coronavirus

ಮಧ್ಯಪ್ರದೇಶ ಸಚಿವರಿಗೆ ಕೊರೋನಾ ಪಾಸಿಟಿವ್: ಉಳಿದ ಸಚಿವರಿಗೆ ಹೆಚ್ಚಿದ ಆತಂಕ
ಮಧ್ಯಪ್ರದೇಶ ಸರ್ಕಾರದ ಸಂಪುಟದ ಸಚಿವರೊಬ್ಬರಿಗೆ, ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಸಚಿವ ಸಂಪುಟದಲ್ಲಿರುವ ಉಳಿದ ಸಚಿವರಲ್ಲಿ ಆತಂಕ ಹೆಚ್ಚಾಗುವಂತಾಗಿದೆ.

ಸಾರಿ, ಐಎಲ್ಐ ಪ್ರಕರಣಗಳ ವರದಿ ಸಂಗ್ರಹಿಸುವಲ್ಲಿ ಅಧಿಕಾರಿಗಳು ವಿಫಲ: ಬೆಂಗಳೂರಿನಲ್ಲಿ ಲಾಕ್ಡೌನ್ ನಿಶ್ಫಲ?
ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡಿ ಸೋಂಕು ಹರಡುವುದನ್ನು ತಡೆಯಲು ಕೆಲ ದಿನಗಳ ಹಿಂದಷ್ಟೇ ಸಿಲಿಕಾನ್ ಸಿಟಿಯಲ್ಲಿ ಒಂದು ವಾರದ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಆದರೆ, ಈ ಲಾಕ್ಡೌನ್ ವಿಫಲವಾಯಿತೇ ಎಂಬ ಅನುಮಾನಗಳು ಇದೀಗ ಮೂಡಲು ಆರಂಭಿಸಿವೆ.

ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಅಬ್ಬರ: 10 ದಿನದಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣ!
ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಇದೀಗ ಅತೀ ವೇಗವಾಗಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ಮೇಘಾಲಯಗಳ ಸಾಲಿಗೆ ಇದೀಗ ಕರ್ನಾಟಕ ಕೂಡ ಸೇರಿಕೊಂಡಂತಾಗಿದೆ.

ಸೋಂಕಿತ ವ್ಯಕ್ತಿ ಸಾವು: ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧಲೆ, ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ
ಕೊರೋನಾ ಸೋಂಕಿನಿಂದ ಅಥಣಿ ಮೂಲದವರೆನ್ನಲಾದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ಆಸ್ಪತ್ರೆ (ಬಿಮ್ಸ್) ಆವರಣದಲ್ಲಿ ನಿಲ್ಲಿಸಿದ್ದ ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 45,720 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಸೋಂಕು ಪತ್ತೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕು ದೃಢಪಡುವ ಬೆಳವಣಿಗೆಗಳೂ ಮುಂದುವರೆದಿದೆ. ಗುರುವಾರ ದೇಶದಾದ್ಯಂತ ದಾಖಲೆಯ 45,720 ಹೊಸ ಸೋಂಕಿತರು ಪತ್ತೆಯಾಗಿ ಒಟ್ಟು ಸೋಂಕಿತರ ಸಂಖ್ಯೆ 12,38,635 ತಲುಪಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 3,50,823 ಕೋವಿಡ್ ಪರೀಕ್ಷೆ, ಜುಲೈ 22ರವರೆಗೆ ಒಟ್ಟಾರೆ 1,50,75,369 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,50,823 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 63,937 ಮಂದಿಯಲ್ಲಿ ಸೋಂಕು ಪತ್ತೆ
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆನ್ನು ಬಿಡದಂತೆ ಕಾಡುತ್ತಿದ್ದು, ಇದರಂತೆ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 63,937 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಿಶ್ವದಾದ್ಯಂತ 24 ಗಂಟೆಗಳಲ್ಲಿ 2,78,877 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.53 ಕೋಟಿಗೆ ಏರಿಕೆ
ವಿಶ್ವದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,78,877 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಈ ವರೆಗೂ ವಿವಿಧ ದೇಶಗಳಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತರ ಸಂಖ್ಯೆ 15,374,394ಕ್ಕೆ ಏರಿಕೆಯಾಗಿದೆ.

ಐಸಿಯುವಿನಲ್ಲಿ 105 ವರ್ಷದ ಸೋಂಕಿತ ವೃದ್ಧ: ರೆಮ್ಡೆಸಿವಿರ್ ಔಷಧಿ ನೀಡಲು ಮುಂದಾದ ವೈದ್ಯರು
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಕೊರೋನಾ ವೈರಸ್'ಗೆ ಚಿಕಿತ್ಸೆ ಪಡೆಯುತ್ತಿರುವ 105 ವರ್ಷದ ವೃದ್ಧ ವ್ಯಕ್ತಿಯೊಬ್ಬರಿಗೆ ರೆಮ್ಡೆಸಿವಿರ್ ಔಷಧಿ ನೀಡಲು ವೈದ್ಯರು ಮುಂದಾಗಿದ್ದಾರೆಂದು ತಿಳಿದುಬಂದಿದೆ.

