ದೇಶಪ್ರಧಾನಿ ಮೋದಿಯನ್ನು ಟೀಕಿಸುವ ಫೋಸ್ಟರ್ ಗಳು: 15 ಜನರ ಬಂಧನ, 17 ಎಫ್ ಐ ಆರ್ ದಾಖಲು
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಪೋಸ್ಟರ್ ಗಳನ್ನು ದೆಹಲಿಯ ವಿವಿಧೆಡೆ ಅಂಟಿಸಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದು, 17 ಎಫ್ ಐಆರ್ ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.