Government

ನರೇಗಾದಡಿ ಕೆಲಸಕ್ಕೆ ಸರ್ಕಾರ ಅನುಮತಿ, ಹೊಸ ನಿಯಮ ಜಾರಿ
ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವ ಪ್ರಸ್ತಾವನೆ ಇಲ್ಲ, ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ: ಸುಪ್ರೀಂಗೆ ಕೇಂದ್ರ
ಕೋವಿಡ್-19 ಲಸಿಕೆಯನ್ನು ಮನೆ ಬಾಗಿಲಿಗೆ ತೆರಳಿ ನೀಡುವ ಪ್ರಸ್ತಾವನೆ ಇಲ್ಲ, ಕೇವಲ ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಲಾಕ್ ಡೌನ್ ಹೆಸರಲ್ಲಿ ಜನರ ಮೇಲೆ ದರ್ಪ ತೋರಿಸುವುದು ನಿಲ್ಲಿಸಿ ಅವರ ಜೀವನಕ್ಕೆ ಕ್ರಮ ಕೈಗೊಳ್ಳಿ: ಹೆಚ್ ಡಿ ಕುಮಾರಸ್ವಾಮಿ ಸಲಹೆ
ಜನಸಂಚಾರ ತಡೆಯುವುದು ಲಾಕ್ ಡೌನ್ ಎಂದು ಭಾವಿಸಿರುವ ರಾಜ್ಯ ಸರ್ಕಾರ ಜನರ ಜೀವನದ ಕಷ್ಟಗಳನ್ನು ಅರ್ಥ ಮಾಡಿಕೊಳ್ಳದಿರುವುದು ದುರಂತ. ಜನಹಿತದ ಲಾಕ್ ಡೌನ್ ಬದಲು ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಜಾರಿಯಾದರೆ ಹೇಗೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಿಟಿ-ಸ್ಕ್ಯಾನಿಂಗ್ ದರ ನಿಗದಿಪಡಿಸಿದ ಸರ್ಕಾರ, ದಂಧೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ಸುಧಾಕರ್
ಕೋವಿಡ್-19 ಸೋಂಕನ್ನು ಪತ್ತೆಹಚ್ಚಲು ಸಿಟಿ-ಸ್ಕ್ಯಾನ್ ಅಥವಾ ಎಕ್ಸ್-ರೇ ಅಗತ್ಯವಾಗಿರುವುದರಿಂದ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಪ್ರಯೋಗಾಲಯಗಳಲ್ಲಿ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.

ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ: ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ 24 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ ಎ ಪಾಟೀಲ್ ಅವರ ನೇತೃತ್ವದ ತನಿಖಾ ಆಯೋಗವನ್ನು ನೇಮಿಸಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟು ಘೋರ ದುರಂತ ಸಂಭವಿಸಿದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ.

ಜಿಂದಾಲ್ ಗ್ರೂಪ್ ಗೆ 3,666 ಎಕರೆ ಭೂಮಿ ಮಾರಲು ಸರ್ಕಾರ ನಿರ್ಧಾರ: ಬಿಜೆಪಿ ನಾಯಕ ಹೆಚ್. ವಿಶ್ವನಾಥ್ ವಿರೋಧ!
ಸರ್ಕಾರದ 3,666 ಎಕರೆ ಭೂಮಿಯನ್ನು ಮನಸೋ ಇಚ್ಛೆ ಬೆಲೆಗೆ ಜಿಂದಾಲ್ ಗ್ರೂಪ್ ಗೆ ಸಂಪೂರ್ಣವಾಗಿ ಮಾರಾಟ ಮಾಡುವ ನಿರ್ಧಾರವನ್ನು ಬಿಜೆಪಿ ನಾಯಕ ಎ ಎಚ್ ವಿಶ್ವನಾಥ್ ವಿರೋಧಿಸಿದ್ದು ಸಚಿವ ಸಂಪುಟ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಕೋವಿಡ್ ಲಸಿಕೆ ಮೇ ಮಧ್ಯಭಾಗದಿಂದಷ್ಟೇ ಲಭ್ಯ: ಸರ್ಕಾರದ ಮೂಲಗಳಿಂದ ಮಾಹಿತಿ
18ರಿಂದ 44 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಮೇ 1ರಿಂದ ಲಭ್ಯವಾಗುತ್ತದೆ ಎಂದು ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಕೋವಿನ್ ಆಪ್ ತೆರೆದ ತಕ್ಷಣವೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಉಚಿತ ಲಸಿಕೆ: ಕೇಂದ್ರ, ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು- ಕುಮಾರಸ್ವಾಮಿ
ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

