CPM, Congress

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ, ಗ್ಯಾರಂಟಿಯಿಂದ ಆರ್ಥಿಕ ಹೊರೆ: ಆರ್ ವಿ ದೇಶಪಾಂಡೆ
ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ವಿಚಾರದಲ್ಲಿ ತಪ್ಪೇ ಮಾಡಿಲ್ಲ ಎಂದ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

HDK, ನಿರಾಣಿ, ಜೊಲ್ಲೆ, ರೆಡ್ಡಿ ಪ್ರಾಸಿಕ್ಯೂಷನ್'ಗೆ ಕಾಂಗ್ರೆಸ್ ಪಟ್ಟು: ಯಾವುದೇ ಮನವಿ ಪತ್ರ ಬಾಕಿಯಿಲ್ಲ ಎಂದ ರಾಜ್ಯಪಾಲ ಗೆಹ್ಲೋಟ್
ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಚಿವರು ಶನಿವಾರ ಧರಣಿ ನಡೆಸಿದ್ದು, ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ರಾಜಭವನ ಚಲೋ ನಡೆಸಿದರು. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿರಲಿಲ್ಲ.

ರಾಜಭವನ ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧ ಕಾಂಗ್ರೆಸ್ ಕಚೇರಿಯಾಗಿದೆಯೇ: ಅಶೋಕ್ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ?

ರಾಜ್ಯಪಾಲರನ್ನು ಹೆದರಿಸಲು ಕಾಂಗ್ರೆಸ್ ನಿಂದ ರಾಜಭವನ ಚಲೋ: ಪ್ರಹ್ಲಾದ್ ಜೋಶಿ
ರಾಜ್ಯಪಾಲರು ದಲಿತರು, ಅವರ ಬಗ್ಗೆ ನೀವು ಮಾತನಾಡಿದ್ದೀರಿ. ರಾಜ್ಯಪಾಲರು ತನಿಖೆ ಮಾಡಿ ಅಂತಾ ಹೇಳಿದ್ದಾರೆ. ನಿಮಗೂ ಕೇಜ್ರಿವಾಲ್ ತರಹ ನಾಚಿಕೆ ಮಾನ ಮರ್ಯಾದೆ ಇಲ್ಲ ಅನಿಸುತ್ತೆ

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಗೆ ಸಂಕಷ್ಟ: ವಿಧಾನಸಭೆ ಚುನಾವಣೆಗೂ ಮುನ್ನ ಪ್ರಬಲ ನಾಯಕರು ಪಕ್ಷಕ್ಕೆ ಗುಡ್ ಬೈ!
ಜಮ್ಮುವಿನ ಹೊರವಲಯದಲ್ಲಿರುವ ಛಂಬ್ ವಿಧಾನಸಭಾ ಕ್ಷೇತ್ರದ ಖೌರ್ ಬ್ಲಾಕ್ನಲ್ಲಿ ಮಾಜಿ ಶಾಸಕ ರಾಜೀವ್ ಶರ್ಮಾ ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ರ್ಯಾಲಿ ನಡೆಸಿದರು.

ಕಾಂಗ್ರೆಸ್ ನಾಯಕರಿಂದ ‘ರಾಜಭವನ ಚಲೋ’; ಕುಮಾರಸ್ವಾಮಿ, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.

ಟ್ರಸ್ಟ್ಗೆ KIADB ಜಮೀನು: ಊರಿಗೆ ಉಪದೇಶ ಕೊಡುವ ಖರ್ಗೆ ಈಗ ಉತ್ತರಿಸಲಿ- ಹೆಚ್.ಡಿ ಕುಮಾರಸ್ವಾಮಿ
ಹಲವಾರು ಜನರಿಗೆ ಈ ರೀತಿಯಲ್ಲಿ ಜಾಗ ಕೊಟ್ಟಿದ್ದಾರೆ, ಬೇಕಾದಷ್ಟು ಪ್ರಕರಣಗಳು ನಡೆದಿವೆ. ಖರ್ಗೆ ಅವರು ದೇಶಕ್ಕೆ, ನಾಡಿಗೆಲ್ಲ ಬುದ್ದಿ ಹೇಳುವವರು, ಉಪದೇಶ ಮಾಡುವವರು. ಯಾವ ಆಧಾರದ ಮೇಲೆ ಈ ಜಾಗವನ್ನು ಇವರು ತೆಗೆದುಕೊಂಡಿದ್ದಾರೆ?

