coronavirus

ಗುಣಮುಖರಾದ ಸೋಂಕಿತರ ಆರೋಗ್ಯದ ಮೇಲೆ ನಿಗಾವಹಿಸಲು ತಜ್ಞರ ಸಮಿತಿ ರಚನೆ
ಕೊರೋನಾ ವೈರಸ್'ನಿಂದ ಗುಣಮುಖರಾಗಿರುವ ಸೋಂಕಿತರ ಆರೋಗ್ಯದ ಮೇಲೆ ನಿಗಾವಹಿಸಲು ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿದೆ ಎಂದು ವರದಿಗಳಿಂದ ತಿಳಿದಬಂದಿದೆ.

21 ದಿನಗಳ ಬದಲು 11 ದಿನಕ್ಕೆ ಡಬಲ್ ಆದ ಸೋಂಕಿತರ ಸಂಖ್ಯೆ, ರಾಜ್ಯಕ್ಕೆ ಹೊರಗಿನಿಂದ ಬಂದವರಲ್ಲೇ ಹೆಚ್ಚು ಸೋಂಕು ಪತ್ತೆ!
ಈ ಮೊದಲು 21 ದಿನಗಳಿಗೆ ದುಪ್ಪಟ್ಟಾಗುತ್ತಿದ್ದ ಸೋಂಕಿತ ಪ್ರಕರಣಗಲು, ಇದೀಗ 11 ದಿನಕ್ಕೇ ದ್ವಿಗುಣಗೊಲ್ಲುತ್ತಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಕುರಿತ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಸರ್ಕಾರಿ, ಖಾಸಗಿ ನೌಕರರಿಗೆ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ
ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಸರ್ಕಾರಿ ಹಾಗೂ ಖಾಸಗಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಬಳಕೆ ಮಾಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಲಾಕ್'ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಕ್ಕೆ ಕೇಂದ್ರ ಸೂಚನೆ
ಲಾಕ್'ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಪಾಕಿಸ್ತಾನದಲ್ಲಿ ಕೊರೋನಾದಿಂದ ಮೂರು ಪತ್ರಕರ್ತರು ಸಾವು
ಪಾಕಿಸ್ತಾನದಲ್ಲಿ ಮೂವರು ಪತ್ರಕರ್ತರು ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ದು, 156 ಮಾಧ್ಯಮ ವ್ಯಕ್ತಿಗಳು ಕೊವಿಡ್-19ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾದಗಿರಿ: ಉಸಿರಾಟ ತೊಂದರೆಯಿಂದ ಮಹಿಳೆ ಸಾವು, ಕೋವಿಡ್ ಪರೀಕ್ಷೆಗೆ ಮಾದರಿ ರವಾನೆ
ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಅರಕೇರಾ(ಕೆ) ತಾಂಡಾದ 50 ವರ್ಷದ ಮಹಿಳೆಯ ಗಂಟಲು ದ್ರವದ ಮಾದರಿಯನ್ನು ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಟಾಸ್ಕ್ ಫೋರ್ಸ್ ರಚನೆ: ಪ್ರತಿ ವಾರ ಕಾರ್ಯಚಟುವಟಿಕೆ ಪರಿಶೀಲಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ
ಚೀನಾದಲ್ಲಿರುವ ಕೈಗಾರಿಕೋದ್ಯಮಿಗಳು ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಟಾಸ್ಕ್ ಫೋರ್ಸಿನ ಕಾರ್ಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ನಡೆಸುತ್ತೇವೆ.

ಉಡುಪಿಯಲ್ಲಿ 25, ಒಂದೇ ದಿನ ರಾಜ್ಯದಲ್ಲಿ 116 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆ!
ರಾಜ್ಯದಲ್ಲಿ ಕಳೆದ 12 ಗಂಟೆಗಳಲ್ಲಿ ಒಟ್ಟು 116 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ.

ವೈರಸ್ ಸಮುದಾಯ ಹಂತ ತಲುಪಲು ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವ ಪ್ರಯಾಣಿಕರೇ ಕಾರಣ: ತಜ್ಞರು
ಕೊರೋನಾ ಸೋಂಕು ತಡೆಯುವ ಸಲುವಾಗಿ ಹೊರ ರಾಜ್ಯ ಪ್ರಯಾಣದ ಮೇಲೆ ನಿರ್ಬಂಧ ಹೇರಿದ ಬೆನ್ನಲ್ಲೇ ಅಧಿಕಾರಿಗಳ ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ.

