fire

ಪೆಟ್ರೋಲ್ ಸುರಿದು ಗುಡಿಸಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ
ಕುಟುಂಬ ಗುಡಿಸಲಿನಲ್ಲಿ ಮಲಗಿದ್ದಾಗ. ದುಷ್ಕರ್ಮಿಗಳು ಸಿಂಟೆಕ್ಸ್ ನಲ್ಲಿ ಪೆಟ್ರೋಲ್ ತುಂಬಿ ಅದನ್ನು ಎರಡು ಎಚ್ ಪಿ ಮೋಟಾರ್ ಸಹಾಯದಿಂದ ಶೆಡ್ಡಿಗೆ ಸಿಂಪಡಿಸಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚುವ ಮುನ್ನ ಶೆಡ್ಡಿನ ಬಾಗಿಲವನ್ನು ಲಾಕ್ ಮಾಡಿ ಇಡೀ ಕುಟುಂಬವನ್ನು ಮುಗಿಸಲು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಉಡುಪಿ ಅಗ್ನಿ ದುರಂತ: ರಮಾನಂದ್ ಶೆಟ್ಟಿ ಸಾವು ಬೆನ್ನಲ್ಲೇ ಪತ್ನಿಯೂ ನಿಧನ
ರಮಾನಂದ್ ಶೆಟ್ಟಿ ಅವರ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು
ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತ ವ್ಯಕ್ತಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಗುಂಡೇಟಿನಿಂದ ಮೇಲ್ಬಾಗದ ಕಿವಿ ಗಾಯಗೊಂಡಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿದ್ದನ್ನು ನಂಬಲಾಗುತ್ತಿಲ್ಲ: ಡೊನಾಲ್ಡ್ ಟ್ರಂಪ್
ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್‌ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ‍್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಕೂಡಲೇ ವೇದಿಕೆ ಬಳಿಯಿದ್ದ ಭದ್ರತಾ ಸಿಬ್ಬಂದಿ ಟ್ರಂಪ್ ನೆರವಿಗೆ ಧಾವಿಸಿ, ಟ್ರಂಪ್ ಅವರನ್ನು ರಕ್ಷಣೆ ಮಾಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ; ಟ್ರಂಪ್ ಹತ್ಯೆ ಯತ್ನ ಘಟನೆಗೆ ಪ್ರಧಾನಿ ಮೋದಿ ತೀವ್ರ ಖಂಡನೆ
ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ...

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ
ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ
ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.

ಮಂಗಳೂರು: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ, ಅಪಾರ ಮೌಲ್ಯದ ವಸ್ತುಗಳು ನಷ್ಟ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮಂಗಳೂರು ಸಮೀಪದ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ.

ದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 7 ನವಜಾತ ಶಿಶುಗಳು ಸಾವು
ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ನವಜಾತ ಶಿಶುಗಳು ಮೃತಪಟ್ಟಿವೆ.

