corona

ಕೊರೋನಾ ಭೀತಿ: ಸಾವಿರಾರು ವಿದ್ಯಾರ್ಥಿಗಳು ಇನ್ನೂ ಶಾಲೆಗಳಿಗೆ ದಾಖಲಾಗಿಲ್ಲ!
ಮಹಾಮಾರಿ ಕೊರೋನಾ ವೈರಸ್ ಶಿಕ್ಷಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮವನ್ನು ಬೀರಿದ್ದು, ಸೋಂಕು ಭೀತಿಯಿಂದಾಗಿ ಪೋಷಕರು ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಚಾಮರಾಜನಗರದ ಸರ್ಕಾರಿ ಶಾಲೆಗಳು ಮಕ್ಕಳ ದಾಖಲಾತಿಗಳಲ್ಲದೆ ಸೊರಗುತ್ತಿವೆ.

ಕೊರೋನಾಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆ: ರಾಜ್ಯ ಸರ್ಕಾರ
ಕೊರೋನಾ ವೈರಸ್'ಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆಗಳನ್ನು ನಡಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸಿಎನ್.ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 53,370 ಕೇಸ್ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕೆ ಇಳಿಕೆ
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಎಂದಿನಂತೆ ಶನಿವಾರ ಕೂಡ ಮುಂದುವರೆದಿದ್ದು, ಸತತ 6 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 53,370 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟಾರೆ 10 ಕೋಟಿ ಕೋವಿಡ್-19 ಸ್ಯಾಂಪಲ್ ಪರೀಕ್ಷೆ
ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ.

ಆರೋಗ್ಯ ಕಾರ್ಯಕರ್ತರಿಗೆ ಮೊದಲು ಕೊರೋನಾ ಲಸಿಕೆ: ಭರದಿಂದ ಸಾಗುತ್ತಿದೆ ಪೂರೈಕೆಗೆ ಸರ್ಕಾರದ ಸಿದ್ಧತೆ!
ಕೊರೋನಾ ವೈರಸ್'ಗೆ ಲಸಿಕೆ ಬಂದ ಕೂಡಲೇ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆಯನ್ನು ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ: ಮುಖ್ಯಮಂತ್ರಿ ಯಡಿಯೂರಪ್ಪ
ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆ
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕು ಹಾಗೂ ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಸರಾಸರಿ ಶೇ.11.25ರಷ್ಟಿರುವ ಕೊರೋನಾ ಪಾಸಿಟಿವಿಟಿ ದರ ಕಳೆದ ಒಂದು ವಾರದ ಪ್ರಕರಣಗಳಲ್ಲಿ ಶೇ.6.51ಕ್ಕೆ ಕುಸಿದಿದೆ. ಅಲ್ಲದೆ, ಕೊರೋನಾ ಸೋಂಕಿತರ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆಯಾಗಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 54,366 ಜನರಿಗೆ ಕೊರೋನಾ: ಸತತ 5ನೇ ದಿನವೂ 60 ಸಾವಿರಕ್ಕಿಂತ ಕಡಿಮೆ ಕೇಸ್!
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರಿದಿದ್ದು, ಸತತ 5 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ.

ಕೋವಿಡ್-19 ಆತಂಕ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ರದ್ದು
ಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.

