coronavirus

ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ: ಸಿಎಂ ಮಮತಾ ಬ್ಯಾನರ್ಜಿ ಸಂತಾಪ
ಕೊರೋನಾ ಮಹಾಮಾರಿ ವೈರಸ್'ಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್ (60) ಬಲಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾಗೆ ಉಚಿತ ಚಿಕಿತ್ಸೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ
ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರಗಳಲ್ಲಿ ದರ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಕುರಿತು ದೂರುಗಳು ಬಂದರೆ ಆಸ್ಪತ್ರೆಯ ನಿರ್ದೇಶಕರು ಜವಾಬ್ದಾರಿ: ಸಚಿವ ಸುಧಾಕರ್
ಕೊರೋನಾ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಕುರಿತು ದೂರುಗಳು ಬಂದರೆ ಅದಕ್ಕೆ ಆಸ್ಪತ್ರೆಯ ನಿರ್ದೇಶಕರೇ ಜವಾಬ್ದಾರರಾಗುತ್ತಾರೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸದಾಕರ್ ಅವರು ಮಂಗಳವಾರ ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 15968 ಮಂದಿಯಲ್ಲಿ ವೈರಸ್ ಪತ್ತೆ, 4.56 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಒಂದೇ ದಿನ 15,968 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಫೀವರ್ ಕ್ಲಿನಿಕ್ 24 ಗಂಟೆ ಕಾರ್ಯನಿರ್ವಹಣೆಗೆ ಸೂಚನೆ
ರಾಜ್ಯದ್ಯಂತ ಜ್ವರ ಚಿಕಿತ್ಸಾಲಯಗಳನ್ನು ಹೆಚ್ಚಿಸುವ ಜೊತೆಗೆ 24*7 ಕಾರ್ಯನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

ಕೋವಿಡ್-19 ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸುತ್ತಿರುವ ಪ್ರತೀಯೊಬ್ಬರ ವಿರುದ್ಧ ಪ್ರಮುಖವಾಗಿ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸೋಂಕು ಲಕ್ಷಣ ಇಲ್ಲದವರು 10 ದಿನದ ಬಳಿಕ ಬಿಡುಗಡೆ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ
ರೋಗ ಲಕ್ಷಣವಿಲ್ಲದ ಕೊರೋನಾ ಸೋಂಕಿತರನ್ನು 10 ದಿನದ ಬಳಿಕ ಸೋಂಕು ಪರೀಕ್ಷೆ ಇಲ್ಲದೆ ಕೊರೋನಾ ವೈರಸ್ ಕೇರ್ ಸೆಂಟರ್ ನಿಂದ ಬಿಡುಗಡೆ ಮಾಡಬಹುದು ಎಂದು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.

ವಿಶ್ವದ ನಂಬರ್ 1 ಟೆನಿಸ್ ತಾರೆ ನೋವಾಕ್ ಜೋಕೊವಿಚ್ ಗೂ ಕೊರೋನಾ!
ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ ನೋವಾಕ್ ಜೋಕೊವಿಚ್ ಅವರು ಬೆಲ್ ಗ್ರಿಡ್ ನಲ್ಲಿ ಕೋವಿಡ್-19 ಟೆಸ್ಟ್ ಒಳಗಾಗಿದ್ದು ಇದೀಗ ಪಾಸಿಟಿವ್ ಎಂದು ವರದಿ ಬಂದಿದೆ.

ಇಂದು ಬೆಂಗಳೂರಿನಲ್ಲಿ ಶತಕ, ರಾಜ್ಯದಲ್ಲಿ ತ್ರಿಶತಕ ಬಾರಿಸಿದ ಕೊರೋನಾ, 8 ಮಂದಿ ಸಾವು!
ದಿನ ಕಳೆಯುತ್ತಿದ್ದಂತೆ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ರುದ್ರ ನರ್ತನ ಶುರು ಮಾಡಿದ್ದು ಇಂದು ಸಹ ಹೊಸದಾಗಿ 107 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಇಂದು ಒಂದೇ ದಿನ 322 ಮಂದಿಗೆ ಸೋಂಕು ತಗುಲಿದೆ.

