ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯ

ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

published on : 21st January 2023

ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಅವಳಿ ಸ್ಫೋಟ: 6 ಮಂದಿಗೆ ಗಾಯ

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

published on : 21st January 2023

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

published on : 13th January 2023

ಶಿವಮೊಗ್ಗದಲ್ಲಿ ಇಡಿ ದಾಳಿ: ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಬುಧವಾರ ತಿಳಿದುಬಂದಿದೆ.

published on : 11th January 2023

ಹಾಸನ: ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ, ಮೂವರು ಪ್ರಾಣಾಪಾಯದಿಂದ ಪಾರು, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ

ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸಿ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಹಾಸನದಲ್ಲಿ ನಡೆದಿದೆ.

published on : 11th January 2023

ಲೂಧಿಯಾನ ಕೋರ್ಟ್ ಸ್ಫೋಟ:  ಪಾಕ್ ಪ್ರಜೆ ಸೇರಿದಂತೆ ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

2021ರ ಡಿಸೆಂಬರ್‌ನಲ್ಲಿ ಲೂಧಿಯಾನ ನ್ಯಾಯಾಲಯದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಪ್ರಜೆ ಸೇರಿದಂತೆ ಐವರ ವಿರುದ್ಧ ಎನ್ ಐಎ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 8th January 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9