corona

ಕೋವಿಡ್ ಲಸಿಕೆ ಪ್ರಮಾಣಪತ್ರದ ವೈಯಕ್ತಿಕ ವಿವರ ತಿದ್ದಲು ಆನ್ ಲೈನ್ ಮೂಲಕ ಅವಕಾಶ: ಕೇಂದ್ರ ಸರ್ಕಾರ
ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗಿರುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ಅನ್'ಲಾಕ್ ಬೆಂಗಳೂರು: ಕಾದು, ಅಧ್ಯಯನ ನಡೆಸಿ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧಾರ
ಕೊರೋನಾ ಮೊದಲನೇ ಅಲೆ ವೇಳೆ ಎಡವಿದ್ದಂತೆ ಈ ಬಾರಿ ಯಾವುದೇ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳದೆ ಕಾದು, ಅಧ್ಯಯನ ನಡೆಸಿ ನಂತರ ಅಂತಿಮ ನಿರ್ಣಯ ಕೈಗೊಳ್ಳಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

30 ದಿನದೊಳಗೆ 30 ಲಕ್ಷ ಜನರಿಗೆ ಲಸಿಕೆ ಹಾಕಲು ಕ್ರಮ: ಬಿಬಿಎಂಪಿ
ಖಾಸಗಿ ಆಸ್ಪತ್ರೆಗಳು, ದಾನಿ ಸಂಸ್ಥೆಗಳ ಸಹಯೋಗದಲ್ಲಿ ಮುಂದಿನ 30 ದಿನಗಳಲ್ಲಿ 30 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲು ಕ್ರಮಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸಿದ್ಧತೆ: ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು 1,500 ಕೋಟಿ ರೂ. ವೆಚ್ಚದಲ್ಲಿ ಯೋಜನೆ
ಕೋವಿಡ್ ಸಂಭವನೀಯ ಮೂರನೇ ಅಲೆ ಸೇರಿದಂತೆ ಯಾವುದೇ ಬಿಕ್ಕಟ್ಟು ಎದುರಿಸಲು ರಾಜ್ಯವನ್ನು ಸಜ್ಜುಗೊಳಿಸಲು ರೂ.1,500 ಕೋಟಿ ವೆಚ್ಚದಲ್ಲಿ ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನಗರದಲ್ಲಿ ಕೊರೋನಾ ಪ್ರಕರಣಗಳಲ್ಲಿ ಇಳಿಕೆ: ಮರಳಿ ಸಿಲಿಕಾನ್ ಸಿಟಿಗೆ ವಾಪಸ್ಸಾಗುತ್ತಿರುವ ಜನತೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳಾದ ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಜಾರ್ಖಾಂಡ್ ಮತ್ತು ಇತರೆ ಜಿಲ್ಲೆಗಳು, ಇತರೆ ಗ್ರಾಮಗಳಿಂದ ಜನರು ಮರಳಿ ಸಿಲಿಕಾನ್ ಸಿಟಿಗೆ ವಾಪಸ್ಸಾಗುತ್ತಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಮಾಣ; 2 ವರ್ಷದ ಮಗು ಸೇರಿ ಒಂದೇ ದಿನ 340 ಮಂದಿ ಕೊರೋನಾಗೆ ಬಲಿ
ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್-19: ಗ್ರಾಮದ ಶೇ.100 ವಯಸ್ಕರಿಗೆ ಲಸಿಕೆ ನೀಡಿ ಜಮ್ಮು-ಕಾಶ್ಮೀರದ ಈ ಕುಗ್ರಾಮ ಇತರರಿಗೆ ಮಾದರಿ!
ಕೊರೋನಾ 2ನೇ ಅಲೆ ಜೋರಾಗಿದ್ದರೂ ದೇಶದ ಹಲವು ಗ್ರಾಮಗಳಲ್ಲಿ ಜನರು ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಇದಕ್ಕೆ ಲಸಿಕೆಯ ಬಗ್ಗೆ ಹಿಂದೆ ಹುಟ್ಟಿದ್ದ ಭಯ ಕಾರಣ. ಆದರೆ, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿರುವ ಕುಗ್ರಾಮವೊಂದು ಇದಕ್ಕೆ ತದ್ವಿರುದ್ಧವಾಗಿ ನಿಂತಿದೆ...

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ: ದೇಶದಲ್ಲಿಂದು 86,498 ಹೊಸ ಕೇಸ್ ಪತ್ತೆ, 2,123 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ.

ಕೋವಿಡ್ ನಿಯಮ ಪಾಲಿಸಿ ಕೊರೋನಾವನ್ನು ಊರಿನಿಂದ ಹೊರಗಿಟ್ಟ ಮಂಗಳೂರಿನ ಎಳನೀರು ಗ್ರಾಮ!
ಚಿಕ್ಕಮಗಳೂರು ಜಿಲ್ಲೆಯ ಗಡಿಗೆ ಹೊಂದಿಕೊಂಡಂತಿರುವ ಪುಟ್ಟ ಹಳ್ಳಿ ಎಳನೀರು ಗ್ರಾಮ ಕಳೆದ ಒಂದುವರ್ಷದಿಂದ ಕೋವಿಡ್ ಸೋಂಕಿನಿಂದ ಹೊರಗುಳಿದಿದೆ.

