Corona Virus

ತುಮಕೂರು: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ದಂಡ, ತುಮಕೂರಿನಲ್ಲಿ ಇಂದು ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಸೋಂಕು ಪ್ರಸರಣ ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದ್ದು, ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ದಂಡ ಹಾಕಲಾಗಿದೆ.

ಕೊರೋನಾ ವೈರಸ್: ಪಾದರಾಯನಪುರ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಬಂಧನ
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಎಂಬಾತನನ್ನು ಬಂಧಿಸಿದ್ದಾರೆ.

ಮಹತ್ವದ ನಡೆ: ದೇಶದಲ್ಲೇ ಮೊದಲ ಬಾರಿಗೆ ಗುಜರಾತ್ ನಲ್ಲಿ ಕೊರೋನಾ ವೈರಸ್ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ
ಮಾರಕ ಕೊರೋನಾ ವೈರಸ್ ನ ಔಷಧಿಗಾಗಿ ಇಡೀ ವಿಶ್ವವೇ ರೇಸ್ ನಲ್ಲಿ ಮುಳುಗಿದ್ದರೆ, ಇತ್ತ ಗುಜರಾತ್ ರಾಜ್ಯದಲ್ಲಿ ಮೊದಲ ಬಾರಿಗೆ ಕೊರೋನಾ ವೈರಸ್ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತಿದೆ.

ಸಿಹಿ ಸುದ್ದಿ: ಈಶಾನ್ಯ ಭಾರತದ ಐದು ರಾಜ್ಯಗಳು ಕೊರೋನಾ ವೈರಸ್ ಮುಕ್ತ: ಕೇಂದ್ರ ಸರ್ಕಾರ
ಮಹತ್ವದ ಬೆಳವಣಿಗೆಯಲ್ಲಿ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೋನಾ ವೈರಸ್ ನಿಂದ ಮುಕ್ತವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಅಧಿಕೃತ ಘೋಷಣೆ ಮಾಡಿದೆ.

ಪತ್ರಕರ್ತರ ಸಂಘಗಳ ಮನವಿ ಅರ್ಜಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಸಂಬಳ ಕಡಿತ, ಬಲವಂತದ ರಜೆ ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರ ವಿರುದ್ಧ ಪತ್ರಕರ್ತರ ಸಂಘಗಳು ಜಂಟಿಯಾಗಿ ಸಲ್ಲಿಸಿದ್ದ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ವಿವರ ಕೇಳಿ ನೋಟಿಸ್ ಜಾರಿ ಮಾಡಿದೆ.

ಕೊರೋನಾ ವೈರಸ್: ಭಾರತದಲ್ಲಿ ಮತ್ತೆ 1463 ಹೊಸ ಪಾಸಿಟಿವ್ ಪ್ರಕರಣ, 28,380ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 1463 ಹೊಸ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೇರಿದೆ.

ಕೋವಿಡ್-19 ನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ: ಒಡಿಶಾ ಸರ್ಕಾರದ ಮಹತ್ವದ ನಿರ್ಧಾರ
ದೇಶದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್, ಪತ್ರಕರ್ತರು ಮತ್ತು ವೈದ್ಯರನ್ನೂ ಕಾಡುತ್ತಿರುವ ಹಿನ್ನಲೆಯಲ್ಲಿ ಒಡಿಶಾ ಸರ್ಕಾರ ಕೋವಿಡ್-19 ವೈರಸ್ ಸೋಂಕಿನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ವುಹಾನ್ ನ ಎಲ್ ಆಕಾರದ ಕೊರೋನಾ ವೈರಸ್ ನಿಂದ ಗುಜರಾತ್ ನಲ್ಲಿ ಸಾವಿನ ಸಂಖ್ಯೆ ಅಧಿಕ: ತಜ್ಞರು
ಚೀನಾ ದೇಶದ ವುಹಾನ್ ಪ್ರಾಂತ್ಯದಲ್ಲಿ ಕಂಡುಬಂದ ಎಲ್ ಆಕಾರದ ಕೊರೋನಾ ವೈರಸ್ ನಂತಹ ಕೊರೋನಾ ಗುಜರಾತ್ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿರುವುದರಿಂದ ಆ ರಾಜ್ಯದಲ್ಲಿ ಸಾವಿನ ಸಂಖ್ಯೆ ಅಧಿಕವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಆಸ್ಪತ್ರೆಯ 29 ಮಂದಿ ವೈದ್ಯಕೀಯ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಸ್ಯಾನಿಟೈಸೇಷನ್ ಬಳಿಕ ಸೇವೆಗೆ ಮರಳಿದ ಹಿಂದೂರಾವ್ ಆಸ್ಪತ್ರೆ!
ಮಾರಕ ಕೊರೋನಾ ವೈರಸ್ ಗೆ ದೆಹಲಿ ತತ್ತರಿಸಿ ಹೋಗಿದ್ದು, ಸೋಂಕು ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೇ ವೈರಸ್ ಸೋಂಕು ತಗಲುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರಿ ಹಿನ್ನಡೆಯಾಗುವಂತೆ ಮಾಡಿದೆ.

