• Tag results for chamarajanagara

ಚಾಮರಾಜನಗರಕ್ಕೆ ಬರದೇ ಇರುತ್ತಿದ್ದರೆ ನನ್ನ ಕರ್ತವ್ಯ ಲೋಪವಾಗುತ್ತಿತ್ತು: ಸಿಎಂ ಬಸವರಾಜ ಬೊಮ್ಮಾಯಿ

ಜಿಲ್ಲೆಗೆ ಬರುವುದು ನನ್ನ ಕರ್ತವ್ಯ. ನನ್ನ ಕೆಲಸ, ಚಾಮರಾಜನಗರದ ಜನಕಲ್ಯಾಣ ಮಾಡುವುದು ನನ್ನ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 8th October 2021

ರಾಜಕೀಯ ನಾಯಕರನ್ನು ಕಾಡುತ್ತಿರುವ 'ಚಾಮರಾಜನಗರ ಭೀತಿ': ಅಧಿಕಾರದಲ್ಲಿರುವಾಗ ಜಿಲ್ಲೆಗೆ ಭೇಟಿ ಕೊಡಲು ಹಿಂದೇಟು 

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ನಾಲ್ಕು ದಿನಗಳು ಕಳೆದ ನಂತರ ಬಿ ಎಸ್ ಯಡಿಯೂರಪ್ಪನವರು ಹೆಲಿಕಾಪ್ಟರ್ ನಲ್ಲಿ ನಿನ್ನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ್ದರು.ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ಬೇಸತ್ತು ಅಭಿಮಾನಿ ರವಿ ಆತ್ಮಹತ್ಯೆ ಮಾಡಿಕೊಂಡಿದ್ದ.

published on : 31st July 2021

ಚಾಮರಾಜನಗರ: ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ ಆರ್ಥಿಕ ನೆರವು; ಸಂಪುಟ ರಚನೆಯಲ್ಲಿ ಹಸ್ತಕ್ಷೇಪವಿಲ್ಲ ಎಂದ ಮಾಜಿ ಸಿಎಂ

ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ.

published on : 30th July 2021

ಯಡಿಯೂರಪ್ಪ ಪದತ್ಯಾಗದ ಮೂಲಕ ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ದೂರ?  ಸಿಎಂ ರಾಜಿನಾಮೆಯಿಂದ ಜಿಲ್ಲೆಯ ಜನರಿಗೆ ಸಂತೋಷ!

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರು ರಾಜಿನಾಮೆ ನೀಡಿದ್ದರಿಂದ ಅವರ ಬೆಂಬಲಿಗರಿಗೆ ತೀವ್ರ ನಿರಾಶೆಯಾಗಿದೆ. ಆದರೆ ವಿಶೇಷ ಕಾರಣಕ್ಕಾಗಿ ಚಾಮರಾಜನಗರ ಜಿಲ್ಲೆ ಜನರಿಗೆ ಸಂತಸ ಉಂಟಾಗಿದೆ.

published on : 28th July 2021

ಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್

ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ‌ ಅದೇನು ಶಾಶ್ವತ ಅಲ್ಲ‌ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ. 

published on : 5th July 2021

ಚಾಮರಾಜನಗರ: ಮೊಮ್ಮಕ್ಕಳಿಗೆ ಕೊರೋನಾ ಸೋಂಕು ಹರಡುವ ಭೀತಿಗೆ ಹೆದರಿ ವೃದ್ಧೆ ನೇಣಿಗೆ ಶರಣು

ತನಗೆ‌ ಬಂದ ಕೊರೋನಾ ಸೋಂಕು ಮೊಮ್ಮಕ್ಕಳಿಗೂ ಹರಡಬಹುದು ಎಂದು ಹೆದರಿದ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ನಡೆದಿದೆ.

published on : 10th May 2021

ಮೈಸೂರು ಹಾಗೂ ನೆರೆಹೊರೆಯ ಜಿಲ್ಲೆಗಳಿಗೆ ಸರ್ಕಾರದಿಂದಲೇ ಆಕ್ಸಿಜನ್ ಹಂಚಿಕೆ: ಸಚಿವ ಎಸ್.ಟಿ. ಸೋಮಶೇಖರ್

ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

published on : 10th May 2021

ಸಂಸದ ತೇಜಸ್ವಿ ಸೂರ್ಯ ಮೇಲೆ ಯಾಕಿಂಥ ದಾಳಿ? ಮಂಡ್ಯ-ಚಾಮರಾಜನಗರ ನಮ್ಮ ಸೋದರ ಜಿಲ್ಲೆಗಳು: ಪ್ರತಾಪ್ ಸಿಂಹ 

ಬೆಡ್ ಬುಕ್ಕಿಂಗ್ ದಂಧೆ ಬಯಲಿಗೆಳೆದ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ಅಭಿನಂದಿಸುವ ಬದಲು ಕುಂಟು ನೆಪ ಇಟ್ಟುಕೊಂಡು ಅವರ ವಿರುದ್ಧ ದಾಳಿ ನಡೆಸುತ್ತಿರುವುದು ಏಕೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

published on : 8th May 2021

ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ: ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ 24 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ ಎ ಪಾಟೀಲ್ ಅವರ ನೇತೃತ್ವದ ತನಿಖಾ ಆಯೋಗವನ್ನು ನೇಮಿಸಿದೆ.

published on : 5th May 2021

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ, ಮಾಹಿತಿ ಸಂಗ್ರಹ

24 ರೋಗಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಚಾಮರಾಜನಗರದ  ಜಿಲ್ಲಾಸ್ಪತ್ರೆಗೆ ಸರ್ಕಾರ ನೇಮಿಸಿರುವ ತನಿಖಾಧಿಕಾರಿ ಶಿವಯೋಗಿ ಕಳಸದ್ ಇಂದು ಭೇಟಿ ನೀಡಿದ್ದಾರೆ.

published on : 4th May 2021

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟು ಘೋರ ದುರಂತ ಸಂಭವಿಸಿದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ.

published on : 3rd May 2021

ಚಾಮರಾಜನಗರ ಕೊರೋನಾ ರೋಗಿಗಳ ಸಾವಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಷ್ಠೆ ಕಾರಣ?

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಕೊರೋನಾ ರೋಗಿಗಳ ಸಾವನ್ನಪ್ಪಿರುವುದಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿಷ್ಠೆ ಮಾಡಲು ಹೋಗಿ ಕೊರೋನಾ ರೋಗಿಗಳ ಸಾವಿಗೆ ರೋಹಿಣಿ ಸಿಂಧೂರಿ  ಕಾರಣರಾದ್ರಾ ಎಂಬ ಆರೋಪವೂ ಕೇಳಿಬರುತ್ತಿದೆ.

published on : 3rd May 2021

ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ

ಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ.

published on : 12th February 2021

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಜರುಗಿದೆ.

published on : 4th February 2021

ಬಿಳಿಗಿರಿ ರಂಗನಾಥ ಸ್ವಾಮಿ, ಚಾಮರಾಜೇಶ್ವರ ಬ್ರಹ್ಮರಥ ನಿರ್ಮಾಣ ಕಾರ್ಯ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್

ಬಿಳಿಗಿರಿ ರಂಗನಾಥಸ್ವಾಮಿ ಹಾಗೂ ಚಾಮರಾಜನಗರದ  ಚಾಮರಾಜೇಶ್ವರ ದೇವರ ಬ್ರಹ್ಮರಥ ನಿರ್ಮಾಣ ಕಾರ್ಯವನ್ನು ಪ್ರಾಥಮಿಕ ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಇಂದು ಬೆಂಗಳೂರಿನಲ್ಲಿ ಪರಿಶೀಲಿಸಿ ಸಾಧ್ಯವಾದಷ್ಟು ಶೀಘ್ರವೇ ಪೂರ್ಣಗೊಳಿಸಬೇಕೆಂದು ಶಿಲ್ಪಿಗಳಿಗೆ ಸೂಚಿಸಿದರು. 

published on : 2nd February 2021
1 2 > 

ರಾಶಿ ಭವಿಷ್ಯ