CPM, Congress

ಗುಜರಾತ್‌ನಲ್ಲಿ ಎಎಪಿ ಜತೆ ಮೈತ್ರಿ ಮುರಿದ ಕಾಂಗ್ರೆಸ್; ಇಂಡಿಯಾ ಬ್ಲಾಕ್ ನಲ್ಲಿ ಭಿನ್ನಮತ ಮತ್ತಷ್ಟು ತೀವ್ರ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ ಗೋಹಿಲ್ ಅವರು, ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ಅಮೆರಿಕನ್ ವೀಸಾ ರದ್ದತಿ ಬಗ್ಗೆ ಅಮೆರಿಕ ಜೊತೆ ವಿದೇಶಾಂಗ ಇಲಾಖೆ ಚರ್ಚಿಸಿದೆಯೇ: ಕಾಂಗ್ರೆಸ್ ಪ್ರಶ್ನೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಅಮೆರಿಕನ್ ವಲಸೆ ವಕೀಲರ ಸಂಘ ನಿನ್ನೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡು, ಭಾರತದಲ್ಲಿ ನಮಗೆ ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಅಧಿಕಾರಿಗಳು: BJP ಖಂಡನೆ, ಕ್ಷಮೆಗೆ ಆಗ್ರಹ
ಬೀದರ್ನ ಸಾಯಿ ಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ಒಪ್ಪದೇ ಗಣಿತ ಪರೀಕ್ಷೆಯಿಂದ ಹೊರಗುಳಿದಿದ್ದಾನೆ. ಇದರಿಂದ ಆತನ ಎಂಜಿನಿಯರಿಂಗ್ ಭವಿಷ್ಯ ಅತಂತ್ರಗೊಂಡಿದೆ.

ಜಾತಿ ಜನಗಣತಿ ವರದಿ ಮೂಲಕ ಸಮಾಜ ಒಡೆಯಲು ಸಂಚು: ಸರ್ಕಾರದ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ
ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ.

ಸುಪ್ರೀಂ ಕೋರ್ಟ್ ನಿಲುವನ್ನು ಸ್ವಾಗತಿಸಿದ ವಿರೋಧಪಕ್ಷಗಳು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮುಂದುವರಿಸಲು ನಿರ್ಧಾರ
ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಇಮ್ರಾನ್ ಪ್ರತಾಪ್‌ಗಢಿ, ಈ ಮಹತ್ವದ ವಿಷಯವನ್ನು ಆಲಿಸಲು ಸಮಯ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದರು.

ಕೊರೋನಾದಿಂದ ಜನ ಸಾಯುವಾಗ ಬೆಲೆಯೇರಿಕೆ ಮಾಡಿದ ಪಾಪಿಗಳು ಈ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಯತ್ನಾಳ್ ತವರಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಣವನ್ನು ಬೇರೆಡೆಗೆ ತಿರುಗಿಸಿದ್ದು, ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವತ್ತ ಗಮನಹರಿಸುತ್ತಿದೆ.

News Headlines 17-04-25 | ಜಾತಿ ಗಣತಿ ಕುರಿತ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಳ್ಳದೆ ಮುಕ್ತಾಯ; ಸಂಧಾನ ಸಫಲ, ಲಾರಿ ಮುಷ್ಕರ ವಾಪಸ್; ಮುಸ್ಲಿಂ ಮೀಸಲಾತಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ!


