CPM, Congress

ಸಂವಿಧಾನ ರಕ್ಷಣೆಗೆ ಹೋರಾಟ ಮಾಡ್ತೀವಿ: ವೇಣುಗೋಪಾಲ್
ಸಂವಿಧಾನದ ರಕ್ಷಣೆಗಾಗಿ ಜನರು ಇಂಡಿಯಾ ಬಣಕ್ಕೆ ಬಹುದೊಡ್ಡ ಜವಾಬ್ದಾರಿ ನೀಡಿದ್ದಾರೆ ಮತ್ತು ಅದಕ್ಕಾಗಿ ಪ್ರತಿಪಕ್ಷಗಳು ಹೋರಾಡಲು ನಿರ್ಧರಿಸಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ.

ದಲಿತರಿಗೆ ಬಿಜೆಪಿಯಲ್ಲಿ ಸೂಕ್ತ ಪ್ರಾತಿನಿಧ್ಯ, ನ್ಯಾಯ ಸಿಗುತ್ತಿಲ್ಲ: ನಾಯಕರ ಅಭಿಮತ
ಕರ್ನಾಟಕದಿಂದ ಏಳು ಬಾರಿ ಸಂಸದರಾಗಿದ್ದ ರಮೇಶ್ ಜಿಗಜಿಣಗಿ ಮತ್ತು ಮೊದಲ ಬಾರಿಗೆ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ಅವರು ದಲಿತ ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆವು ಆದರೆ ಅವರಿಗೆ ಏನೂ ಹುದ್ದೆಗಳು ಸಿಗಲಿಲ್ಲ.

ಸೂರಜ್ ರೇವಣ್ಣ ಬಂಧನ: ಮಾಧ್ಯಮಗಳ ಪ್ರಶ್ನೆಗೆ HDK ಸಿಡಿಮಿಡಿ; ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ? ಎಂದ ಕೇಂದ್ರ ಸಚಿವ
ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತಾರಾ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಹೇಳಿದರು.

ಉಪಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಂದಲೇ ಗೆಲುವು ಸಾಧಿಸುತ್ತೇವೆಂದು ಕಾಂಗ್ರೆಸ್ ತಿಳಿದಿದೆ. ಆದರೆ, ಜನರು ಈ ಯೋಜನೆಗಳನ್ನು ತಿರಸ್ಕಿರಿಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಹೆಚ್ಚುವರಿ ಡಿಸಿಎಂ ಬೇಡಿಕೆ ಮತ್ತೆ ಮುನ್ನಲೆಗೆ: ಕೇಳೋದರಲ್ಲಿ ತಪ್ಪೇನು ಇಲ್ಲ ಎಂದ ಸಚಿವ ರಾಜಣ್ಣ
ಜಮೀರ್ ಅಹಮದ್ ಖಾನ್, ಸತೀಶ್ ಜಾರಕಿಹೊಳಿ ಅವರ ಬಳಿಕ ಇದೀಗ ಕೆಎನ್ ರಾಜಣ್ಣ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಹೆಚ್ಚು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸ್ವಾರ್ಥಕ್ಕಾಗಿ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದ ಕಾಂಗ್ರೆಸ್: ಸಿಟಿ ರವಿ ವಾಗ್ದಾಳಿ
ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷ ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದ್ದಾರೆ.

2006 ಮಾದರಿಯಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಕಾಂಗ್ರೆಸ್ ಮಣ್ಣು ಮುಕ್ಕುತ್ತಿತ್ತು: ಹೆಚ್.ಡಿ ಕುಮಾರಸ್ವಾಮಿ
2006ರ ಮಾದರಿಯಲ್ಲೇ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಿದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುತ್ತಿತ್ತು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಶನಿವಾರ ಹೇಳಿದರು.

ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಯಾವಾಗ ಎಂಬುದು ಕುಮಾರಸ್ವಾಮಿಯವರಿಗೆ ಗೊತ್ತು: ವಿ ಸೋಮಣ್ಣ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಸರ್ಕಾರ ಯಾವಾಗ ಪತನವಾಗಲಿದೆ ಎಂಬುದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ಡಿ ಕುಮಾರಸ್ವಾಮಿ ಅವರಿಗೆ ತಿಳಿದಿರಬಹುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಗ್ಯಾರಂಟಿ ಪೂರೈಕೆಗೆ ಹಣ ಹೊಂದಿಸಲು ಸರ್ಕಾರ ಕಸರತ್ತು; ಆದಾಯ ಹೆಚ್ಚಿಸಲು 'ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್' ನೇಮಕ; ವಿವಾದ ಸೃಷ್ಟಿ
ರಾಜ್ಯದ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸಿ ಹೆಚ್ಚುವರಿ ಆದಾಯ ತರುವ ಸಲುವಾಗಿ ಸಲಹೆ ನೀಡಲು ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಎಂಬ ವಿದೇಶಿ ಸಂಸ್ಥೆಯನ್ನು ಸರ್ಕಾರ ನೇಮಿಸಿದೆ. ಈ ಸಂಸ್ಥೆಗೆ ಆರು ತಿಂಗಳಿಗೆ 9.5 ಕೋಟಿ ರೂ. ಸಂಭಾವನೆಯನ್ನು ನಿಗದಿಪಡಿಸಿದೆ.

