ದೇಶ120 ಕಿ.ಮೀ ವೇಗದಲ್ಲಿ ಮುಂಬೈಗೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ, ಕೇವಲ 12 ವಿಮಾನಗಳ ಹಾರಾಟಕ್ಕೆ ಅವಕಾಶ
ಕೊರೋನಾ ವೈರಸ್ ಹಾವಳಿಯಿಂದ ಅತೀ ಹೆಚ್ಚು ಬಾಧಿತವಾಗಿರುವ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಚಂಡಮಾರುತ ಆಘಾತ ಎದುರಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ನಿಸರ್ಗ ಹೆಸರಿನ ಚಂಡಮಾರುತ ಗಂಟೆಗೆ 120 ಕಿಮೀ ವೇಗದಲ್ಲಿ ಮಹಾರಾಷ್ಟ್ರ ಗುಜರಾತ್ ಕರಾವಳಿಗೆ ಬುಧವಾರ ಮಧ್ಯಾಹ್ನ ಅಪ್ಪಳಿಸಲಿದೆ.