- Tag results for dead
![]() | ಬೆಂಗಳೂರು: ಕೆಂಗೇರಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವುಕೆಂಗೇರಿಯಲ್ಲಿ ವೃಷಭಾವತಿ ಕಾಲುವೆ ಕಾಮಗಾರಿಯ ಸಂದರ್ಭದಲ್ಲಿ ಮಣ್ಣು ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. |
![]() | ನವದೆಹಲಿ: ಸ್ವಯಂ ಗುಂಡು ಹಾರಿಸಿಕೊಂಡು ನಿವೃತ್ತ ಐಎಫ್ ಎಸ್ ಅಧಿಕಾರಿ ಆತ್ಮಹತ್ಯೆಪಿಸ್ತೂಲ್ ನಿಂದ ತಾನೇ ಗುಂಡು ಹಾರಿಸಿಕೊಂಡು 81 ವರ್ಷದ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ದೆಹಲಿಯ ಡಿಪೆನ್ಸ್ ಕಾಲೋನಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. |
![]() | ಹಾಸನದಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ, 14 ಮಂದಿಗೆ ಗಾಯಟಾಟಾ ಸುಮೋಗೆ ಹಿಂದಿನಿಂದ ಕ್ವಾಲೀಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯ ಕೆಂಚಟ್ಟಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. |
![]() | ಕಂದರಕ್ಕೆ ಬಿದ್ದ ಮದುವೆ ಬಸ್; ಇಬ್ಬರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ!ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. |
![]() | ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿಗಳಿಗೆ ಫೆ. 21ರ ಗಡುವುಪಂಚಮಸಾಲಿ ಮತ್ತು ಇತರ ಉಪಜಾತಿಗಳಿಗೆ 2ಎ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಫೆಬ್ರವರಿ 21ರ ವರೆಗೆ ಗಡುವು ನೀಡಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಎಸ್ ಪಾಟೀಲ್ ಹೇಳಿದ್ದಾರೆ. |
![]() | ಅಮೇಥಿ: ಉತ್ತರ ಪ್ರದೇಶದ ಮಾಜಿ ಸಚಿವರ ಸೋದರಳಿಯನ ಮೃತದೇಹ ರೈಲ್ವೆ ಹಳಿ ಬಳಿ ಪತ್ತೆ!ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಅವರ ಸೋದರಳಿಯ 20 ವರ್ಷದ ಯುವಕನ ಮೃತದೇಹ ರೈಲ್ವೆ ಹಳಿ ಪಕ್ಕ ಖರೌನ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. |
![]() | ಬೆಳ್ತಂಗಡಿ: ಧರ್ಮಸ್ಥಳ ಸ್ನಾನಘಟ್ಟದ ಬಳಿ ಇಬ್ಬರು ಮಹಿಳೆಯರ ಮೃತದೇಹ ಪತ್ತೆಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಕಿಂಡಿ ಅಣೆಕಟ್ಟೆಯ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಶವಗಳು ಪತ್ತೆಯಾಗಿವೆ. |
![]() | ಹಾಸನ: ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಸಾವುಹಾಸನದಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಅರಕಲಗೂಡು ತಾಲ್ಲೂಕಿನ ಹಾಸನ-ಕೊಡಗು ಗಣಿ ಭಾಗದ ಬಾಣಾವರ ಗೇಟ್ನ ಬೆಟ್ಟಗೆಡಲೆ ಬಳಿ ನಡೆದಿದೆ. |
![]() | ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಹಳೆಯ ವೈರಸ್ ಗಿಂತ ಮಾರಣಾಂತಿಕ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ಬ್ರಿಟನ್ ನಲ್ಲಿ ಪತ್ತೆಯಾಗಿರುವ ರೂಪಾಂತರಿ ಕೊರೋನಾ ವೈರಸ್ ಹಳೆಯ ಕೋವಿಡ್ ವೈರಸ್ ಗಿಂತ ಮಾರಣಾಂತಿಕವಾಗಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. |
![]() | ಶಿವಮೊಗ್ಗ: ಭಾರಿ ಶಬ್ದದೊಂದಿಗೆ ಡೈನಾಮೆಟ್ ಸ್ಫೋಟ: 8 ಬಿಹಾರಿ ಕಾರ್ಮಿಕರ ದುರ್ಮರಣಶಿವಮೊಗ್ಗದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ಅಬ್ಬಲಗೆರೆ- ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೆಟ್ ಸ್ಪೋಟಿಸಿದ ಪರಿಣಾಮ ಬಿಹಾರ ಮೂಲದ 8 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. |
![]() | ಇರಾಕ್: ಬಾಗ್ದಾದ್ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ, ಕನಿಷ್ಠ 28 ಮಂದಿ ಸಾವುಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಗುರುವಾರ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದು, 73 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಗುಜರಾತ್: ಬಸ್'ಗೆ ವಿದ್ಯುತ್ ತಂತಿ ತಗುಲಿ 6 ಮಂದಿ ಸಜೀವ ದಹನ, ಹಲವರಿಗೆ ಗಂಭೀರ ಗಾಯಎಲೆಕ್ಟ್ರಿಕ್ ಕೇಬಲ್ ತಾಗಿದ ಪರಿಣಾಮ ಬಸ್ ವೊಂದಕ್ಕೆ ಬೆಂಕು ತಗುಲಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. |
![]() | ಕೊಡಗು: ಕೆರೆಗೆ ಮಗುಚಿ ಬಿದ್ದ ಕಾರು: ತಾಯಿ, ಮಗಳು ಸಾವುನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಕೆರೆಗೆ ಬಿದ್ದ ಪರಿಣಾಮ ತಾಯಿ, ಮಗಳು ಕಾರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ಸಂಭವಿಸಿದೆ. |
![]() | ಇಂಡೋನೇಷ್ಯಾ ಭೂಕಂಪ: ಸಾವಿನ ಸಂಖ್ಯೆ 35ಕ್ಕೆ ಏರಿಕೆಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ತಲುಪಿದೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ. |
![]() | ಧಾರವಾಡದಲ್ಲಿ ಭೀಕರ ಅಪಘಾತ; 11 ಮಂದಿ ಸಾವು: ಪ್ರಧಾನಿ ನರೇಂದ್ರ ಮೋದಿ ಸಂತಾಪಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. |