Corona Virus

ಕೊರೋನಾ ವೈರಸ್: ಕರ್ನಾಟಕದ 8 ಜಿಲ್ಲೆ ಸೇರಿ ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ
ಕರ್ನಾಟಕ ರಾಜಧಾನಿ ಬೆಂಗಳೂರು, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲ್ಬುರ್ಗಿ ಸೇರಿದಂತೆ ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗಿರುವ 170 ಜಿಲ್ಲೆಗಳನ್ನು ಕೇಂದ್ರ ಸರ್ಕಾರ ರೆಡ್ ಜೋನ್ ಎಂದು ಘೋಷಣೆ ಮಾಡಿದೆ.

ಭಾರತದ 2 ಜಾತಿಯ ಬಾವಲಿಗಳಲ್ಲಿ ಕೊರೋನಾ ವೈರಸ್ ಪತ್ತೆ: ಐಸಿಎಂಆರ್ ವರದಿ
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಚೀನಾದಲ್ಲಿ ಮಾತ್ರವಲ್ಲ, ಭಾರತದಲ್ಲಿರುವ ಎರಡು ಜಾತಿಯ ಬಾವಲಿಗಳಲ್ಲೂ ಪತ್ತೆಯಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್)ನ ಸಂಶೋಧಕರು ಹೇಳಿದ್ದಾರೆ.

ಲಾಕ್ ಡೌನ್ 2.0 ಮಾರ್ಗಸೂಚನೆ: ಬೈಕಿನಲ್ಲಿ ಒಬ್ಬರು, ಕಾರಿನಲ್ಲಿ ಇಬ್ಬರಿಗೆ ಮಾತ್ರ ಅವಕಾಶ: ಶಾಕ್ ಕೊಟ್ಟ ಕೇಂದ್ರ!
ಲಾಕ್ ಡೌನ್ 2.0ಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಖಾಸಗಿ ವಾಹನ ಮಾಲೀಕರಿಗೆ ಶಾಕ್ ನೀಡಿದ್ದು, ಲಾಕ್ ಡೌನ್ ಅವಧಿಯಲ್ಲಿ ತುರ್ತು ಸಂದರ್ಭ ಅಥವಾ ಅನಿವಾರ್ಯ ಸಂದರ್ಭಗಳಲ್ಲಿ ಬೈಕಿನಲ್ಲಿ ಒಬ್ಬರು ಮತ್ತು ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಲು ಅನುಮತಿ ನೀಡಿದೆ.

ಐಪಿಎಲ್ ಗಾಗಿ ಏಷ್ಯಾ ಕಪ್ ರದ್ದು ಮಾಡಲಾಗದು: ಪಿಸಿಬಿ
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿರುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಅವಕಾಶ ಕಲ್ಪಿಸುವ ಸಲುವಾಗಿ ಏಷ್ಯಾಕಪ್ ಟೂರ್ನಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ.

2022ರ ವರೆಗೂ ದೈಹಿಕ ಅಂತರ ಕಾಪಾಡಿಕೊಳ್ಳಬೇಕು: ಹಾವರ್ಡ್ ವಿಜ್ಞಾನಿಗಳು
ಕೇವಲ ಲಾಕ್ ಡೌನ್ ನಿಂದ ಮಾತ್ರ ಮಾರಕ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ, 2022ರ ವರೆಗೂ ಸಾಮಾಜಿಕ ಅಂತರ ಕಾಯ್ದುಕೊಂಡರೆ ಮಾತ್ರ ಈ ಜಗತ್ತು ವೈರಸ್ ಸೋಂಕಿನಿಂದ ವಿಮುಕ್ತಿ ಪಡೆಯಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ನಂತರ ಉದ್ಯಮಗಳಿಗೆ ಸರ್ಕಾರದಿಂದ ಎಲ್ಲಾ ನೆರವು; ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ
ಕೊರೋನಾ ವೈರಸ್ ಹಿನ್ನಲೆಯಲ್ಲಿ ಹೇರಲಾಗಿರುವ ಲಾಕ್ ಡೌನ್ ಹಿಂಪಡೆದ ಬಳಿಕ ಉದ್ಯಮಗಳಿಗೆ ಸರ್ಕಾರದಿಂದ ಎಲ್ಲಾ ನೆರವು ದೊರೆಯಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ಎಫೆಕ್ಟ್: ಐಪಿಎಲ್ 2020 ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಿಸಿಸಿಐ
ಮಾರಕ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2020 ಕ್ರಿಕೆಟ್ ಟೂರ್ನಿಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಹಣವನ್ನು ನಿಲ್ಲಿಸಿದ ಅಮೆರಿಕದ ಡೊನಾಲ್ಡ್ ಟ್ರಂಪ್ ಸರ್ಕಾರ
ಚೀನಾ ದೇಶದಲ್ಲಿ ಕೊರೋನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡ ನಂತರ ಅದು ವೇಗವಾಗಿ ಹಬ್ಬುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮೊದಲೇ ಎಚ್ಚರಿಕೆ ನೀಡದೆ ಪ್ರಕರಣವನ್ನು ಮುಚ್ಚಿಹಾಕುವಲ್ಲಿ ಮತ್ತು ತೀವ್ರವಾಗಿ ನಿಗಾವಹಿಸುವಲ್ಲಿ ವಿಫಲವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.

ಬಾಂದ್ರಾ ನಿಲ್ದಾಣದಲ್ಲಿ ವಲಸೆ ಕಾರ್ಮಿಕರ ಜಮಾವಣೆ: ಟಿವಿ ಪತ್ರಕರ್ತನ ವಿರುದ್ಧ ಎಫ್ಐಆರ್ ದಾಖಲು, ವಿನಯ್ ದುಬೆಗೆ ಪೊಲೀಸ್ ಕಸ್ಟಡಿ
ಮುಂಬೈನ ಬಾಂದ್ರಾ ನಿಲ್ದಾಣದಲ್ಲಿ ಸಾವಿರಾರು ವಲಸೆ ಕಾರ್ಮಿಕರ ಜಮಾವಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಖಾಸಗಿ ಸುದ್ದಿವಾಹಿನಿಯ ಪತ್ರಕರ್ತನ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

