Corona Virus

ಅಲ್ಪಸಂಖ್ಯಾತರ ವಿರುದ್ಧ ಮಾಧ್ಯಮಗಳಲ್ಲಿ ಕೆಟ್ಟದಾಗಿ ಬಿಂಬಿಸುವವವರ ವಿರುದ್ಧ ಕ್ರಮ ಕೈಗೊಳ್ಳಿ: ಎಚ್.ಡಿ.ದೇವೇಗೌಡ
ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಕೆಟ್ಟದಾಗಿ ಬಿಂಬಿಸುತ್ತಿರುವುದು ತುಂಬಾ ದುರದೃಷ್ಟಕರ. ಸಮುದಾಯದ ಕೆಲವು ಕಿಡಿಗೇಡಿಗಳು ಮಾಡುತ್ತಿರುವ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಇಡೀ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಕೆಟ್ಟದಾಗಿ ಬಿಂಬಿಸುತ್ತಿರುವವರ ವಿರುದ್ಧ ತಕ್ಷಣ ಕಾನೂನು ಕ್

ಕೋವಿಡ್ 19: ದುಬೈಯಿಂದ ಬಂದಿದ್ದ ಭಟ್ಕಳದ ಯುವಕ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ದುಬೈಯಿಂದ ಮಾರ್ಚ್ 19ರಂದು ಮಂಗಳೂರಿಗೆ ಬಂದಾಗ ಕೋವಿಡ್ 19 ಸೋಂಕು ಇರುವುದು ದೃಢಪಟ್ಟ ಭಟ್ಕಳದ ಯುವಕ ಇದೀಗ ಸಂಪೂರ್ಣ ಗುಣಮುಖವಾಗಿದ್ದು, ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.

9 ಗಂಟೆ 9 ನಿಮಿಷದ ಯಶಸ್ಸು ಕೊರೋನಾ ವೈರಸ್ ವಿರುದ್ಧದ ಸುದೀರ್ಘ ಸಮರದ ಜವಾಬ್ದಾರಿ ಹೆಚ್ಚಿಸಿದೆ: ಪ್ರಧಾನಿ ಮೋದಿ
ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನಿನ್ನೆಯ 9 ಗಂಟೆ 9 ನಿಮಿಷ ಯಶಸ್ಸು ಈ ಸಾಂಕ್ರಾಮಿಕ ಮಾರಿಯ ವಿರುದ್ಧದ ನಮ್ಮ ಸುದೀರ್ಘ ಯುದ್ದದ ಜವಾಬ್ದಾರಿ ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೀಪ ಹಚ್ಚಿದ ಬಳಿಕ ಅಲ್ಪಸಂಖ್ಯಾತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು
ಕೊರೋನ ವೈರಸ್ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ದೀಪ ಹಚ್ಚುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗುಂಪೊಂದು ಅಲ್ಪಸಂಖ್ಯಾತರ ಮನೆಗಳಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಕಳೆದ ರಾತ್ರಿ ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಪೆರ್ಲಪು ಪ್ರತಾಪ್ನಗರದಲ್ಲಿ ನಡೆದಿದೆ.

ಲಾಕ್ ಡೌನ್ ನಿಯಮ ಮುರಿದು ಭರ್ಜರಿ ಹುಟ್ಟುಹಬ್ಬ: ಬಿಜೆಪಿ ಶಾಸಕರ ವಿರುದ್ಧ ಎಫ್ ಐಆರ್
ಮಾರಕ ಕೊರೋನಾ ವೈರಸ್ ನಿಂದಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದರೂ ಮಹಾರಾಷ್ಟ್ರದ ಬಿಜೆಪಿ ಶಾಸಕರೊಬ್ಬರು ಮಾತ್ರ ತಮ್ಮ ಹುಟ್ಟುಹಬ್ಬದ ನಿಮಿತ್ತ ಅಪಾರ ಜನಸ್ತೋಮವನ್ನು ಸೇರಿಸಿದ್ದಾರೆ.

ಕೊರೊನಾ ಸೋಂಕು ಪತ್ತೆಯಾದವರೆಲ್ಲ ಜಮಾತ್ಗೆ ಹೋಗಿ ಬಂದವರಾ? ಬಡವರ ಜೀವಹಾನಿಯಲ್ಲೂ ಧರ್ಮ ರಾಜಕಾರಣ !
ಕೊರೊನಾ ರೋಗಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಧರ್ಮದ ಲೇಪನ ಮಾಡುತ್ತಿರುವುದನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ.

ಹಣಕಾಸು ಸಚಿವಾಲಯ, ಪಿಎಸ್ ಯು ಸಿಬ್ಬಂದಿಯಿಂದ ಪಿಎಂ ಕೇರ್ ಫಂಡ್ ಗೆ 430 ಕೋಟಿ ರೂ. ನೆರವು
ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಹಣಕಾಸು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಒಟ್ಟಾಗಿ 430.13 ಕೋಟಿ ರೂ. ನೆರವನ್ನು ಪಿಎಂಕೇರ್ ಗೆ ನೀಡಿದ್ದಾರೆ.

ಅಮೆರಿಕಾದಲ್ಲಿ ಒಂದೇ ದಿನಕ್ಕೆ 1,200ಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿಗೆ ಬಲಿ:9,500 ದಾಟಿದ ಮೃತರ ಸಂಖ್ಯೆ
ಅಮೆರಿಕಾದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,500 ದಾಟಿದೆ. ದೇಶದಲ್ಲಿ ಇದುವರೆಗೆ ಒಟ್ಟು 3,37,310 ಮಂದಿ ಕೊರೋನಾ ಸೋಂಕಿತರು ದೃಢಪಟ್ಟಿದ್ದು 9ಸಾವಿರದ 634 ಮಂದಿ ಮೃತಪಟ್ಟಿದ್ದಾರೆ.

ಕೋಲಾರ: ಕೊರೋನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆನೋವಿನಿಂದ ಕುಸಿದು ಬಿದ್ದು ಸಾವು
ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕರೊಬ್ಬರು ತೀವ್ರ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

