- Tag results for director
![]() | ಅಕ್ರಮ ಹಣ ವರ್ಗಾವಣೆ: ಮಂತ್ರಿ ಡೆವಲಪರ್ಸ್ನ 300 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿಬೆಂಗಳೂರು ಮೂಲದ ಮಂತ್ರಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ. |
![]() | 'ಜೈ ಭೀಮ್' ವಿವಾದ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧದ ಎಫ್ ಐಆರ್ ರದ್ದುಪಡಿಸಿದ ಹೈಕೋರ್ಟ್ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ತೋರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಕುಮಾರ್ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾದ ಎಫ್ ಐಆರ್ ನ್ನು ಮದ್ರಾಸ್ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸಂಬಂಧಿಸಿದ ಮತ್ತೊಂದು ಫ್ಲಾಟ್ ಮೇಲೆ ಇಡಿ ದಾಳಿಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪದಚ್ಯುತಗೊಂಡ ಸಚಿವ ಪಾರ್ಥ ಚಟರ್ಜಿ ಅವರ ಮತ್ತೊರ್ವ ನಿಕಟವರ್ತಿಗೆ ಸೇರಿದ ದಕ್ಷಿಣ ಕೋಲ್ಕತ್ತಾದ ಅಪಾರ್ಟ್ಮೆಂಟ್ನಲ್ಲಿ ಜಾರಿ ನಿರ್ದೇಶನಾಲಯವು ಇಂದು ಶೋಧಕಾರ್ಯ ಕೈಗೊಂಡಿದೆ. |
![]() | ಪ್ರತಿಪಕ್ಷಗಳ ಗಲಾಟೆ: ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಪತ್ರಾ ಚಾಲ್ ಭೂ ಹಗರಣ: ಸಂಸದ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ಇಡಿಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. |
![]() | 'ಇಡಿ ವಶಪಡಿಸಿಕೊಂಡ ಹಣ ನನಗೆ ಸೇರಿದ್ದಲ್ಲ, ನನ್ನ ವಿರುದ್ಧ ಪಿತೂರಿ ನಡೆದಿದೆ': ಪಾರ್ಥ ಚಟರ್ಜಿಬಹುಕೋಟಿ ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಕೇಂದ್ರಬಿಂದುವಾಗಿರುವ ಬಂಧಿತನಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ, ಜಾರಿ ನಿರ್ದೇಶನಾಲಯದ ದಾಳಿ ವೇಳೆ ಸಿಕ್ಕಿರುವ ಹಣವು ತನಗೆ ಸೇರಿದ್ದಲ್ಲ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರು ಯಾರು ಎಂದು ಕಾಲವೇ ಉತ್ತರಿಸಲಿದೆ ಎಂದು ಹೇಳಿದ್ದಾರೆ. |
![]() | ಶಾಲಾ ನೇಮಕಾತಿ ಹಗರಣ: ಬಂಧಿತ ಬಂಗಾಳ ಸಚಿವ ಚಟರ್ಜಿ ನಿಕಟವರ್ತಿ ಅರ್ಪಿತಾ ಫ್ಲಾಟ್ ನಲ್ಲಿ ಮತ್ತೆ ಕೋಟ್ಯಂತರ ನಗದು ಪತ್ತೆಪಶ್ಚಿಮ ಬಂಗಾಳದ ಶಾಲಾ ಉದ್ಯೋಗ ಹಗರಣದ ಪ್ರಮುಖ ಆರೋಪಿ ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ನಿಕಟವರ್ತಿ ಅರ್ಪಿತಾ ಮುಖರ್ಜಿ ಫ್ಲಾಟ್ ನಲ್ಲಿ ಮತ್ತೆ ಕೋಟ್ಯಂತರ ನಗದು ಪತ್ತೆಯಾಗಿದೆ. |
![]() | ಶಶಾಂಕ್ ನಿರ್ದೇಶನದ ಪ್ರೇಮಕಥೆ 'ಲವ್ 360' ಆಗಸ್ಟ್ 19ರಂದು ತೆರೆಗೆನಿರ್ದೇಶಕ ಶಶಾಂಕ್ ಅವರು ನಿರ್ದೇಶಿಸಿದ್ದ ಯಶ್, ರಾಧಿಕಾ ಪಂಡಿತ್, ಶುಭಾ ಪೂಂಜಾ ಅಭಿನಯದ ಲವ್ ಸ್ಟೋರಿ 'ಮೊಗ್ಗಿನ ಮನಸ್ಸು' ಬಿಡುಗಡೆಯಾಗಿ 14 ವರ್ಷಗಳು ಕಳೆದಿವೆ. ಇದೀಗ ನಿರ್ದೇಶಕರು ಮತ್ತೊಂದು ಪ್ರೇಮಕಥೆ ಚಿತ್ರ 'ಲವ್ 360' ಬಿಡುಗಡೆಗೆ ಕಾತರರಾಗಿದ್ದಾರೆ. ಮುಂದಿನ ತಿಂಗಳು ಆಗಸ್ಟ್ 19ರಂದು ತೆರೆಗೆ ಬರಲಿದೆ. |
![]() | ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಸಂಪುಟ ಸಚಿವನ ಆಪ್ತನ ಮನೆಯಲ್ಲಿ 20 ಕೋಟಿ ರೂ. ನಗದು ವಶ!ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಸಹಚರ ಅರ್ಪಿತಾ ಮುಖರ್ಜಿ ಮನೆಯಿಂದ ಜಾರಿ ನಿರ್ದೇಶನಾಲಯ ಇಂದು ಬರೋಬ್ಬರಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. |
![]() | ಸಲ್ಮಾನ್ ಖಾನ್ ಗೆ ಆ್ಯಕ್ಷನ್ ಕಟ್ ಹೇಳ್ತಾರಾ 'ವಿಕ್ರಮ್' ನಿರ್ದೇಶಕ ಲೋಕೇಶ್ ಕನಗರಾಜ್?ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ 'ವಿಕ್ರಮ್' ಸಿನಿಮಾ ನಿರ್ದೇಶಕ ಲೋಕೇಶ್ ಕನಗರಾಜ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂದು ವರದಿಯಾಗಿದೆ. |
![]() | ಡಾ. ಸಿಎನ್ ಮಂಜುನಾಥ್ ಸೇವಾವಧಿ ಒಂದು ವರ್ಷ ವಿಸ್ತರಣೆ: ರಾಜ್ಯ ಸರ್ಕಾರ ಆದೇಶಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಪ್ರಕರಣಗಳ ಭೇದಿಸಲು ಭಾಷಾ ತಡೆಗೋಡೆ ಮುರಿದ ED; ಅನುವಾದಕರಿಗೆ ಭಾರಿ ಬೇಡಿಕೆಸಂಘಟಿತ ಅಪರಾಧಗಳು ಹೆಚ್ಚು ಜಾಗತಿಕವಾಗುತ್ತಿರುವುದರೊಂದಿಗೆ ಭಾಷಾ ತಡೆಗೋಡೆ ಮುರಿಯಲು ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ(ಇಡಿ) ಮುಂದಾಗಿದ್ದು, ತನಿಖಾ ಸಂಸ್ಥೆಯಲ್ಲಿ ಇದೀಗ ಭಾಷಾ ಅನುವಾದಕರಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. |
![]() | ಫೆಮಾ ಪ್ರಕರಣ: ಮಂಗಳೂರಿನ ಕೆ ಮೊಹಮ್ಮದ್ ಹಾರಿಸ್ ಆಸ್ತಿ ವಶಪಡಿಸಿಕೊಂಡ ಇಡಿವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) 1999 ರ ಅಡಿಯಲ್ಲಿ ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ ಎಂದು ಕೇಂದ್ರ ಸಂಸ್ಥೆ ಮಂಗಳವಾರ ತಿಳಿಸಿದೆ. |
![]() | ಅಮ್ನೆಸ್ಟಿ ಇಂಡಿಯಾಗೆ 51.72 ಕೋಟಿ ರೂ., ಮಾಜಿ ಸಿಇಒ ಆಕಾರ್ ಪಟೇಲ್ಗೆ 10 ಕೋಟಿ ರೂ. ದಂಡ ವಿಧಿಸಿದ ಇಡಿಆಮ್ನೆಸ್ಟಿ ಇಂಡಿಯಾ ಇಂಟರ್ನ್ಯಾಶನಲ್ ಪ್ರೈ. ಲಿಮಿಟೆಡ್ ಮತ್ತು ಅದರ ಮಾಜಿ ಸಿಇಒ ಆಕಾರ್ ಪಟೇಲ್ ಅವರಿಗೆ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮವಾಗಿ 51.72 ಕೋಟಿ ಮತ್ತು 10 ಕೋಟಿ ರೂಪಾಯಿ ದಂಡವನ್ನು ಜಾರಿ ನಿರ್ದೇಶನಾಲಯ (ಇಡಿ) ವಿಧಿಸಿದೆ. |
![]() | ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಪತ್ನಿ, ಪುತ್ರನಿಗೆ ಇಡಿ ಸಮನ್ಸ್!ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಹೆಚ್ಚಿನ ವಿಚಾರಣೆಗಾಗಿ ಅವರ ಪತ್ನಿ ಮತ್ತು ಮಗನಿಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |