- Tag results for guarantee
![]() | ತೆಲಂಗಾಣ: ಕಾಂಗ್ರೆಸ್‌ನ 6 ಗ್ಯಾರಂಟಿಗಳ ಪೈಕಿ 2 ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ ರೇವಂತ್ ರೆಡ್ಡಿ!ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನಾ ಕಾಂಗ್ರೆಸ್ ಘೋಷಿಸಿದ್ದ ಆರು ಗ್ಯಾರಂಟಿ ಯೋಜನೆಗಳ ಪೈಕಿ 2ಕ್ಕೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶನಿವಾರ ಚಾಲನೆ ನೀಡಿದರು. |
![]() | ರೇಷನ್ ಕಾರ್ಡ್ ಇಲ್ಲದೆ ತೃತೀಯ ಲಿಂಗಿಗಳಿಗೆ ಸರ್ಕಾರದ 'ಗ್ಯಾರಂಟಿ'ಗಳ ಭಾಗ್ಯವಿಲ್ಲ!ಬಳ್ಳಾರ ಜಿಲ್ಲೆಯ ತೃತೀಯಲಿಂಗಿ 42 ವರ್ಷದ ಗಂಗಾ ಕಳೆದ ಆಗಸ್ಟ್ ತಿಂಗಳಲ್ಲಿ ಸರ್ಕಾರದಿಂದ ಗೃಹ ಲಕ್ಷ್ಮಿ ಯೋಜನೆ ಆರಂಭವಾದಾಗ ಖುಷಿಪಟ್ಟಿದ್ದಳು. ಗೃಹ ಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ ಬರುವ 2 ಸಾವಿರ ರೂಪಾಯಿ ಮತ್ತು ತೃತೀಯ ಲಿಂಗಿಗಳಿಗೆ ಸರ್ಕಾರದ ಯೋಜನೆ ಮೈತ್ರಿಯಿಂದ ಸಿಗುವ 800 ರೂಪಾಯಿಗಳಿಂದ ಮನೆ ಬಾಡಿಗೆ ಖರ್ಚು ನಿಭಾಯಿಸಿಕೊಂಡು ಹೋಗಬಹುದೆಂದು ಭಾವಿಸಿದ್ದರು. |
![]() | ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯನಮ್ಮ ಗ್ಯಾರಂಟಿ ಯೋಜನೆಗಳು ವಿಫಲವಾಗಿಲ್ಲ. ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೆ, ಉಳಿದ 3 ರಾಜ್ಯಗಳಲ್ಲಿ ಸೋತಿದ್ದೇವೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. |
![]() | ಬೆಳಗಾವಿ ಅಧಿವೇಶನ: ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿ ಕಲಾಪಕ್ಕೆ ಬಿಜೆಪಿ ಸಜ್ಜು, ಗ್ಯಾರಂಟಿ ವಿಚಾರ ಹಿಡಿದು ಹರಿಹಾಯುವ ಸಾಧ್ಯತೆಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನವು ಗ್ಯಾರಂಟಿ ವಿಚಾರ ಸೇರಿ ಹಲವು ವಿಷಯಗಳು ಮತ್ತು ವಿವಾದಗಳ ಬಗ್ಗೆ ಆಸಕ್ತಿದಾಯಕ ಚರ್ಚೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಗಳಿವೆ. |
![]() | ಖಾತರಿ ಯೋಜನೆಗಳ ಅನುಷ್ಠಾನ ವಿಫಲ; ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆಮೂರು ರಾಜ್ಯಗಳಲ್ಲಿ ಬಿಜೆಪಿಯ ಅಮೋಘ ಗೆಲುವು ಪಕ್ಷದ ರಾಜ್ಯ ಘಟಕಕ್ಕೆ ಬಹುದೊಡ್ಡ ಸ್ಥೈರ್ಯವನ್ನು ನೀಡಿದೆ. ಇದೀಗ, ಆಡಳಿತಾರೂಢ ಕಾಂಗ್ರೆಸ್ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಕೇಸರಿ ಪಕ್ಷವು ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದೆ. |
![]() | ರಾಜ್ಯಗಳಲ್ಲಿ ಮುನ್ನುಗ್ಗುತ್ತಿರುವ ಬಿಜೆಪಿ: ಪ್ರಧಾನಿ ಮೋದಿ ಕೊಂಡಾಡುತ್ತಿರುವ ಬಿಜೆಪಿ ನಾಯಕರು, #ModiKiGuarantee ಫುಲ್ ಟ್ರೆಂಡ್ಪಂಚ ರಾಜ್ಯಗಳ ಚುನಾವಣೆಗಳ ಪೈಕಿ ಇಂದು 4 ರಾಜ್ಯಗಳ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದೆ. ಈ ನಡುವಲ್ಲೇ ಬಿಜೆಪಿ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ModiKiGuarantee ಫುಲ್ ಟ್ರೆಂಡ್ ಆಗಿದೆ. |
![]() | ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ: ಗ್ಯಾರಂಟಿ ಯೋಜನೆಗಳ ಬಗ್ಗೆ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಪ್ರಿಯಾಂಕ್ ಖರ್ಗೆ ತರಾಟೆಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಯಾವುದನ್ನೂ ಫ್ರೀಯಾಗಿ ಕೊಡಬಾರದು, ಕೊಟ್ಟರೆ ಪಡೆದುಕೊಂಡವರು ಸಮಾಜದ ಒಳಿತಿಗೆ ಏನಾದರೂ ಮಾಡಬೇಕು: ನಾರಾಯಣ ಮೂರ್ತಿ''ಯಾವುದನ್ನೂ ಉಚಿತವಾಗಿ ನೀಡಬಾರದು'' ಎಂಬ ಮಾತನ್ನು ಸಾಫ್ಟ್‌ವೇರ್ ಉದ್ಯಮದ ದಿಗ್ಗಜ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ. ಸರ್ಕಾರದ ಯೋಜನೆಗಳು, ಆಡಳಿತ, ಯುವಜನತೆ ಜೀವನ ವಿಧಾನ ಬಗ್ಗೆ ಅವರು ಈ ಹಿಂದೆಯೂ ಮುಕ್ತವಾಗಿ ಮಾತನಾಡಿದ್ದುಂಟು. ಹಲವು ಬಾರಿ ಅವರ ಹೇಳಿಕೆಗಳು ಟ್ರೋಲ್ ಆಗಿವೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಕೆಟಿಆರ್ ಹೇಳಿಕೆ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯಕರ್ನಾಟಕ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿಆರ್ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಿರಸ್ಕರಿಸಿದ್ದಾರೆ. ನಾವು 5 ಭರವಸೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದೆವು ಮತ್ತು ಮೊದಲು ಸಂಪುಟ ಸಭೆಯಲ್ಲೇ ಆದೇಶಗಳನ್ನು ಹೊರಡಿಸಿದ್ದೇವೆ ಎಂದು ಹೇಳಿದರು. |
![]() | ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತವೆ: ಸಿಎಂ ಸಿದ್ದರಾಮಯ್ಯನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಗ್ಯಾರಂಟಿಗಳನ್ನು ಜಾರಿಗೊಳಿಸಿಲ್ಲ, 'ಸುಳ್ಳು ಭರವಸೆ' ಬಗ್ಗೆ ಎಚ್ಚರದಿಂದಿರಿ: ಜೆಪಿ ನಡ್ಡಾಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್‌ಎಸ್ ಎರಡೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ದೂರಿದ್ದಾರೆ. |
![]() | ಡಿ.31ರ ಒಳಗೆ ಎಲ್ಲ ಅರ್ಹರಿಗೂ 'ಗ್ಯಾರಂಟಿ': ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 31ರ ಒಳಗೆ ಯೋಜನೆಗಳ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | 'ಗ್ಯಾರಂಟಿ ಯೋಜನೆ'ಗೆ ಎಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಇಲ್ಲ: ಸರ್ಕಾರದಲ್ಲಿ ಹಣ ಕೊರತೆ ಬಗ್ಗೆ ಶಾಸಕರು, ತಜ್ಞರು ಹೇಳುವುದೇನು?ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಇತರ ಅಭಿವೃದ್ಧಿ ಯೋಜನೆಗಳಿಗೆ ಹಣ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನೇ ಆರಂಭದಿಂದಲೂ ವಿರೋಧ ಪಕ್ಷಗಳು ಹೇಳಿಕೊಂಡು ಬಂದಿದ್ದವು. |
![]() | ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ರದ್ದು: ಡಿಸಿಎಂ ಡಿಕೆ ಶಿವಕುಮಾರ್ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತಿವೆ ಎಂದು ಭಾನುವಾರ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಥವಾ ಅದರ ಮಿತ್ರ ಪಕ್ಷ ಜೆಡಿಎಸ್‌ಗೆ ಜನರು ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಿದ್ದಾರೆ ಎಂದರು. |
![]() | ಗ್ಯಾರಂಟಿ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಕೆ.ಶಿವಕುಮಾರ್ ತಿರುಗೇಟುಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. |