social_icon
  • Tag results for cancelled

ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?

ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.

published on : 10th December 2022

ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಭಾರೀ ಮಳೆ, ಹಲವು ವಿಮಾನಗಳು ರದ್ದು

ಮಾಂಡೌಸ್ ಚಂಡಮಾರುತವು ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ ಮತ್ತು ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ.

published on : 9th December 2022

ಬೆಂಗಳೂರು ಶೋ ರದ್ದು; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ರನ್ನು ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಪ್ರದರ್ಶನವನ್ನು ರದ್ದುಗೊಳಿಸಲಾಗಿತ್ತು.

published on : 11th November 2022

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

published on : 23rd October 2022

ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹಾಸ್ಯ ಕಾರ್ಯಕ್ರಮ ಮತ್ತೆ ರದ್ದು

ಶನಿವಾರ ನಗರದಲ್ಲಿ ನಡೆಯಬೇಕಿದ್ದ ಕಾಮಿಡಿಯನ್ ಮುನಾವರ್ ಫಾರೂಕಿ ಅವರ  ಹಾಸ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಬೆಂಗಳೂರು ಪೊಲೀಸರು ಮತ್ತೆ ನಿರಾಕರಿಸಿದ್ದಾರೆ. 

published on : 20th August 2022

ಕೆಲವು ಕೇಂದ್ರಗಳಲ್ಲಿ ಸಿಯುಇಟಿ ರದ್ದು: ಯುಜಿಸಿ ಮುಖ್ಯಸ್ಥರು ಹೇಳಿದ್ದು ಹೀಗೆ 

ಕೆಲವು ಕೇಂದ್ರಗಳಲ್ಲಿ ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ) ರದ್ದುಗೊಳಿಸಿದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಯುಜಿಸಿ ಅಧ್ಯಕ್ಷ ಎಂ ಜಗದೀಶ್ ಕುಮಾರ್, ವಿಧ್ವಂಸಕದ ಸೂಚನೆಗಳಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ ಎಂದು ಭಾನುವಾರ ಹೇಳಿದ್ದಾರೆ.

published on : 8th August 2022

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

published on : 29th July 2022

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ

ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

published on : 20th June 2022

300 ರೈಲುಗಳ ಮೇಲೆ ಅಗ್ನಿಪಥ್ ಪ್ರತಿಭಟನೆಯ ಪರಿಣಾಮ: 200 ರೈಲುಗಳು ರದ್ದು 

ಸೇನಾ ಸೇವೆಗಳಿಗೆ ನೇಮಕಾತಿ ಮಾಡುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹೊತ್ತಿಸುತ್ತಿರುವ ಪರಿಣಾಮ 200 ರೈಲುಗಳನ್ನು ಈ ವರೆಗೆ ಸ್ಥಗಿತಗೊಳಿಸಲಾಗಿದೆ. 

published on : 18th June 2022

ಕೆರೆಗಳ ಜಾಗದಲ್ಲಿ ವಸತಿ ನಿರ್ಮಾಣ: ಸಿಎಂ ಬೊಮ್ಮಾಯಿ ಆದೇಶದ ಮೇರೆಗೆ ಅಧಿಸೂಚನೆ ರದ್ದುಪಡಿಸಿದ ಬಿಡಿಎ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಮೇ 12 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಗುರುವಾರ ರದ್ದುಪಡಿಸಿದ್ದಾರೆ.

published on : 20th May 2022

ಕಲ್ಲಿದ್ದಲು ಸಮಸ್ಯೆ: ವಿದ್ಯುತ್ ಅಭಾವ ನೀಗಿಸಲು 657 ರೈಲುಗಳ ಸಂಚಾರ ರದ್ದುಗೊಳಿಸಿದ ಕೇಂದ್ರ

ಕಲ್ಲಿದ್ದಲು ಕೊರತೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಕ್ಕಟ್ಟು ಗಮನದಲ್ಲಿಟ್ಟುಕೊಂಡು, ಕಲ್ಲಿದ್ದಲು ಸಕಾಲದಲ್ಲಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 657 ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲು...

published on : 29th April 2022

ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ: 45 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಆತಂತ್ರ

1948ರ ನಂತರ ಈ ಪ್ರಮಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಇದೇ ಮೊದಲು. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂ. ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು.

published on : 20th March 2022

ಉತ್ತರಪ್ರದೇಶ: ಮಾಜಿ ಶಾಸಕ ಸೋನು ಸಿಂಗ್ ಶಸ್ತ್ರಾಸ್ತ್ರ ದುರ್ಬಳಕೆ ಸಾಬೀತು; ಪರವಾನಗಿ ರದ್ದು

2006ರಲ್ಲಿ ನಡೆದ ಸಂತ ಗ್ಯಾನೇಶ್ವರ್ ಮತ್ತು ಅವರ 7 ಮಂದಿ ಶಿಷ್ಯಂದಿರ ಹತ್ಯೆ ಪ್ರಕರಣದಲ್ಲಿ ಸೋನು ಸಿಂಗ್ ಅವರ ಹೆಸರೂ ಕೇಳಿಬಂದಿತ್ತು.

published on : 31st January 2022

ಕೋವಿಡ್-19 ಭೀತಿ: ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ರದ್ದು

ಮ್ಯಾಂಚೆಸ್ಟರ್ ನಲ್ಲಿ ಸೆ.10 ರಂದು ಪ್ರಾರಂಭವಾಗಬೇಕಿದ್ದ ಭಾರತ-ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿನ ಟೆಸ್ಟ್ ಪಂದ್ಯ ಕೋವಿಡ್-19 ಭೀತಿಯಿಂದಾಗಿ ರದ್ದುಗೊಂಡಿದೆ.

published on : 10th September 2021

ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿ

ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

published on : 9th June 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9