corona

ಕೊರೋನಾ ಆತಂಕದ ನಡುವೆ ಜನನಿಬಿಡ ಪ್ರದೇಶಗಳಲ್ಲಿ ವಾಕಿಂಗ್ ಮಾಡುವುದು ಹೇಗೆ? ಇಲ್ಲಿದೆ ಕೆಲವು ಟಿಪ್ಸ್!
ದೇಶದಲ್ಲಿ ಲಾಕ್ಡೌನ್ ನಿಯಮಗಳು ಸಡಿಲಗೊಳ್ಳುತ್ತಿದ್ದು, ಈಗಾಗಲೇ ಉದ್ಯಾನವನಗಳು, ಜಿಮ್, ಜಿಮ್'ಗಳು ಪುನರಾರಂಭಗೊಂಡಿವೆ. ಲಾಕ್ಡೌನ್ ನಿಯಮ ಸಡಿಲಗೊಂಡ ಮಾತ್ರಕ್ಕೆ ದೇಶದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗಿದೆ ಎಂದು ತಿಳಿಯದಿರಿ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 78,524 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 68 ಲಕ್ಷ
ದೇಶದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 78,524 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 68 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಗುರುವಾರ ತಿಳಿದುಬಂದಿದೆ.

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸಾರ್ವಕಾಲಿಕ ದಾಖಲೆ!
ರಾಜ್ಯದಲ್ಲಿ ಬುಧವಾ ದಾಖಲೆಯ 10,947 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ ಇಷ್ಟೊಂದು ಪ್ರಕರಣ ದಾಖಲಾಗಿರುವುದು ಇದೇ ಮೊದಲಾಗಿದೆ.

ಕೊರೋನಾ ಸಾಂಕ್ರಾಮಿಕ ನಡುವಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ಏರ್ ಶೋ ನಡೆಸಲು ಸಿದ್ಧ: ಸಿಎಂ ಯಡಿಯೂರಪ್ಪ
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ನಡುವಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ಏರ್ ಶೋ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ದೊಡ್ಡ ಬೆಲೆಯನ್ನು ತೆರಲಿದೆ: ಅಮೆರಿಕಾ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ರಾಷ್ಟ್ರ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಸಿದ್ದಾರೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 72,049 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 67 ಲಕ್ಷ
ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾದಿಂದ ರಕ್ಷಿಸಿಕೊಳ್ಳಲು ಗ್ರಾಮವನ್ನೇ ಸ್ವಯಂ ಲಾಕ್ ಮಾಡಿಕೊಂಡ ಶಿವಮೊಗ್ಗದ ಹಳ್ಳಿ!
ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸುತ್ತಿದೆ, ಹೀಗಿರುವಾಗಲೇ ಕಡೂರು ತಾಲೂಕಿನ ಪಿಳ್ಳೇನಹಳ್ಳಿ ಗ್ರಾಮ ಕೊರೋನಾವನ್ನು ದೂರವಿಡಲು 20 ದಿನ ಲಾಕ್ ಮಾಡಿದೆ.

ಕೊರೋನಾ ಸೋಂಕು ಆತಂಕ: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅಣಬೆಗೆ ಹೆಚ್ಚಿದ ಬೇಡಿಕೆ!
ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿರುವ ನಡುವಲ್ಲೇ ರೋಗ ನಿರೋಧಕ ಶಕ್ತಿ ಹೆಚ್ಚಿರುವ ಆಹಾರ ಪದಾರ್ಥಗಳಿಗೆ ಬೇಡಿಕೆಗಳು ಹೆಚ್ಚಾಗತೊಡಗಿವೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೂಡಲೇ ರೂ.25 ಸಾವಿರ ಕೋಟಿ ಬಿಡುಗಡೆ ಮಾಡಬೇಕು: ಗೃಹ ಸಚಿವ ಬೊಮ್ಮಾಯಿ
ಕೊರೋನಾದಿಂದ ಎದುರಾಗಿರುವ ಆರ್ಥಿಕ ಒತ್ತಡಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ 2020 ಸೆಪ್ಟೆಂಬರ್ ವರೆಗೆ ಸಂಗ್ರಹಿಸಿದ ಸುಮಾರು ರೂ. 25 ಸಾವಿರ ಕೋಟಿ ನಷ್ಟ ಪರಿಹಾರ ಸೆಸ್'ನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

