CPM, Congress

ಪೋಕ್ಸೊ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರು!
ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಅಭಿವೃದ್ಧಿ ಕೆಲಸಗಳಿಗಾಗಿ ಇಂಧನ ಬೆಲೆ ಏರಿಕೆ- ಸಿದ್ದು; #renukaswamycase ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು!

ಅಭಿವೃದ್ಧಿ ಕೆಲಸಗಳಿಗಾಗಿ ಇಂಧನ ಬೆಲೆ ಏರಿಕೆ: ಸಿಎಂ ಸಿದ್ದು; #renukaswamycase ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು! ಇವು ಇಂದಿನ ಪ್ರಮುಖ ಸುದ್ದಿಗಳು 16-06-24

ಅಭಿವೃದ್ಧಿ ಕೆಲಸಗಳಿಗೆ ಬಳಕೆ: ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಘೋಷಿಸಿತ್ತು.

ಭಾರತದಲ್ಲಿ EVMಗಳು 'ಬ್ಲಾಕ್ ಬಾಕ್ಸ್' ಇದ್ದಂತೆ: ಇವಿಎಂ 'ವಿರೋಧಿ' ಎಲಾನ್ ಮಸ್ಕ್ ಗೆ ರಾಹುಲ್ ಗಾಂಧಿ ಬೆಂಬಲ
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ವಿದ್ಯುನ್ಮಾನ ಮತಯಂತ್ರಗಳ (EVM) ಸಮಸ್ಯೆಯನ್ನು ಬಲವಾಗಿ ಎತ್ತಿದ್ದವು. ಆದರೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಈ ವಿಷಯ ತಣ್ಣಗಾಗಿತ್ತು.

ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ವಿಧಿಸಿದರೂ ಆಶ್ಚರ್ಯವಿಲ್ಲ: ಬಿಜೆಪಿ ಲೇವಡಿ
ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ 3 ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ದ್ವೇಷ ರಾಜಕಾರಣ ಬಿಜೆಪಿ ಕೆಲಸ, ಎಷ್ಟೇ ಸಚಿವ ಸ್ಥಾನ ನೀಡಿದರೂ ದಕ್ಷಿಣ ಭಾರತದ ಜನ ಬಿಜೆಪಿಗೆ ಬೆಂಬಲ ನೀಡಲ್ಲ: ಸಿದ್ದರಾಮಯ್ಯ
ಬಿಜೆಪಿ ಆರ್ಎಸ್ಎಸ್ನ ಅಡಿಪಾಯ ಇರುವಂತಹ ಪಕ್ಷ. ಆರ್ಎಸ್ಎಸ್ನ ಮುಖವಾಡ ಇರುವಂತಹ ಪಕ್ಷ ಅದು. ಇಂತಹ ಪಕ್ಷವನ್ನು ನಮ್ಮ ದಕ್ಷಿಣ ಭಾರತದ ಜನ ಯಾರೂ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಕರ್ನಾಟಕದಲ್ಲಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ: ಡಿಕೆ ಶಿವಕುಮಾರ್
ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.

ಕಾಂಗ್ರೆಸ್ 'ಗ್ಯಾರಂಟಿಗಳು ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಆಡಳಿತಾರೂಢ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದ್ದು, ಗ್ಯಾರಂಟಿ ಕುರಿತು ಪಕ್ಷದ ನಾಯಕರ ಹೇಳಿಕೆಗಳೇ ಅದಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

