Centre

ವಿದ್ಯುತ್ ಸರಬರಾಜಿನಲ್ಲಿ ಸ್ಪರ್ಧಾತ್ಮಕತೆ ತರಲು ಖಾಸಗಿ ವಿದ್ಯುತ್ ಸರಬರಾಜು ಕಂಪನಿಗಳು ಅಗತ್ಯ: ಇಂಧನ ಸಚಿವ ಆರ್.ಕೆ.ಸಿಂಗ್
ಸರ್ಕಾರವು ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿಲ್ಲ. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಲು ಸ್ಪರ್ಧೆಯನ್ನು ಬೆಳೆಸಲು ವೇದಿಕೆಯನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ಇಂಧನ, ನವೀನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, 3 ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ವಿರುದ್ಧದ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಭರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದರು.

ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ: ಸುಪ್ರೀಂಗೆ ಕೇಂದ್ರ ಮಾಹಿತಿ
2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.

ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದಿಂದ ಅಕ್ಷಯ್ ಕುಮಾರ್, ಐಶ್ವರ್ಯ ರೈ ಬಳಕೆ: ರಾಹುಲ್ ಗಾಂಧಿ
ಕೇಂದ್ರ ಸರ್ಕಾರ ಜನರ ಗಮನ ಬೇರೆಡೆ ಸೆಳೆದು ಲೂಟಿ ಮಾಡುವ ಮೂಲಕ ಸಾಮೂಹಿಕ ಪಿಕ್ ಪಾಕೆಂಟಿಂಗ್ ನಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸೇವೆಗಳ ನಿಯಂತ್ರಣ ವಿಚಾರದಲ್ಲಿ ದೆಹಲಿ-ಕೇಂದ್ರ ಸರ್ಕಾರ ನಡುವೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ-ದೆಹಲಿ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದದ್ದು, ವಿವಾದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಕೋವಿಶೀಲ್ಡ್ ಬೂಸ್ಟರ್ ಡೋಸ್'ಗೆ ಹೆಚ್ಚಿದ ಬೇಡಿಕೆ: ರಾಜ್ಯದ ಲಸಿಕೆ ಮನವಿಗೆ ಇನ್ನೂ ಪ್ರತಿಕ್ರಿಯಿಸದ ಕೇಂದ್ರ ಸರ್ಕಾರ
ವಿದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೊಳಗಾಗಿರುವ ಜನತೆ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಆದರೆ, ಈ ನಡುವೆ ಲಸಿಕೆಗಳ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರ 30 ಲಕ್ಷ ಡೋಸ್ ಲಸಿಕೆಗಳಿಗೆ ಬೇಡಿಕೆ ಮುಂದಿಟ್ಟಿದ್ದರೂ ಕೇಂದ್ರದಿಂದ ಮಾತ್ರ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆಗಳು ಬಂದಿಲ್ಲ ಎನ್ನಲಾಗಿದೆ.

ರಾಜ್ಯದ 30 ಲಕ್ಷ ಬೂಸ್ಟರ್ ಡೋಸ್ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲ: ಅಧಿಕಾರಿಗಳು
ಕೋವಿಡ್ -19 ಲಸಿಕೆ ಡೋಸ್ಗಳ ವಿತರಣೆಯ ಪ್ರಮಾಣ ಮತ್ತು ಸಮಯದ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಕಾದು ಕುಳಿತಿದೆ.

ಒಆರ್ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್
ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ-ಒಂದು ಪಿಂಚಣಿ(ಒಆರ್ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15 ರವರೆಗೆ ಕಾಲಾವಕಾಶ ನೀಡಿದೆ.

