- Tag results for dakshina kannada
![]() | ಮಂಗಳೂರು: ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ದೆಹಲಿಯ 'ಅಮೃತ ವನ' ನಿರ್ಮಾಣಕ್ಕೆ ದಕ್ಷಿಣ ಕನ್ನಡದಿಂದ ಮಣ್ಣನ್ನು ಕಳುಹಿಸಲಾಗುವುದು: ನಳಿನ್ ಕುಮಾರ್ ಕಟೀಲ್ಮಂಗಳೂರಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ‘ದಕ್ಷಿಣ ಕನ್ನಡದ ಮಣ್ಣನ್ನು ಸಂಗ್ರಹಿಸಿ, ದೆಹಲಿಯ ಕರ್ತವ್ಯ ಪಥದಲ್ಲಿ ಹುತಾತ್ಮರ ಸ್ಮಾರಕ ಉದ್ಯಾನವನ 'ಅಮೃತ ವನ' ನಿರ್ಮಾಣಕ್ಕೆ ಕಳುಹಿಸಲಾಗುವುದು ಎಂದರು. |
![]() | ಸುಳ್ಯ: ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ; ಹಾವೇರಿ ಮೂಲದ ಮೂವರು ಸಾವು, ಓರ್ವನಿಗೆ ಗಾಯಸುಳ್ಯ ಸಮೀಪದ ಅಡ್ಕಾರ್ ಬಳಿ ರಸ್ತೆಬದಿಯಲ್ಲಿ ನಿಂತಿದ್ದವರಿಗೆ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. |
![]() | ದಕ್ಷಿಣ ಕನ್ನಡ: ಪೊಲೀಸ್ ಠಾಣೆ ಬಳಿಯೇ ಯುವತಿಯ ಕತ್ತು ಸೀಳಿದ ಯುವಕ, ಚಿಕಿತ್ಸೆಗೆ ಸ್ಪಂದಿಸದೆ ಸಾವುದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿ ಗುರುವಾರ ಹಾಡಹಗಲೇ 18 ವರ್ಷದ ಯುವತಿಯೊಬ್ಬಳ ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಗೌರಿ ಎಂದು ಗುರುತಿಸಲಾಗಿದೆ. |
![]() | ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿ: ಸೌದಿಯಲ್ಲಿ ಬಂಧನಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. |
![]() | ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಮಹಿಳೆಯನ್ನು ಡ್ರಾಪ್ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆಸುಳ್ಯದಲ್ಲಿ ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಕ್ಷಿಣ ಕನ್ನಡ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂತ್ರಸ್ತ ಮೊಹಮ್ಮದ್ ಜಲೀಲ್ (39) ಎಂಬಾತ ತನ್ನ ಕಾರಿನಲ್ಲಿ ಮಹಿಳೆಯನ್ನು ಸುಳ್ಯಕ್ಕೆ ಇಳಿಸಿ ಹಿಂತಿರುಗುತ್ತಿದ್ದಾಗ ಶನಿವಾರ ಈ ಘಟನೆ ಸಂಭವಿಸಿದೆ. |
![]() | ಮಂಗಳೂರು: ತೆಂಗಿನ ಮರದಿಂದ ಬಿದ್ದು 30 ವರ್ಷದ ಮಹಿಳೆ ಸಾವು!ದಕ್ಷಿಣ ಕನ್ನಡ ಜಿಲ್ಲೆಯ ಪುಂಚಪ್ಪಾಡಿ ಗ್ರಾಮದಲ್ಲಿ 30 ವರ್ಷದ ಮಹಿಳೆಯೊಬ್ಬರು ತೆಂಗಿನ ಮರ ಹತ್ತುವ ಮತ್ತು ತೆಂಗಿನಕಾಯಿ ಕೀಳುವ ಪರಿಣತಿಗೆ ಹೆಸರುವಾಸಿಯಾಗಿದ್ದು, ಬುಧವಾರ ಕೆಲಸ ಮಾಡುವಾಗ ಮರದಿಂದ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳ ಸಮೀಪ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಬುಧವಾರದಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಾಲಕಿಯೊಬ್ಬಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | ದಕ್ಷಿಣ ಕನ್ನಡ: 16 ವರ್ಷದ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ; ಐವರ ಪೈಕಿ ನಾಲ್ವರ ಬಂಧನದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ಐವರು ಆರೋಪಿಗಳು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. |
![]() | ಆಗಸ್ಟ್ 1 ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಬೆಳಗ್ಗೆ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ನಂತರ ಉಡುಪಿ ಕಡೆಗೆ ತೆರಳಲಿದ್ದಾರೆ. |
![]() | ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; ಶಿಕ್ಷಕನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ!ಅಪ್ರಾಪ್ತ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕನಿಗೆ ಮಂಗಳೂರು ತ್ವರಿತಗತಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಕರಾವಳಿ, ಮಲೆನಾಡು ಭಾಗಗಳಲ್ಲಿ ಎಡೆಬಿಡದ ಮಳೆ: ರೆಡ್ ಅಲರ್ಟ್ ಘೋಷಣೆ, ಶಾಲಾ ಕಾಲೇಜುಗಳಿಗೆ ರಜೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. |
![]() | ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ: ಕಳಸ-ಉಡುಪಿ ರಾಷ್ಟ್ರೀಯ ಹೆದ್ದಾರಿ 169 ಬಂದ್, ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳೆ ಸೇತುವೆ ಮುಳುಗಡೆಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಧಾರಾಕಾರ ಮಳೆಯಿಂದಾಗಿ ಮುಂಡ್ಲಿ ಅಣೆಕಟ್ಟು ತುಂಬಿ ಹರಿಯುತ್ತಿದೆ. ಜುಲೈ 23ಕ್ಕೆ ಅಧಿಕಾರಿಗಳು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ |
![]() | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಬಗ್ಗೆ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ರಮಾನಾಥ್ ರೈ ಸೋಮವಾರ ಒತ್ತಾಯಿಸಿದ್ದಾರೆ. |
![]() | ಮಂಗಳೂರು: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಸಾವುತನ್ನ ಮನೆಯ ಬಳಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ 14 ವರ್ಷದ ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |