• Tag results for gram panchayat

ಗ್ರಾಮ ಪಂಚಾಯತಿಗಳ ಮೂಲಕ ಜನರಿಗೆ ಹೆಚ್ಚಿನ ಸೇವೆ ನೀಡಲು ಸರ್ಕಾರ ಮುಂದು: ನೌಕರರ ವೇತನ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ

ಹಲವು ನಾಗರಿಕ ಸ್ನೇಹಿ ಸೇವೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯಲು ರಾಜ್ಯ ಸರ್ಕಾರ ಉತ್ಸುಕವಾಗಿರುವಾಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ವೇತನ ವಿತರಣೆ ಸೇರಿದಂತೆ ಅದರ ಆಡಳಿತವನ್ನು ಚುರುಕುಗೊಳಿಸಲು ನಿರ್ಧರಿಸಿದೆ.

published on : 21st October 2021

ಗದಗ: ಕಾರ್ಮಿಕರ ವಲಸೆ ತಡೆಯಲು ನರೇಗಾ ಅಧಿಕಾರಿಗಳ ಕ್ರಮ, ಗ್ರಾಮಸ್ಥರ ಉದ್ಯೋಗ ಆದ್ಯತೆ ಬಗ್ಗೆ ಮಾಹಿತಿ ಸಂಗ್ರಹ

ಗ್ರಾಮಸ್ಥರು ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ತಡೆಯಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್ ಆರ್ ಇಜಿಎ) ಜಾರಿಯ ಉಸ್ತುವಾರಿ ಅಧಿಕಾರಿಗಳು ಮನೆ-ಮನೆಗೆ ಹೋಗಿ ಗ್ರಾಮಸ್ಥರ ಆದ್ಯತೆಯ ಉದ್ಯೋಗದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

published on : 5th October 2021

2022, ಜನವರಿ 26 ರಂದು 'ಗ್ರಾಮ ಸೇವಾ ಯೋಜನೆ'ಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಗ್ರಾಮ ಪಂಚಾಯತಿ ಮುಖಾಂತರ ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ 'ಗ್ರಾಮ ಸೇವಾ ಯೋಜನೆ'ಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 23rd September 2021

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್!

ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

published on : 11th August 2021

ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: ಸಚಿವ ಸುರೇಶ್ ಕುಮಾರ್

ಡಿಜಿಟಲ್ ಶಿಕ್ಷಣ  ಇಲ್ಲವೇ ಆನ್ ಲೈನ್ ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

published on : 12th July 2021

ಕುಂದಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು, ದ್ವೇಷದ ಹಿನ್ನೆಲೆ ಕೊಲೆ -ಆರೋಪ

ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.

published on : 6th June 2021

ಕೋವಿಡ್-19: ಸ್ಥಳೀಯ ಕಂಟೈನ್ಮೆಂಟ್ ಝೋನ್ ಮೇಲೆ ನಿಗಾ ಇರಿಸುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚನೆ

ನಗರ ಬಳಿಕ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಝೋನ್ ಗಳ ಮೇಲೆ ಹೆಚ್ಚಿನ ನಿಗಾ ಇರುವಂತೆ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ.

published on : 26th May 2021

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ

ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. 

published on : 26th May 2021

ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು  ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

published on : 11th May 2021

ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಅಭ್ಯರ್ಥಿ ಮನೆಯಿಂದ ಎರಡು ಕ್ವಿಂಟಾಲ್ ಜಿಲೇಬಿ, 1,050 ಸಮೋಸ ವಶ

ಇಲ್ಲಿನ ಹಸಂಗಂಜ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಅಭ್ಯರ್ಥಿ ಮತದಾರರಿಗೆ ಹಂಚಲು ತಂದಿದ್ದ ಎರಡು ಕ್ವಿಂಟಾಲ್ ಜಿಲೇಬಿ ಮತ್ತು 1,050 ಸಮೋಸವನ್ನು ಉನ್ನಾವೊ ಪೊಲೀಸರು ವಶಪಡಿಸಿಕೊಂಡಿದ್ದಾರೆ.

published on : 11th April 2021

ಗ್ರಾಮ ಪಂಚಾಯತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಶಾಸಕರ ಒಕ್ಕೊರಲ ಒತ್ತಾಯ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಬೇಕು, ಇದರಿಂದಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು. 

published on : 17th March 2021

ಮಾ.29ಕ್ಕೆ ಗ್ರಾಮ ಪಂಚಾಯತ್ ಚುನಾವಣೆ: ಗೆಲ್ಲುವ ತಂತ್ರಗಾರಿಕೆ ಹೆಣೆಯುತ್ತಿರುವ ಮೂರು ಪಕ್ಷಗಳು, ಮಾ.31ಕ್ಕೆ ಫಲಿತಾಂಶ 

ರಾಜ್ಯದ 669 ಗ್ರಾಮ ಪಂಚಾಯತ್ ಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದ್ದು ಮಾರ್ಚ್ 31ರಂದು ಫಲಿತಾಂಶ ಹೊರಬೀಳಲಿದೆ. ಮೂರೂ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲು ಹಲವು ತಂತ್ರಗಳನ್ನು ಮಾಡುತ್ತಿವೆ.

published on : 12th March 2021

ಮಂಗಳೂರು: ಚುನಾವಣೆಯಲ್ಲಿ ಗೆದ್ದ ಮರುದಿನವೇ ಮಗುವಿಗೆ ಜನ್ಮ ಕೊಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷೆ!

ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಚುನಾಯಿತರಾದ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾದ ಮರುದಿನವೇ ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಂಬಲಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಪರಮೇಶ್ವರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

published on : 14th February 2021

ಹಳ್ಳಿಗಾಡಿನ ಅಭಿವೃದ್ಧಿಯ ಕನಸು ಹೊತ್ತು ಅಮೆರಿಕ ತೊರೆದು ತನ್ನ ಗ್ರಾಮಕ್ಕೆ ವಾಪಸ್ ಬಂದ ಸಾಫ್ಟ್ ವೇರ್ ಎಂಜಿನೀಯರ್!

ಅಮೆರಿಕಾದಲ್ಲಿ ಐದು ವರ್ಷ ಸೇವೆ ಸಲ್ಲಿಸಿದ ಸಾಫ್ಟವೇರ್‌ ಎಂಜಿನಿಯರ್‌ ಮಹಿಳೆಯೊಬ್ಬರು ಗ್ರಾಮಾಭಿವೃದ್ಧಿಯ ಕನಸು ಹೊತ್ತು ಅಲ್ಲಿನ ಟೆಕ್ಕಿ ಹುದ್ದೆಗೆ ರಾಜೀನಾಮೆ ನೀಡಿ ದಾವಣಗೆರೆಯ ಹಳ್ಳಿಗೆ ವಾಪಾಸಾಗಿದ್ದಾರೆ. 

published on : 13th February 2021

ಗ್ರಾಮ ಪಂಚಾಯಿತಿ ಮಟ್ಟದ ರಾಜಕೀಯಕ್ಕೂ ತಲುಪಿದ ದೇವರ ಮೇಲೆ ಪ್ರಮಾಣ, ರೆಸಾರ್ಟ್ ರಾಜಕೀಯ, ಫ್ಯಾಮಿಲಿ ಟ್ರಿಪ್!

ರೆಸಾರ್ಟ್ ರಾಜಕಾರಣಕ್ಕೆ ಕರ್ನಾಟಕ ಪ್ರಸಿದ್ದಿ. ಕೇವಲ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್‌ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ.

published on : 12th February 2021
1 2 3 4 5 6 > 

ರಾಶಿ ಭವಿಷ್ಯ