corona

ಕೋವಿಡ್ ರೋಗಿಗಳಿಗೆ ಉಚಿತ ಆಟೋ ಸೇವೆ ಒದಗಿಸುತ್ತಿರುವ ಕಲಬುರಗಿ ಯುವಕ!
ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಹೊತ್ತಿನಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ತಾವೇ ಉಚಿತವಾಗಿ ಆಟೋ ರಿಕ್ಷಾ ಓಡಿಸಿ, ಕೋವಿಡ್ ರೋಗಿಗಳನ್ನು ಮನೆಯಿಂದ ಆಸ್ಪತ್ರೆಗೆ, ಆಸ್ಪತ್ರೆಯಿಂದ ಮನೆಗೆ ಉಚಿತವಾಗಿ ಕರೆದುಕೊಂಡು ಹೋಗಿ ಸೇವೆ ನೀಡುತ್ತಿದ್ದಾರೆ.

ಬಾಗಲಕೋಟೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ ಕೊರೋನಾಗೆ ಬಲಿ
ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ (57) ಕೋವಿಡ್ ಗೆ ಬಲಿಯಾಗಿದ್ದಾರೆ.

ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ
ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ.

ನಷ್ಟದಿಂದ ಕಂಗಾಲು: ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರವಾಗಿಸಿ ಸೇವೆ ಒದಗಿಸಲು ಮುಂದಾದ ಮಾಲೀಕರು!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕಗೊಂಡಿದ್ದು, ಕರ್ಫ್ಯೂ, ಲಾಕ್ಡೌನ್ ಸಂಕಷ್ಟದಿಂದಾಗಿ ನಷ್ಟ ಅನುಭವಿಸುತ್ತಿರುವ ಹೋಟೆಲ್ ಗಳ ಮಾಲೀಕರು ಇದೀಗ ತಮ್ಮ ಸ್ಟಾರ್ ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಮಾರ್ಪಡಿಸಿ, ಸೋಂಕಿತರಿಗೆ ಸೇವೆಗಳನ್ನು ಒದಗಿಸಲು ಮುಂದಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 3.11 ಲಕ್ಷ ಹೊಸ ಕೇಸ್ ಪತ್ತೆ, 4,077 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,11,170 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4,077ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19: ರಾಜ್ಯದ ಸ್ಥಿತಿಗತಿ ಅರಿಯಲು ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಮೇ.18 ರಂದು ಪ್ರಧಾನಿ ಮೋದಿ ಸಂವಾದ!
ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ದೇಶದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಇರುವ ಪರಿಣಾಮ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪರಿಸ್ಥಿತಿ ಅರಿಯಲು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಂವಾದ...

ಕೋವಿಡ್-19: 26 ಪ್ರದೇಶಗಳಲ್ಲಿ ಚಿಕಿತ್ಸಾ ಕೇಂದ್ರ ತೆರೆದ ಬಿಬಿಎಂಪಿ
ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಪಾಲಿಕೆ ಎಲ್ಲಾ ವಾರ್ಡ್ ಗಳಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 35,879 ಮಂದಿ ಡಿಸ್ಚಾರ್ಜ್
ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೋನಾ ಸ್ವಲ್ಪ ಇಳಿಕೆ: ದೇಶದಲ್ಲಿಂದು 3.26 ಲಕ್ಷ ಹೊಸ ಕೇಸ್ ಪತ್ತೆ, 3,890 ಮಂದಿ ಸಾವು
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಾ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಭಾರತದಲ್ಲಿಂದು 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

