coronavirus

ಕೋವಿಡ್-19: ದೇಶಾದ್ಯಂತ ಒಂದೇ ದಿನ 4,209 ಮಂದಿ ಸಾವು, 2.59 ಲಕ್ಷ ಹೊಸ ಸೋಂಕು ಪ್ರಕರಣ ವರದಿ
ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.59 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,209 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ: ರಾಜ್ಯದಲ್ಲಿ ಇಂದು 1,20,711 ಕೋವಿಡ್ ಟೆಸ್ಟ್; 28,869 ಜನರಿಗೆ ಸೋಂಕು, 548 ಮಂದಿ ಸಾವು
ರಾಜ್ಯದಲ್ಲಿ ಇಂದು ಹೊಸದಾಗಿ 28,869 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 548 ಮಂದಿ ಸಾವನ್ನಪ್ಪಿದ್ದಾರೆ.

ಮೀರತ್: ಹುಟ್ಟುಹಬ್ಬವನ್ನು ಒಟ್ಟಿಗೆ ಆಚರಿಸಿದ ಅವಳಿ ಸೋದರರು ಕೊರೋನಾದಿಂದ ಸಾವು
ತಮ್ಮ 24 ನೇ ಹುಟ್ಟುಹಬ್ಬವನ್ನು ಒಟ್ಟಿಗೆ ಆಚರಿಸಿದ ಸುಮಾರು ಒಂದು ತಿಂಗಳ ನಂತರ, ಉತ್ತರ ಪ್ರದೇಶದ ಮೀರತ್‌ನಲ್ಲಿ ಅವಳಿ ಸಹೋದರರು ಕೇವಲ ಒಂದೇ ಗಂಟೆಗಳ ಅಂತರದಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಕೊರೋನಾ: ರಾಜ್ಯದಲ್ಲಿ ಇಂದು 97,236 ಕೋವಿಡ್ ಟೆಸ್ಟ್, 38,603 ಜನರಿಗೆ ಸೋಂಕು, 476 ಮಂದಿ ಸಾವು
ರಾಜ್ಯದಲ್ಲಿ ಇಂದು ಹೊಸದಾಗಿ 38,603 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 476 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು ಕೊರೋನಾಗೆ 373 ಬಲಿ, ಬೆಂಗಳೂರಿನಲ್ಲಿ 14,316 ಸೇರಿ 41,779 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದೆ. ಒಂದೇ ದಿನ ಬರೋಬ್ಬರಿ 41,779 ಮಂದಿಗೆ ಕೊರೋನಾ ವಕ್ಕರಿಸಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆ: 517 ಬಲಿ, ಬೆಂಗಳೂರಿನಲ್ಲಿ 16,286 ಸೇರಿ 39,998 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಒಂದೇ ದಿನ ಬರೋಬ್ಬರಿ 517 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20,368ಕ್ಕೆ ಏರಿಕೆಯಾಗಿದೆ.

ಕೋವಿಡ್ ಬಿ.1.617 ರೂಪಾಂತರ ಭಾರತದ್ದಲ್ಲ; ಪದ ಬಳಕೆಗೆ ಆಧಾರವಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ
ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಕಾರಣವಾಗಿರುವ 'ಭಾರತೀಯ ರೂಪಾಂತರ' ಎಂದು ಕರೆಯಲ್ಪಡುವ ಬಿ.1.617 ರೂಪಾಂತರ ಪದ ಬಳಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ಡಬ್ಲ್ಯುಎಚ್‌ಒ 'ಭಾರತೀಯ' ಎಂಬ ಪದವನ್ನು ಎಲ್ಲೂ ಬಳಸಿಲ್ಲ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಲಾಕ್ ಡೌನ್ ಉಲ್ಲಂಘನೆ: ಪೊಲೀಸರಿಂದ 2410 ವಾಹನ ಜಪ್ತಿ
ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಲಾಕ್ ಡೌನ್ ಜಾರಿಯಾಗಿದ್ದರು ನಿಯಮ ಮೀರಿ ರಸ್ತೆಗಿಳಿದಿದ್ದ 2410 ವಾಹನಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

ಚಾಮರಾಜನಗರದಲ್ಲಿ ಕೊರೋನಾ ಸೋಂಕಿನಿಂದ ಅಪ್ಪ, ಅಮ್ಮ ಸಾವು: 4 ವರ್ಷದ ಮಗು ಅನಾಥ!
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಚಾಮರಾಜನಗರದಲ್ಲಿ ಗಂಡ, ಹೆಂಡತಿ ಕೋವಿಡ್ ನಿಂದ ಮೃತಪಟ್ಟಿದ್ದು ನಾಲ್ಕೂವರೆ ವರ್ಷದ ಹೆಣ್ಣುಮಗು ಅನಾಥಳಾಗಿದ್ದಾಳೆ.

