coronavirus

ಸಿಇಟಿ ಪರೀಕ್ಷೆ ಮುಂದೂಡಿಕೆ
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ತಿಳಿಸಿದ್ದಾರೆ.

ಕೊರೋನಾ ಭೀತಿಯಿಂದ ಮುಂದೂಡಿಕೆಯಾಗಿದ್ದ ಟೋಕಿಯೊ ಒಲಿಂಪಿಕ್ಸ್ 2021ರ ಜುಲೈ 23ರಿಂದ ಆರಂಭ
ಕೊವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ಕಳೆದ ವಾರ ಮುಂದೂಡಲ್ಪಟ್ಟಿದ್ದ ಟೋಕಿಯೊ ಒಲಿಂಪಿಕ್ಸ್ -2020 ಕ್ರೀಡಾಕೂಟ ಮುಂದಿನ ವರ್ಷದ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವಸತಿಗೃಹಗಳು, ಪೇಯಿಂಗ್ ಗೆಸ್ಟ್ನಿಂದ ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು: ಟಿ.ಎಂ.ವಿಜಯಭಾಸ್ಕರ್
ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗಸ್ಥರ ವಸತಿಗೃಹಗಳು, ವಿದ್ಯಾರ್ಥಿ ನಿಲಯಗಳಲ್ಲಿರುವವರನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಟಿ.ಎಂ.ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಮೃತ ವೃದ್ಧನ 13 ವರ್ಷದ ಮಗನಲ್ಲಿ ಸೋಂಕು ದೃಢ: ಜಿಲ್ಲಾಧಿಕಾರಿ ರಾಕೇಶ್ ಕುಮಾರ್
ಇತ್ತೀಚೆಗಷ್ಟೇ ಕೊರೋನಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದ ಶಿರಾ ಪಟ್ಟಣದ ವೃದ್ಧನ 13 ವರ್ಷದ ಮಗನಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಇಡೀ ದೇಶ ದೇಶ ಲಾಕ್ ಡೌನ್ ಆಗಿದ್ದರೆ ಇಲ್ಲಿನ ಗೊಲ್ಲರಹಳ್ಳಿಯಲ್ಲಿ ನಡೆಯಿತು ಕಾಳಿಕಾದೇವಿ ಜಾತ್ರೆ!
ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ವ್ಯಾಪಕವಾಗಿರುವ ಸಂದರ್ಭದಲ್ಲಿ ಸರ್ಕಾರದ ಎಚ್ಚರಿಕೆಯನ್ನು ಉಲ್ಲಂಘಿಸಿ ಇಲ್ಲಿನ ಗೊಲ್ಲರಹಳ್ಳಿಯಲ್ಲಿ ಕಾಳಿಕಾದೇವಿ ರಥೋತ್ಸವ ನಡೆಸಲಾಗಿದೆ.

ಕೊರೋನಾ ಎಫೆಕ್ಟ್: ಕಾರ್ಮಿಕರ ವಲಸೆ ತಡೆಗೆ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಕೊಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್
ಕೊರೋನಾವೈರಸ್ ಹಾವಳಿಯ ಕಾರಣ ದೇಶಾದ್ಯಂತ ಲಾಕ್ ಡೌನ್ ಮಧ್ಯೆ ನಗರಗಳಿಂದ ತಮ್ಮ ಹಳ್ಳಿಗಳಿಗೆ ದೊಡ್ಡ ಪ್ರಮಾಣದಲ್ಲಿ ಕಾರ್ಮಿಕರು ವಲಸೆ ಹೊರಟಿದ್ದಾರೆ.ಈ ಬಗೆಗೆ ಸರ್ಕಾರ ಯಾವ ಬಗೆಯ ಕ್ರಮಗಳನ್ನು ಕೈಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರದಿಂದ ಸ್ಥಿತಿ ವರದಿಯನ್ನು ಕೇಳಿದೆ.

ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಿ ಇಲ್ಲದಿದ್ದರೆ ಅವಧಿ ವಿಸ್ತರಣೆ: ರಾಜ್ಯದ ಜನತೆಗೆ ಸಿಎಂ ಬಿಎಸ್ವೈ ಎಚ್ಚರಿಕೆ
ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ರಾಜ್ಯದ ಜತೆಗೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಅವಧಿ ವಿಸ್ತರಣೆಯಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನತೆಗೆ ಎಚ್ಚರಿಸಿದ್ದಾರೆ.

ನರೇಗಾ ಯೋಜನೆಯಡಿ 27.5 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗೆ 611 ಕೋಟಿ ವರ್ಗಾಯಿಸಿದ ಸಿಎಂ ಯೋಗಿ ಆದಿತ್ಯನಾಥ್!
21 ದಿನಗಳ ಲಾಕ್ ಡೌನ್ ಹಿನ್ನೆಲೆಯಲ್ಲಿ ದಿನಗೂಲಿ ಕೆಲಸಗಾರರು ಕಂಗಲಾಗಿದ್ದರು. ಇದಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ನರೇಗಾ ಯೋಜನೆಯಡಿ 27.5 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 611 ಕೋಟಿ ರುಪಾಯಿಯನ್ನು ವರ್ಗಾಹಿಸಿದೆ.

ಶ್ರೀರಂಗಪಟ್ಟಣ: ಕೊರೋನಾ ಭೀತಿ, ಹತ್ತೇ ನಿಮಿಷದಲ್ಲಿ ಮುಗಿದ ಮದುವೆ
ಶ್ರೀರಂಗಪಟ್ಟಣದಲ್ಲಿ ನಿಗದಿಯಾಗಿದ್ದ ವಿವಾಹವನ್ನು ಮನೆ ಮಂದಿ ಸೇರಿ ಕೇವಲ ಹತ್ತೇ ನಿಮಿಷಗಳಲ್ಲಿ ನೆರವೇರಿಸಿದ ಪ್ರಸಂಗ ಕೆಆರ್ಎಸ್ನಲ್ಲಿ ನಡೆದಿದೆ.

