- Tag results for examination
![]() | ನೀಟ್ ಪಿಜಿ-2022 ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರವೈದ್ಯರ ಮನವಿಯ ಮೇರೆಗೆ ನೀಟ್-ಪಿಜಿ-2022 ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಪರೀಕ್ಷೆ ವಿಳಂಬವಾದರೆ ವೈದ್ಯರ ಅಲಭ್ಯತೆ ಉಂಟಾಗುತ್ತದೆ ಮತ್ತು ರೋಗಿಗಳ ಆರೈಕೆಯ ಮೇಲೆ ಗಂಭೀರ... |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಬಯಲಿಗೆ ತಂದಿದ್ದಾರೆ: ಹೊಸಬಾಂಬ್ ಸಿಡಿಸಿದ ಹೆಚ್ ಡಿ ಕುಮಾರಸ್ವಾಮಿ!545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಪೊಲೀಸರೇ ಬಯಲಿಗೆಳೆದಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಮಾತನಾಡಿದ್ದರಿಂದ ಕಮಲ್ ಪಂತ್ ಅಭಿಮಾನಿಗಳು ಮತ್ತು ಬೆಂಬಲಿಗರೇ ಈ ಹಗರಣವನ್ನು ಬಯಲಿಗೆ ತಂದಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ಸಚಿವ ಅಶ್ವಥ್ ನಾರಾಯಣ ಸೋದರ ಭಾಗಿ: ವಿ ಎಸ್ ಉಗ್ರಪ್ಪ ನೇರ ಆರೋಪಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ ನಾರಾಯಣ ಸಿ ಎನ್ ಅವರ ತಮ್ಮ ಸತೀಶ್ ಅವರ ಪಾತ್ರವಿದೆ. ಅವರು ಅಭ್ಯರ್ಥಿ ದರ್ಶನ್ ಗೌಡರಿಂದ 80 ಲಕ್ಷ ರೂಪಾಯಿ ಹಣ ಪಡೆದಿದ್ದರು ಎಂದು ಕೆಪಿಸಿಸಿ ವಕ್ತಾರ ವಿ ಎಸ್ ಉಗ್ರಪ್ಪ ನೇರ ಆರೋಪ ಮಾಡಿದ್ದಾರೆ. |
![]() | ನಾಳೆ ರಂಜಾನ್ ರಜೆ ಘೋಷಣೆ: ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಪ್ರಯುಕ್ತ ಮೈಸೂರು ವಿಶ್ವವಿದ್ಯಾನಿಲಯವು ಪದವಿ ಪರೀಕ್ಷೆಗಳನ್ನು ಮುಂದೂಡಿದೆ. |
![]() | ಪಿಎಸ್ಐ ನೇಮಕಾತಿ ಪ್ರವೇಶ ಪರೀಕ್ಷೆ ರದ್ದು; ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟ: ಗೃಹ ಸಚಿವ ಆರಗ ಜ್ಞಾನೇಂದ್ರಪಿಎಸ್ಐ ಹುದ್ದೆ ನೇಮಕಾತಿಗೆ ಕಳೆದ ವರ್ಷ ಆಗಸ್ಟ್ ನಲ್ಲಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದು ಸಿಐಡಿ ತನಿಖೆ ನಡೆಸಿ ಪ್ರಮುಖ ಆರೋಪಿಗಳನ್ನು ಇಂದು ಶುಕ್ರವಾರ ಬಂಧಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. |
![]() | ಹುಬ್ಬಳ್ಳಿ ಗಲಭೆ: ವಿವಾದಾತ್ಮಕ ಪೋಸ್ಟ್ ಹಾಕಿ ಬಂಧನಕ್ಕೀಡಾಗಿರುವ ಆರೋಪಿ ಹಿರೇಮಠ್ ಪಿಯು ಪರೀಕ್ಷೆ ಬರೆಯಲು ಕೋರ್ಟ್ ಗೆ ಮನವಿಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಹಾಕಿ ಬಂಧನಕ್ಕೀಡಾಗಿರುವ ಆರೋಪಿ ಅಭಿಷೇಕ್ ಹಿರೇಮಠ್ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರ್ಟ್ ಗೆ ಆರೋಪಿ ಪರ ವಕೀಲ ಸಂಜು ಬಡಾಸ್ಕರ್ ಮನವಿ ಮಾಡಿದ್ದಾರೆ. |
![]() | ಹಿಜಾಬ್ ವಿವಾದ: ಉಡುಪಿಯಲ್ಲಿ ಪಿಯುಸಿ ಪರೀಕ್ಷೆ ಬಹಿಷ್ಕರಿಸಿದ 40 ಮುಸ್ಲಿಂ ವಿದ್ಯಾರ್ಥಿನಿಯರುತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ಅವಕಾಶ ನಿರಾಕರಿಸಿ ತೀರ್ಪು ನೀಡಿದ ಹೈಕೋರ್ಟ್ ಆದೇಶವನ್ನು ಖಂಡಿಸಿ ನಿನ್ನೆ ಮಂಗಳವಾರ ಪ್ರಥಮ ಪಿಯುಸಿಯ 40 ಮಂದಿ ವಿದ್ಯಾರ್ಥಿನಿಯರು ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆಗೆ ಗೈರಾಗಿದ್ದಾರೆ. |
![]() | ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ: ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಸಚಿವ ಬಿ.ಸಿ.ನಾಗೇಶ್ರಾಜ್ಯದಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆ: ಭಯವಿಲ್ಲದೆ ಪರೀಕ್ಷೆ ಬರೆದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ- ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಕರೆಸೋಮವಾರದಿಂದ ಎಸ್ಎಸ್ಎಲ್'ಶಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ ರಾಜ್ಯದಾದ್ಯಂತ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಯಾವುದೇ ಭಯವಿಲ್ಲದೆ. ಪರೀಕ್ಷೆ ಬರೆದು, ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. |
![]() | 10, 12ನೇ ತರಗತಿಯ CBSE, ICSE ಆಫ್ಲೈನ್ ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಈ ವರ್ಷ ಸಿಬಿಎಸ್ಇ, ಐಸಿಎಸ್ ಇ ಮತ್ತು ಇತರ ಹಲವು ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಗಳ ಆಫ್ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್... |
![]() | ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ಸರ್ಕಾರ ಮರು ಆಲೋಚನೆ ಮಾಡಬೇಕಿದೆ: ಹೆಚ್.ಡಿ. ಕುಮಾರಸ್ವಾಮಿನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರ್ಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರ್ಕಾರವೂ ಇಂತಹ ನಿಲುವಿಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಒತ್ತಾಯಿಸಿದ್ದಾರೆ. |
![]() | ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ಮುಂದೂಡಿಕೆವಿದ್ಯಾರ್ಥಿ ಸಂಘಟನೆ ಮತ್ತು ಪೋಷಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ. |
![]() | ಕೆಎಸ್ಎಲ್ ಯು ಕಾನೂನು ಪರೀಕ್ಷೆಗಳಿಗೆ ಕರ್ನಾಟಕ ಹೈಕೋರ್ಟ್ ತಡೆಮಹತ್ವದ ಬೆಳವಣಿಗೆಯಲ್ಲಿ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. |
![]() | ಮುಂಬೈ: ವೈದ್ಯಕ್ಷೀಯ ಪರೀಕ್ಷೆಗಾಗಿ ಅನಿಲ್ ದೇಶ್ ಮುಖ್ ಕರೆದೊಯ್ದ ಇಡಿಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಪಿಎಂಐಎಲ್ ಕೋರ್ಟ್ ನಲ್ಲಿ ಇಂದು ಹಾಜರುಪಡಿಸುವ ಮೊದಲು ಜಾರಿ ನಿರ್ದೇಶನಾಲಯ ಕಚೇರಿಯಿಂದ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಿತು. |
![]() | ಮಹಿಳೆಯರಿಗೂ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಸುಪ್ರೀಂ ಅವಕಾಶ: ಅಧಿಸೂಚನೆ ಹೊರಡಿಸಲು ಯುಪಿಎಸ್ಸಿಗೆ ಸೂಚನೆರಾಷ್ಟ್ರೀಯ ರಕ್ಷಣಾ ಅಕಾಡೆಮಿಯು (ಎನ್ ಡಿಎ) ಸೆಪ್ಟೆಂಬರ್ 5 ರಂದು ನಡೆಸಲು ಉದ್ದೇಶಿಸಿರುವ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹ ಮಹಿಳೆಯರಿಗೆ ಸುಪ್ರೀಂಕೋರ್ಟ್ ಬುಧವಾರ ಅವಕಾಶ ನೀಡಿದೆ. |