Government

ಅರಣ್ಯ ಅತಿಕ್ರಮಣಕ್ಕೆ ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳು ಜವಾಬ್ದಾರರು: ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಂದರ್ಶನ)
ಆನೆ ಸೆರೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು, ಇದು ಮೈಸೂರು ದಸರಾದ ಖ್ಯಾತ ಆನೆ ಅರ್ಜುನನ ಸಾವಿಗೆ ಕಾರಣವಾಯಿತು ಎಂದು ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ.ಸಿಂಗ್ ಹೇಳಿದ್ದಾರೆ.

ರೇಷನ್ ಕಾರ್ಡ್ ಇಲ್ಲದೆ ತೃತೀಯ ಲಿಂಗಿಗಳಿಗೆ ಸರ್ಕಾರದ 'ಗ್ಯಾರಂಟಿ'ಗಳ ಭಾಗ್ಯವಿಲ್ಲ!
ಬಳ್ಳಾರ ಜಿಲ್ಲೆಯ ತೃತೀಯಲಿಂಗಿ 42 ವರ್ಷದ ಗಂಗಾ ಕಳೆದ ಆಗಸ್ಟ್ ತಿಂಗಳಲ್ಲಿ ಸರ್ಕಾರದಿಂದ ಗೃಹ ಲಕ್ಷ್ಮಿ ಯೋಜನೆ ಆರಂಭವಾದಾಗ ಖುಷಿಪಟ್ಟಿದ್ದಳು. ಗೃಹ ಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ ಬರುವ 2 ಸಾವಿರ ರೂಪಾಯಿ ಮತ್ತು ತೃತೀಯ ಲಿಂಗಿಗಳಿಗೆ ಸರ್ಕಾರದ ಯೋಜನೆ ಮೈತ್ರಿಯಿಂದ ಸಿಗುವ 800 ರೂಪಾಯಿಗಳಿಂದ ಮನೆ ಬಾಡಿಗೆ ಖರ್ಚು ನಿಭಾಯಿಸಿಕೊಂಡು ಹೋಗಬಹುದೆಂದು ಭಾವಿಸಿದ್ದರು.

ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೋರಿಸುತ್ತೇವೆ: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (ಸಂದರ್ಶನ)
ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಪಕ್ಷವು ನೇಮಿಸಿದ್ದು, ಇದು ಸವಾಲಿನ ಕೆಲಸವಾಗಿದೆ. ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೋರಿಸಲು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಡೀಪ್ ಫೇಕ್ ಹಾವಳಿ: ಎಫ್ಐಆರ್ ದಾಖಲಿಸಲು ನಾಗರಿಕರಿಗೆ ಸರ್ಕಾರ ನೆರವು
ಡೀಪ್ ಫೇಕ್ ನಂತಹ ಆಕ್ಷೇಪಾರ್ಹ ವಿಡಿಯೊಗಳಿಂದ ನೊಂದಿದ್ದರೆ ಐಟಿ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ ಸೋಷಿಯಲ್ ಮೀಡಿಯಾ ವೇದಿಕೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸರ್ಕಾರ ನಾಗರಿಕರಿಗೆ ಸಹಾಯ ಮಾಡಲಿದೆ.

ಮಣಿಪುರ ಹಿಂಸಾಚಾರ: 9 ಮೈತೇಯಿ ಉಗ್ರ ಸಂಘಟನೆ, ಅವುಗಳ ಸಹ ಸಂಘಟನೆ ನಿಷೇಧಿಸಿದ ಕೇಂದ್ರ
ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ರಾಷ್ಟ್ರವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಮತ್ತು ಭದ್ರತಾ ಪಡೆಗಳ ಮೇಲೆ ಮಾರಣಾಂತಿಕ ದಾಳಿ ನಡೆಸುತ್ತಿರುವ ಒಂಬತ್ತು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು...

ಸರ್ಕಾರದಿಂದ ಸೇಡಿನ ರಾಜಕಾರಣ ಖಂಡಿಸಿ ಮೂರು ದಿನ ಸತ್ಯಾಗ್ರಹ: ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಬಿ ಎಸ್ ಯಡಿಯೂರಪ್ಪ
ಕಳೆದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವು ಭಾಗಗಳಲ್ಲಿ ಅವಾಂತರ ಉಂಟಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಭಾರೀ ಸಮಸ್ಯೆಗಳು ಎದುರಾಗುತ್ತಿವೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಬಿಬಿಎಂಪಿ, ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಸದ್ಯಕ್ಕೆ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾಪವಿಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಸದ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮರಾಠ ಮೀಸಲಾತಿ ಕಾರ್ಯಕರ್ತ ಮನೋಜ್ ಜಾರಂಗೆ ಉಪವಾಸ ಸತ್ಯಾಗ್ರಹ ಹಿಂದಕ್ಕೆ: ಸರ್ಕಾರಕ್ಕೆ 2 ತಿಂಗಳ ಗಡುವು
ಮರಾಠಾ ಮೀಸಲಾತಿ (Maratha reservation) ಆಂದೋಲನದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.

‘ನಾಡದೇವತೆ ಭುವನೇಶ್ವರಿ ಭವನ' ಬೃಹತ್ ಸಭಾಂಗಣ ಸದ್ಯದಲ್ಲೇ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ
ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರವು ‘ನಾಡದೇವತೆ ಭುವನೇಶ್ವರಿ ಭವನ’ ಎಂಬ ಬೃಹತ್ ಸಭಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

