corona

ಪತ್ನಿಗೂ ವೆಂಟಿಲೇಟರ್ ಬೆಡ್ ಕೊಡಿಸಲು ಸಾಧ್ಯವಾಗಲಿಲ್ಲ: ಅಸಹಾಯಕತೆ ತೋಡಿಕೊಂಡ ಮೈಸೂರು ಆರೋಗ್ಯಾಧಿಕಾರಿ
ರಾಜ್ಯದಲ್ಲಿ ಕೊರೋನಾ ಭೀಕರತೆ ಪ್ರದರ್ಶಿಸುತ್ತಿದ್ದು, ಸಾವಿರಾರೂ ಜನರು ತಮ್ಮ ಕುಟುಂಬ ಸದಸ್ಯರು, ಪ್ರೀತಿ ಪಾತ್ರರ ಪ್ರಾಣ ಉಳಿಸಲು ಹಾಸಿಗೆ ಪಡೆಯಲು ಒದ್ದಾಡುತ್ತಿದ್ದಾರೆ. ಸಾಮಾನ್ಯ ಜನರ ಜೊತೆ ಜೊತೆಗೆ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಕೂಡ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.

ಕೋವಿಡ್ ಪೋರ್ಟಲ್ ವ್ಯವಸ್ಥೆ ಇಷ್ಟವಾಗದಿದ್ದರೆ ಮುಂದಿನ ಪರಿಸ್ಥಿತಿ ನೀವೇ ನಿಭಾಯಿಸಿ: ರಾಜಕೀಯ ನಾಯಕರಿಗೆ ಅಧಿಕಾರಿಗಳು
ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಹೆಚ್'ಬಿಎಂಎಸ್, ವಾರ್ ರೂಮ್, ಎಸ್ಎಎಸ್'ಟಿ ಹಾಗೂ ಇತರೆ ಕೋವಿಡ್ ಪೋರ್ಟಲ್ ವ್ಯವಸ್ಥೆಗಳು ಇಷ್ಟವಾಗದಿದ್ದರೆ, ಅವುಗಳನ್ನು ರದ್ದುಪಡಿಸುತ್ತೇವೆ. ಮುಂದಿನ ಪರಿಸ್ಥಿತಿಯನ್ನು ನೀವೇ ನಿಭಾಯಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಹಾಗೂ ರಾಜಕೀಯ ನಾಯಕರಿಗೆ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 4.14 ಲಕ್ಷ ಹೊಸ ಕೇಸ್ ಪತ್ತೆ, 3,915 ಮಂದಿ ಸಾವು
ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ತೀವ್ರಗೊಂಡಿದ್ದು, ಶುಕ್ರವಾರ ಸೋಂಕು ಮತ್ತು ಸಾವು ಎರಡರಲ್ಲೂ ಮತ್ತೆ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ: ತಜ್ಞರ ಎಚ್ಚರಿಕೆ
ಕೊರೋನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಈಗಾಗಲೇ ದೇಶದಲ್ಲಿ ಪ್ರತಿನಿತ್ಯ ಲಕ್ಷ ಲಕ್ಷ ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗುತ್ತಿವೆ. ಈ ನಡುವಲ್ಲೇ 3ನೇ ಅಲೆಯ ಆತಂಕ ಶುರುವಾಗಿದ್ದು, 3ನೇ ಅಲೆಯು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ರಾಜಸ್ಥಾನ: ಕೊರೋನಾ ಸೋಂಕಿಗೆ ತಂದೆ ಸಾವು; ದುಃಖ ತಡೆಯಲಾಗದೆ ತಂದೆಯ ಚಿತೆಗೆ ಹಾರಿದ ಪುತ್ರಿ!
ಕೊರೋನಾದಿಂದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ದುಃಖ ತಡೆಯಲಾಗದ ಪುತ್ರಿ ಚಿತೆಗೆ ಹಾರಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ.

ರಾಜ್ಯಗಳಲ್ಲಿ ಇನ್ನೂ 94 ಲಕ್ಷ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ ಆರೋಗ್ಯ ಸಚಿವಾಲಯ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 94.47 ಲಕ್ಷ ಕೋವಿಡ್–19 ಲಸಿಕೆಯ ಡೋಸ್ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 36 ಲಕ್ಷಗಳಷ್ಟು ಡೋಸ್ಗಳನ್ನು ಸರಬರಾಜು ಮಾಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ತಕ್ಕಂತೆ ರೋಗಿಗಳನ್ನು ದಾಖಲಿಸಿಕೊಳ್ಳಿ: ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ
ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಕೇಂದ್ರಕ್ಕೆ ಗಡುವು ನೀಡಿದ ಹೈಕೋರ್ಟ್
ಆಕ್ಸಿಜನ್ ಕೊರತೆ ಎದುರಾಗಿ ಜನರು ಸಾಯುತ್ತಿದ್ದರೂ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಮಂಗಳವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು.

ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರ ಸಾವು, ಹತ್ಯಾಕಾಂಡಕ್ಕಿಂತ ಕಡಿಮೆಯಲ್ಲ: ಹೈಕೋರ್ಟ್
ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಯಾಗದ ಕಾರಣದಿಂದಲೇ ಕೋವಿಡ್ 19 ಸೋಂಕಿತರು ಸಾಯುತ್ತಿರುವ ಘಟನೆಗಳು ಅಪರಾಧ ಕೃತ್ಯ ಎಂದು ಪರಿಗಣಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.

