Corona Virus

ಮುಸ್ಲಿಂ ಮುಖಂಡರ ಜೊತೆ ಯಡಿಯೂರಪ್ಪ ಸಭೆ: ವೈದ್ಯಕೀಯ ಸಿಬ್ಬಂದಿಗೆ ಸಹಕರಿಸಲು ಮನವಿ
ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಲವರಲ್ಲಿ ಕೋವಿಡ್-19 ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಪರೀಕ್ಷೆ ಮಾಡಲು ಹೋದ ವೈದ್ಯಕೀಯ ಸಿಬ್ಬಂದಿ ಮೇಲೆ ಗುಂಪಿನ ದಾಳಿ ನಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯದ ಮುಸ್ಲಿಂ ಮುಖಂಡರು ಹಾಗೂ ಶಾಸಕರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಲಾಕ್ ಡೌನ್ ಎಫೆಕ್ಟ್: ದೂರದರ್ಶನದಲ್ಲಿ ಅತೀ ಹೆಚ್ಚು ವೀಕ್ಷಣೆಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ರಾಮಾಯಣ
ಕೊರೋನಾ ವೈರಸ್ ಲಾಕ್ ಡೌನ್ ಎಫೆಕ್ಟ್ ನಿಂದ ಮರು ಪ್ರಸಾರವಾಗುತ್ತಿರುವ ರಾಮಾಯಣ ಧಾರಾವಾಹಿ ನೂತನ ದಾಖಲೆಯೊಂದನ್ನು ಬರೆದಿದೆ.

ದಿಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಬೆಳಗಾವಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ- ಲಕ್ಷ್ಮಣ ಸವದಿ
ದೆಹಲಿಯ ನಿಜಾಮುದ್ದೀನ್ ಮರ್ಜಕ್‍ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿ ಜಿಲ್ಲೆಗೆ 62 ಜನ ಬಂದಿದ್ದಾರೆ. 62 ಜನರ ಪೈಕಿ 32 ಜನರ ಗಂಟಲು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೋವಿಡ್ 19: ಮುಂಬೈನ ಧಾರಾವಿ ಪ್ರದೇಶದಲ್ಲಿ ಮೂರನೇ ಕೊರೋನಾ ಸೋಂಕು ಪ್ರಕರಣ ಪತ್ತೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಪ್ರಕರಣದ ಏರಿಕೆಯಾಗುತ್ತಲೇ ಇದ್ದು, ಇದೀಗ ವಿಶ್ವದ ಅತೀ ದೊಡ್ಡ ಕೊಳಚೆ ಪ್ರದೇಶ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಮೂರನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಇಂಪ್ಯಾಕ್ಟ್: ಗಣಿ ಕಾರ್ಮಿಕರ ಕುಟುಂಬಗಳಿಗೆ ನೆರವಾದ ದಾನಿಗಳು
ಕೊರೋನ ಭೀತಿಯಿಂದ ಮನೆಯಿಂದ ಆಚೆ ಬರದೆ ಹಸಿವಿನಿಂದ ಬಳಲಿದ್ದ 70ಕ್ಕೂ ಹೆಚ್ಚು ಗಣಿ ಕಾರ್ಮಿಕರ ಕುಟುಂಬಗಳ ಹಸಿವನ್ನ ದಾನಿಗಳು ನೀಗಿಸಿದ್ದಾರೆ.

ಬಾಗಲಕೋಟೆಗೂ ಕಾಲಿಟ್ಟ ಕೊರೋನಾ: ಟ್ರಾವೆಲ್ ಹಿಸ್ಟರಿ ಇಲ್ಲದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢ
ವಿಶ್ವವನ್ನೇ ಕಂಗಾಲಾಗಿಸಿರುವ ಮಾರಕ ರೋಗ ಕೊರೊನಾ ವೈರಸ್ ಕೊನೆಗೂ ಬಾಗಲಕೋಟೆ ಜಿಲ್ಲೆಗೆ ಕಾಲಿಟ್ಟಿದೆ.

ಮೈಸೂರಿನಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ದಾಖಲು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇಂದು ಮತ್ತೆ 2 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದೆ.

27 ಅಡಿವರೆಗೂ ಕೊರೋನಾ ವೈರಸ್ ಚಲನೆ, ಗಾಳಿಯಲ್ಲಿ ಗಂಟೆಗಳ ಕಾಲ ಜೀವ: ಬೆಚ್ಚಿ ಬೀಳಿಸುತ್ತದೆ ಕೊರೋನಾ ವೈರಸ್ ಕುರಿತ ಎಂಐಟಿ ವಿಜ್ಞಾನಿಯ ಸಂಶೋಧನೆ
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ಹೇರಿ ಸಾಕಷ್ಟು ನಿಯಂತ್ರಣಾ ಕ್ರಮಗಳನ್ನು ಹೇರಿದ್ದು, ಅಗತ್ಯ ವಸ್ತುಗಳ ಖರೀದಿಗೆ ಕನಿಷ್ಠ 1 ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದೆ. ಆದರೆ ನಿಮಗೆ ಗೊತ್ತೇ ಕೊರೋನಾ ವೈರಸ್ 27 ಅಡಿಗಳವರೆಗೂ ಚಲಿಸಬಲ್ಲದು ಎಂಬ ಆಘಾತಕಾರಿ ಮಾಹಿತಿ ಇದೀಗ ಹೊರಬಿದ್ದಿದೆ.

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ: ಪೊಲೀಸರಿಂದ ಮೂವರ ಬಂಧನ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

