Corona Virus

ಕೊರೋನಾ ಸೋಂಕಿತರ ಹೆಚ್ಚಳ: ಜೂನ್ 16, 17ರಂದು ಸಿಎಂಗಳ ಜೊತೆ ಮೋದಿ ಮೆಗಾ ವಿಡಿಯೋ ಕಾನ್ಫರೆನ್ಸ್!
ದೇಶಾದ್ಯಂತ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೆಗಾ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಕೊರೋನಾ ವೈರಸ್: ಭಾರತದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದೆ.

ಕೊರೋನಾ ವೈರಸ್ ಎಫೆಕ್ಟ್: ಪ್ರಮುಖ ಪರೀಕ್ಷಾ ಸಾಮಗ್ರಿಗಳ ರಫ್ತಿಗೆ ತಾತ್ಕಾಲಿಕ ನಿಷೇಧ ಹೇರಿದ DGFT
ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಅತ್ತ ಕೇಂದ್ರ ವಿದೇಶಿ ವ್ಯಾಪಾರ ನಿರ್ದೇಶನಾಲಯ ದೇಶದಲ್ಲಿ ತಯಾರಾಗುವ ಪ್ರಮುಖ ಪರೀಕ್ಷಾ ಕಿಟ್ ಗಳ ರಫ್ತಿಗೆ ತಾತ್ಕಾಲಿಕ ನಿಷೇಧ ಹೇರಿದೆ.

ತೆಲಂಗಾಣ ಬಳಿಕ ತಮಿಳುನಾಡು, ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಇದೇ ನಡೆಯನ್ನು ಅನುಸರಿಸಿರುವ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೂ ಕೂಡ 10ನೇ ತರಗತಿ ಪರೀಕ್ಷೆ ರದ್ದುಮಾಡಿದ್ದು, ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಿದೆ.

ಕೊರೋನಾ ಎಫೆಕ್ಟ್: ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್!
ಮಾರಕ ಕೊರೋನಾ ವೈರಸ್ ದೇಶಾದ್ಯಂತ ಶಿಕ್ಷಣ ವ್ಯವಸ್ಥೆಯನ್ನೇ ತಲೆಕೆಳಗು ಮಾಡಿದ್ದು, ಇದೀಗ ತೆಲಂಗಾಣ ಸರ್ಕಾರ 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಸಾಮೂಹಿಕವಾಗಿ ತೇರ್ಗಡೆ ಮಾಡಿದೆ.

ಐಎಎಸ್ ಅಧಿಕಾರಿ ಪಿಎಗೆ ಸೋಂಕು ದೃಢ ಹಿನ್ನಲೆ ತೆಲಂಗಾಣ ಸಿಎಂ ಕಚೇರಿಗೂ ಕೊರೋನಾ ಭೀತಿ
ತೆಲಂಗಾಣದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ಸ್ವತಃ ಮುಖ್ಯಮಂತ್ರಿಗಳ ಕಚೇರಿಯೇ ತಲ್ಲಣಿಸಿದ್ದು, ಸಿಎಂ ಕಚೇರಿಯ ಸಿಬ್ಬಂದಿಗೇ ಸೋಂಕು ಒಕ್ಕರಿಸಿದೆ.

ದೆಹಲಿಯಲ್ಲಿ ಕೊರೋನಾ ಆರ್ಭಟ; ಮತ್ತೆ 1,007 ಹೊಸ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 29,943ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದೂ ಕೂಡ ದೆಹಲಿಯಲ್ಲಿ 1 ಸಾವಿರಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು: ಕೆಆರ್ ಮಾರುಕಟ್ಟೆ ಪೊಲೀಸ್ ಪೇದೆಗೆ ಕೊರೋನಾ ಸೋಂಕು, 8 ಸಿಬ್ಬಂದಿ ಕ್ವಾರಂಟೈನ್ ಗೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಕ ಕೊರೋನ ವೈರಸ್ ಆರ್ಭಟ ಮುಂದುವರೆದಿದ್ದು, ಕೆಆರ್ ಮಾರುಕಟ್ಟೆ ಪೊಲೀಸ್ ಪೇದೆಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಆನ್ಲೈನ್ ಶಿಕ್ಷಣದ ಬಗ್ಗೆ ಬುಧವಾರ ತೀರ್ಮಾನ; ಎಸ್.ಸುರೇಶ್ ಕುಮಾರ್
ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

