Corona Virus

ಕೊರೋನಾ ವೈರಸ್ ಲಾಕ್ ಡೌನ್: 3 ತಿಂಗಳು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ಘೋಷಣೆ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ರಾಜ್ಯದ ಬಡ ಜನತೆ ಬವಣೆ ಪಡಬಾರದು ಎಂಬ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ 3 ತಿಂಗಳ ಕಾಲ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಕುರಿತು ನಿರ್ಧರಿಸಿದೆ.

ಪಾದರಾಯನಪುರ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ನಗರದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಸರ್ಕಾರದ ಕೆಲಸಕ್ಕೆ ಇವರ ಅನುಮತಿ ಪಡೆಯಬೇಕೇ..?; ಶಾಸಕ ಜಮೀರ್ ಅಹ್ಮದ್ ವಿರುದ್ಧ ಸಿಎಂ ಬಿಎಸ್ ವೈ ಕಿಡಿ
ಪಾದರಾಯನಪುರದಲ್ಲಿ ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ.

ಕೊರೋನಾ ವೈರಸ್: ದೇಶದಲ್ಲಿ ದಾಖಲೆಯ 1,553 ಹೊಸ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 17,265ಕ್ಕೆ ಏರಿಕೆ!
ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ದಾಖಲೆಯ 1,553 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಕೊರೋನಾ ವೈರಸ್: ರಾಜ್ಯದಲ್ಲಿ ಮತ್ತೆ 5 ಹೊಸ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಕರ್ನಾಟಕದಲ್ಲಿ ಮತ್ತೆ ಐದು ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋದ್ರು, ಬೆಳಗ್ಗೆ ಬರಬೇಕಿತ್ತು: ಶಾಸಕ ಜಮೀರ್ ಅಹ್ಮದ್ ಖಾನ್
ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಪೊಲೀಸರು ರಾತ್ರಿ ಏಕೆ ಪಾದರಾಯನಪುರಕ್ಕೆ ಹೋದ್ರು.. ಬೆಳಗ್ಗೆ ಬರಬೇಕಿತ್ತು ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಪಾದರಾಯನಪುರ ದುಷ್ಕೃತ್ಯದಲ್ಲಿ ತೊಡಗಿದ್ದವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ ಒತ್ತಾಯ
ಪಾದರಾಯನಪುರದಲ್ಲಿ ಕರ್ತವ್ಯನಿರತ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪಾದರಾಯನಾಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ; 54ಕ್ಕೂ ಹೆಚ್ಚು ಮಂದಿ ವಶಕ್ಕೆ, 4 ಎಫ್ ಐಆರ್
ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಈ ವರೆಗೂ ಸುಮಾರು 54 ಮಂದಿಯನ್ನು ವಶಕ್ಕೆ ಪಡೆದಿದ್ದು, 4 ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತೆಲಂಗಾಣ: ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರ ವೇತನ ಶೇ.10ರಷ್ಟು ಹೆಚ್ಚಳ!
ಮಾರಕ ಕೊರೋನಾ ವೈರಸ್ ವಿರುದ್ಧ ತಮ್ಮ ಜೀವವನ್ನೂ ಲೆಕ್ಕಿಸದೇ ಜನ ಸಾಮಾನ್ಯರ ಜೀವ ರಕ್ಷಣೆಗಾಗಿ ಹೋರಾಡುತ್ತಿರುವ ಪೊಲೀಸರಿಗೆ ಸರ್ಕಾರ ಬಂಪರ್ ಉಡುಗೊರೆ ನೀಡಿದ್ದು, ಪೊಲೀಸರ ವೇತನದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಿದೆ.

