Corona Virus

ಕೊರೋನಾ ಆರ್ಭಟಕ್ಕೆ ಆಂಧ್ರ ಪ್ರದೇಶ ತತ್ತರ; ಸಂಸದನ ಕುಟುಂಬದ 6 ಸದಸ್ಯರಿಗೆ, ರಾಜಭವನದ 4 ಸಿಬ್ಬಂದಿಗೆ ವೈರಸ್ ಸೋಂಕು!
ಮಾರಕ ಕೊರೋನಾ ವೈರಸ್ ಗೆ ಆಂಧ್ರ ಪ್ರದೇಶ ತತ್ತರಿಸಿ ಹೋಗಿದ್ದು, ಆಡಳಿತಾ ರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಂಸದನ ಕುಟುಂಬದ ಆರು ಸದಸ್ಯರಿಗೆ ಮತ್ತು ರಾಜಭವನದ ಸಿಬ್ಬಂದಿಗೇ ಸೋಂಕು ಕಾಣಿಸಿಕೊಂಡಿದೆ.

ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖವಾಗಿರುವ 'ಪ್ಲಾಸ್ಮಾ ಥೆರಪಿ' ಎಂದರೇನು?
ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕಿಗೆ ಲಸಿಕೆ ಇಲ್ಲದಿರುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ಮಧ್ಯೆ ಪ್ಲಾಸ್ಮಾ ಥೆರಪಿ ಎನ್ನುವ ಚಿಕಿತ್ಸೆ ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಜೀವಿನಿ ರೂಪದಲ್ಲಿ ಕಾಣುತ್ತಿದೆ.

24 ಗಂಟೆಗಳಲ್ಲಿ 13 ಸಾವು, 324 ಹೊಸ ಪಾಸಿಟಿವ್ ಪ್ರಕರಣ; ಮುಂಬೈನಲ್ಲಿ ಕೊರೋನಾ ವೈರಸ್ ಅಬ್ಬರ
ವಾಣಿಜ್ಯ ನಗರಿ ಮುಂಬೈನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 13 ಮಂದಿ ಸೋಂಕಿತರು ಸಾವನ್ನಪ್ಪಿದ್ದರೆ, ಮತ್ತೆ 324ಯಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.

ಕೊರೋನಾ ವೈರಸ್: ದಕ್ಷಿಣ ಕನ್ನಡದಲ್ಲಿ ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಪೂಜಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಲಾಕ್ ಡೌನ್ ಎಫೆಕ್ಟ್; ಧಾರಣೆ ಕುಸಿತ, ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರ
ಕೊರೋನ ವೈರಸ್‌ನಿಂದಾಗಿ ಲಾಕ್ ಡೌನ್ ಆದ ಬಳಿಕ ರೇಷ್ಮೆ ಗೂಡು ಧಾರಣೆ ಕುಸಿತಗೊಂಡಿದ್ದು ಮಂಡ್ಯಜಿಲ್ಲೆಯ ರೇಷ್ಮೆ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೊರೋನಾ ವೈರಸ್: 24 ಗಂಟೆಗಳಲ್ಲಿ 47 ಸಾವು, 1,975 ಹೊಸ ಪಾಸಿಟಿವ್ ಪ್ರಕರಣ, 826ಕ್ಕೇರಿದ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ 26,917
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾರಕ ಕೊರೋನಾ ವೈರಸ್ ಗೆ 47 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 826ಕ್ಕೇರಿದೆ.

ಕೊರೋನಾ ವೈರಸ್: 24 ಗಂಟೆಗಳ ಅವಧಿಯಲ್ಲಿ ದೆಹಲಿಯ ಮತ್ತೊಂದು ಆಸ್ಪತ್ರೆ ಸೀಲ್ ಡೌನ್!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟ ಕಾರಣ ಕೇವಲ 24 ಗಂಟೆಗಳ ಅವಧಿಯಲ್ಲಿ 2ನೇ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಇನ್ನು ಕೊರೋನಾ ವೈರಸ್ ಪರೀಕ್ಷೆ, ಚಿಕಿತ್ಸೆ ಸಂಪೂರ್ಣ ಉಚಿತ
ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿ ಕೊರೋನಾ ವೈರಸ್ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತಗೊಳಿಸಿದೆ.

ವಿಶ್ವದಲ್ಲಿ 2 ಲಕ್ಷ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ, ದೆಹಲಿಯಲ್ಲಿ ಮೇ.3ರ ನಂತರವೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,490 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 56 ಮಂದಿ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟಾರೆ ಕೊರೋನಾ ಪೀಡಿತರ ಸಂಖ್ಯೆ 24 ಸಾವಿರದ 942ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶ ತಿಳಿಸಿದೆ.

