Government

ಶಿವಸೇನೆ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ, ಜವಾಬ್ದಾರಿಯುತ ಪ್ರತಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ: ಶರದ್ ಪವಾರ್
ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಪ್ರಶ್ನೆಯೇ ಇಲ್ಲ,ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ನಮ್ಮ ಜವಾಬ್ದಾರಿಯ ಕೆಲಸಗಳನ್ನು ಮಾಡುತ್ತೇವೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಖಾಸಗಿ ವಲಯಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನೀತಿ ಹೊರಡಿಸಲು ಸರ್ಕಾರ ಮುಂದು
ಶುಕ್ರವಾರ ಕನ್ನಡ ನಾಡಿನಾದ್ಯಂತ ರಾಜ್ಯೋತ್ಸವವನ್ನು ಬೆಳಗ್ಗೆಯಿಂದಲೇ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಖಾಸಗಿ ವಲಯಗಳಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ನೀತಿ ಹೊರಡಿಸಲು ಮುಂದಾಗಿದೆ.

ಕೊಡವರಿಗೆ ಶಸ್ತ್ರಾಸ್ತ್ರ ಪರವಾನಗಿ "ವಿನಾಯಿತಿ" ವಿಸ್ತರಿಸಿದ ಕೇಂದ್ರ
ಕೊಡಗು ಜಿಲ್ಲೆಯ ನಿವಾಸಿಗಳು ಪಿಸ್ತೂಲ್, ರಿವಾಲ್ವರ್ ಹಾಗೂ ಡಬಲ್ -ಬ್ಯಾರಲ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರ ಹೊಂದಲು ಪರವಾನಗಿ ಪಡೆಯಬೇಕೆಂಬ ನಿಬಂಧನೆಯಿಂದ ನೀಡಲಾಗಿರುವ "ವಿನಾಯಿತಿ" ಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.

ಭೀಕರ ಪ್ರವಾಹದ ನಡುವೆಯೂ ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ!
ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಬಿಜೆಪಿಗೆ ಪರೋಕ್ಷವಾಗಿ ಜೆಡಿಎಸ್ ಬೆಂಬಲಿಸಿದರೆ ಸ್ವಾಗತ: ಸುರೇಶ್ ಅಂಗಡಿ
ಪರೋಕ್ಷವಾಗಿ ಜೆಡಿಎಸ್ ಪಕ್ಷ ಸರ್ಕಾರಕ್ಕೆ ಬೆಂಬಲ ನೀಡಿದರೆ ಬಿಜೆಪಿ ಸ್ವಾಗತಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿಯದ ಅಧಿಕಾರದ ಹಗ್ಗಜಗ್ಗಾಟ: ಸರ್ಕಾರ ರಚನೆ ವಿಳಂಬ
ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ-ಶಿವಸೇನೆ ಮೈತ್ರಿಕೂಟದ ನಡುವೆ ನಡೆದಿರುವ ಸಂಘರ್ಷವು ರಾಜ್ಯದಲ್ಲಿ ನೂತನ ಸರ್ಕಾರ ರಚನೆಯನ್ನು ವಿಳಂಬ ಮಾಡುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿವೆ.

ಜೆಜೆಪಿ ಬೆಂಬಲ: ಹರ್ಯಾಣದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಹಕ್ಕು ಮಂಡನೆ; 27 ಕ್ಕೆ ಖಟ್ಟರ್ ಸಿಎಂ ಪದಗ್ರಹಣ
ಮನೋಹರ್ ಲಾಲ್ ಖಟ್ಟರ್ ಅವರು ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆಯಾಗಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಬೆಂಬಲದ ಮೂಲಕ ಸರ್ಕಾರ ರಚನೆ ಹಕ್ಕನ್ನು ಬಿಜೆಪಿ ಮಂಡಿಸಿದೆ.

ಮುಸ್ಲಿಂ ಮಹಿಳೆಯರಿಗೂ ಮಸೀದಿ ಪ್ರವೇಶಕ್ಕೆ ಅವಕಾಶ ಕೋರಿ ಮನವಿ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಮಸೀದಿಗಳಲ್ಲಿ ಮಹಿಳೆಯರ ಪ್ರವೇಶ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಕೇಳಿದೆ.

ಒಂದೆಡೆ ಪರಿಸರ ಪ್ರೇಮಿಗಳ ವಿರೋಧ: ಇನ್ನೊಂದೆಡೆ ಶರಾವತಿ ಜಲ ವಿದ್ಯುತ್ ಯೋಜನೆಗೆ ರಾಜ್ಯ ಸರ್ಕಾರ ಅಸ್ತು
ಶರಾವತಿ ನದಿ ಕಣಿವೆಯ ಮಧ್ಯದಲ್ಲಿ ಉದ್ದೇಶಿತ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಜಲವಿದ್ಯುತ್ ಯೋಜನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ.

