coronavirus

ಸುಪ್ರೀಂ ಕೋರ್ಟ್ ಸಿಬ್ಬಂದಿಗಳಿಗೆ ಕೊರೋನಾ: ನಿಗದಿಗಿಂತ ಒಂದು ಗಂಟೆ ತಡವಾಗಿ ನ್ಯಾಯಾಂಗ ಕಲಾಪ ಪ್ರಾರಂಭ
ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ಸೋಮವಾರ ಬೆಳಿಗ್ಗೆ ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ.

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 10 ಸಾವಿರ ಗಡಿ ದಾಟಿದ ಪ್ರಕರಣ, ಬೆಂಗಳೂರಿನಲ್ಲೇ 7,584 ಸೋಂಕು ಪತ್ತೆ!
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ
ದೇಶದಲ್ಲಿ ಕೊರೋನಾ ಮಹಾಮಾರಿ ಉಲ್ಭಣಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಸೋಂಕು ನಿರೋಧಕ ಔಷಧಿ ರೆಮ್ ಡೆಸಿವಿರ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು 36 ಬಲಿ, ಬೆಂಗಳೂರಿನಲ್ಲಿ 4,384 ಸೇರಿ 6,955 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 6,955 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,55,040ಕ್ಕೆ ಏರಿಕೆಯಾಗಿದೆ.

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಸೋಂಕು
ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.

ಡಿಸಿಎಂ ಕಾರಜೋಳಗೆ 2ನೇ ಬಾರಿಗೆ ವಕ್ಕರಿಸಿದ ಕೊರೋನಾ: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಲೋಕೋಪಯೋಗಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಕೊಡಗು-ಕೇರಳ ಗಡಿ ಚೆಕ್ಪೋಸ್ಟ್ಗಳಲ್ಲಿ ರಾತ್ರಿ ವೇಳೆ ಸಿಬ್ಬಂದಿಗಳ ಗೈರು: ಸ್ಥಳೀಯರಲ್ಲಿ ಆತಂಕ
ಕೊಡಗು-ಕೇರಳ ಗಡಿಯಲ್ಲಿ ರಾತ್ರಿಯ ಸಮಯದಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲನೆಗಾಗಿ ಸಿಬ್ಬಂದಿಗಳಿಲ್ಲದಿರುವುದು ಇಲ್ಲಿನ ಸ್ಥಳೀಯ ನಿವಾಸಿಗಳಿಗೆ ಆಘಾತವನ್ನುಂಟು ಮಾಡಿದೆ.

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಂದು ಬೆಂಗಳೂರಿನಲ್ಲಿ 370 ಸೇರಿ 662 ಮಂದಿಗೆ ಪಾಸಿಟಿವ್, 4 ಬಲಿ!
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಂಗಳವಾರ 662 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,17,571ಕ್ಕೆ ಏರಿಕೆಯಾಗಿದೆ.

ಕೊರೋನಾ ಸಂಕಷ್ಟದಲ್ಲೂ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಚಿವ ಜಗದೀಶ್ ಶೆಟ್ಟರ್
ಕೊರೋನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲಿ ನಮ್ಮ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ.

