Government

ಸೆ. 20ರಂದು ಎಡ ಪಕ್ಷಗಳ ರಾಷ್ಟ್ರೀಯ ಸಮಾವೇಶ
ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಮೇಲೆ ಹೆಚ್ಚುತ್ತಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

ಪ್ರವಾಹ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಮೋದಿಗಿಲ್ಲ: ಸಿದ್ದರಾಮಯ್ಯ
ಉತ್ತರ ಕರ್ನಾಟಕ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಎಷ್ಟು ದಿನ ಇರ್ತೇವೆ ಅಂತ ಗೊತ್ತಿಲ್ಲ, ಇರೋವಷ್ಟು ದಿನ ಜನಪರ ಕೆಲಸ ಮಾಡ್ತೀವಿ: ಸಿ.ಟಿ ರವಿ
ನಾವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆ ಎನ್ನುವುದು ಮುಖ್ಯವಲ್ಲ, ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಬೇಕು ಎಂದು ಸರ್ಕಾರದ ಅಸ್ಥಿತ್ವದ ಕುರಿತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.

312 ಸಿಖ್ ವಿದೇಶಿ ಪ್ರಜೆಗಳ ಹೆಸರು ಕಪ್ಪುಪಟ್ಟಿಯಿಂದ ಹೊರಗೆ; ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ
ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಿಖ್ ವಿದೇಶಿಯರ ಕಪ್ಪುಪಟ್ಟಿಯಿಂದ 312 ಮಂದಿಯ ಹೆಸರನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ.

ಹಾರ-ತುರಾಯಿ, ಸನ್ಮಾನ ಬೇಡ, ಅದೇ ಹಣವನ್ನು ದಾನ ನೀಡಿ: ಬೆಂಬಲಿಗರಿಗೆ ಸಚಿವರುಗಳ ಕಿವಿಮಾತು
ಹೊಸದಾಗಿ ಅಧಿಕಾರ ವಹಿಸಿಕೊಂಡ ಮಂತ್ರಿಗಳನ್ನು ಕಾಣಲು ಹೋಗುವ ಅವರ ಅನುಯಾಯಿಗಳು, ಬೆಂಬಲಿಗರು ಬೊಕ್ಕೆಗಳನ್ನು, ಹಾರ-ತುರಾಯಿಗಳನ್ನು ಹಿಡಿದುಕೊಂಡು ಹೋಗುವುದು ಸಾಮಾನ್ಯ.

ಅಕ್ಟೋಬರ್ ನಲ್ಲಿಯೇ ವಿಧಾನ ಮಂಡಲ ಚಳಿಗಾಲ ಅಧಿವೇಶನ ಆರಂಭ?
ಬಿಜೆಪಿ ನೇತೃತ್ವದ ನೂತನ ಸರ್ಕಾರದ ಚಳಿಗಾಲದ ಅಧಿವೇಶನ ಅಕ್ಟೋಬರ್ ನಲ್ಲಿ ಈ ವರ್ಷ ನಡೆಯಲಿದೆ. ಬೆಂಗಳೂರು ಮತ್ತು ಬೆಳಗಾವಿ ಎರಡೂ ಕಡೆ ಅಧಿವೇಶನ ನಡೆಯುವ ಸಾಧ್ಯತೆಯಿದೆ.

ಸಿಎಂ ಯಡಿಯೂರಪ್ಪ ಆಪ್ತರಿಂದಲೇ ಬಿಜೆಪಿ ಸರ್ಕಾರ ಪತನ: ಸಿಎಸ್ ಪುಟ್ಟರಾಜು ಭವಿಷ್ಯ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರೇ ಸರ್ಕಾರ ಉರುಳಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಭವಿಷ್ಯ ನುಡಿದಿದ್ದಾರೆ..

ಸರ್ಕಾರ ಪತನಕ್ಕೆ ಎಚ್ ಡಿಕೆ ಕಾರಣ: ಬೆಂಬಲ ಕೊಟ್ಟ ಪಕ್ಷಕ್ಕೆ ದ್ರೋಹ ಎಸಗುವುದು ಗೌಡರ ಹುಟ್ಟುಗುಣ; ಸಿದ್ದರಾಮಯ್ಯ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲಾರದೆ ಸರ್ಕಾರ ಬೀಳಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ.

ಕುಮಾರಸ್ವಾಮಿ ನಿತ್ಯ ರೋದನೆಯಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ: ಹೆಚ್ ಡಿ ದೇವೇಗೌಡ
ಕಳೆದ ವರ್ಷ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ತಮ್ಮ ಪುತ್ರ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಗ್ಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.

