BY Vijayendra

ಬಿಜೆಪಿ ರಾಜ್ಯಾಧ್ಯಕ್ಷ-ಎಚ್ಡಿಕೆ ಭೇಟಿ; ಮ್ಯಾಜಿಕ್ ಮರಳಿ ತರುವ ಜವಾಬ್ದಾರಿ ವಿಜಯೇಂದ್ರ-ನಿಖಿಲ್ ಹೆಗಲಿಗೆ!
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಜೆಡಿಎಸ್ ಎರಡೂ ಒಟ್ಟಾಗಿ 2006ರಲ್ಲಿ ತಾವು ಮತ್ತು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಜಂಟಿಯಾಗಿ ರೂಪಿಸಿದ ಅಭಿವೃದ್ಧಿಯ 'ಸುವರ್ಣ ಯುಗ'ವನ್ನು ಮರಳಿ ತರುತ್ತವೆ ಎಂದು ಭಾನುವಾರ ಆಶಿಸಿದರು.

ಸಂವಿಧಾನ ದಿನಾಚರಣೆ: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆರಂಭಿಸಿರುವ ಖಾತರಿ ಯೋಜನೆಗಳನ್ನು ಬಿಜೆಪಿ ನಾಯಕರಾದ ವಿವೈ ವಿಜಯೇಂದ್ರ, ಸಿಟಿ ರವಿ ಮತ್ತು ಗೋವಿಂದ ಕಾರಜೋಳ ಭಾನುವಾರ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಸಂವಿಧಾನ ದಿನಾಚರಣೆ’ ನಿಮಿತ್ತ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಜಯೇಂದ್ರ ಹೂಗುಚ್ಚ ನೀಡಿ ನಾಟಕೀಯ ಪೋಸ್ ಕೊಡೋದು ಬೇಡ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಕಿಡಿ
ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ.

ದಲಿತರನ್ನು ಕೇವಲ ಮತ ಬ್ಯಾಂಕಾಗಿ ನೋಡಿದ ಕಾಂಗ್ರೆಸ್, ಆ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ವಿಜಯೇಂದ್ರ ಪ್ರಶ್ನೆ
ಸ್ವಾತಂತ್ರ್ಯಾನಂತರ ಚುನಾವಣೆ ವೇಳೆ ಡಾ. ಅಂಬೇಡ್ಕರ್ ಅವರ ಹೆಸರಿನೊಂದಿಗೆ ಮತ ಕೇಳಿ ಸುಮಾರು 50-55 ವರ್ಷ ನಿರಂತರವಾಗಿ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ದಲಿತ ಸಮುದಾಯವನ್ನು ಮೇಲೆತ್ತಲು 50-60 ವರ್ಷಗಳು ಬೇಕೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರನ್ನು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ: ಬಿಜೆಪಿ ವಿರುದ್ಧ ಅರವಿಂದ ಲಿಂಬಾವಳಿ ಕಿಡಿ
ಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ .

ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರನ್ನು ರೋಮ್ ದೊರೆ ನೀರೋಗೆ ಹೋಲಿಸಿದ ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರೋಮ್ ದೊರೆ ನೀರೋಗೆ ಹೋಲಿಸಿದ್ದು, ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ಇಡೀ ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಮೋಜು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ: ಬಸನಗೌಡ ಪಾಟೀಲ್ ಯತ್ನಾಳ್ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದ ಬಿವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ತಮ್ಮನ್ನು ಪರಿಗಣಿಸಿರುವುದರ ವಿಚಾರವಾಗಿ ಪಕ್ಷದ ಒಂದು ವರ್ಗದ ನಾಯಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿರುವ ನಡುವೆ, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ಕರ್ನಾಟಕ ರಾಜಕೀಯ: ಕುಟುಂಬ ರಾಜಕಾರಣ ಎಂಬ ಟೀಕೆ ಇನ್ಮುಂದೆ ಮಹತ್ವ ಕಳೆದುಕೊಳ್ಳುವ ಸಾಧ್ಯತೆ!
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕವಾಗಿದ್ದು, ಅದರ ಮಿತ್ರ ಪಕ್ಷ ಜೆಡಿಎಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದರಿಂದ ಕರ್ನಾಟಕ ರಾಜಕೀಯದಲ್ಲಿ ಕುಟುಂಬ ರಾಜಕಾರಣ ವಿಶಿಷ್ಠ ಸ್ಥಾನ ಪಡೆದಿದೆ.

