corona

ಭಾರತದಲ್ಲಿ ಕೊರೋನಾ ಏರಿಕೆ: ಸತತ 5ನೇ ದಿನವೂ 40 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4.10 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬೆಳವಣಿಗೆಯು ಇದೀಗ ಕೊರೋನಾ 3ನೇ ಅಲೆ ಕುರಿತ ಆತಂಕವನ್ನು ಹೆಚ್ಚು ಮಾಡಿದೆ.

ಹೆಚ್ಚಿದ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 41,649 ಹೊಸ ಕೇಸ್ ಪತ್ತೆ, 593 ಮಂದಿ ಸಾವು
ಕೊರೋನಾ 3ನೇ ಅಲೆ ಆತಂಕದಲ್ಲಿರುವ ಭಾರತದಲ್ಲಿ ದಿನ ಕಳೆಯುತ್ತಿದ್ದಂತೆ ಕೋವಿಡ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,649 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 593 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮತ್ತೆ ಏರುತ್ತಿರುವ ಕೊರೋನಾ: ದೇಶದಲ್ಲಿಂದು 44,230 ಹೊಸ ಕೇಸ್ ಪತ್ತೆ, 555 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮತ್ತೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 44,230 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 555 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 48.78 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 48.78 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಶಿವಮೊಗ್ಗದಲ್ಲಿ ಇಳಿದ ಕೊರೋನಾ ಅಬ್ಬರ: ಸತತ 2ನೇ ದಿನ ಸಾವಿನ ಸಂಖ್ಯೆ ಶೂನ್ಯ!
ಶಿವಮೊಗ್ಗದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ಸತತ 2ನೇ ದಿನವೂ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ ಶೂನ್ಯವಾಗಿದೆ.

ಕೋವಿಡ್-19: ಭಾರತದಲ್ಲಿಂದು 43,509 ಹೊಸ ಕೇಸ್ ಪತ್ತೆ, 640 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್'ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಗುರುವಾರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 640 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 29,689 ಹೊಸ ಕೇಸ್ ಪತ್ತೆ, 415 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್'ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 29,689 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 415 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 39,361 ಹೊಸ ಕೇಸ್ ಪತ್ತೆ, 416 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 39,361 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 416 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಕೊರೋನಾ ಮರೆಯದಿರಿ, ಮಾಸ್ಕ್ ಧರಿಸಿ ನಿಯಮಗಳ ಪಾಲಿಸಿ: ಪ್ರಧಾನಿ ಮೋದಿ
ಕೋವಿಡ್ ನಮ್ಮ ನಡುವೆಯೇ ಇದ್ದು, ಹಬ್ಬದ ಸಂಭ್ರಮದಲ್ಲಿ ಜನರು ಕೊರೋನಾ ಮರೆಯಬಾರದು. ಮಾಸ್ಕ್ ಧರಿಸಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

