High Court

ಬಿಬಿಎಂಪಿ ಸ್ಥಾಪನೆ ಜನ ಸೇವೆಗಾಗಿಯೇ ಹೊರತು ಪ್ರಭಾವಿಗಳ ಸೇವೆಗಲ್ಲ: ಹೈಕೋರ್ಟ್
ಅಧಿಕಾರಿಗಳಿರುವುದು ಜನಸಾಮಾನ್ಯರ ಸೇವೆಗಾಗಿಯೇ ಹೊರತು ಪ್ರಭಾವಿಗಳ ಸೇವೆ ಸಲ್ಲಿಸಲು ಅಲ್ಲ ಎಂದು ಹೈಕೋರ್ಟ್ ಬಿಬಿಎಂಪಿಗೆ ಚಾಟಿ ಬೀಸಿದೆ.

ಅಕ್ರಮ ಎಂಬ ಮಾತ್ರಕ್ಕೆ ಕಟ್ಟಡಗಳನ್ನು ನೀವು ಕೆಡವಲಾಗದು: ಬಿಬಿಎಂಪಿಗೆ ಹೈಕೋರ್ಟ್ ಚಾಟಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆಯದಿದ್ದರೇ ಕೂಡಲೇ ಕಟ್ಟಡವನ್ನು ಕೆಡವಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವ್ಯಾಖ್ಯಾನಿಸಿದೆ.

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರ್ಧ ದಿನ ರಜೆಗೆ ಸಿಎಂ ಸಿದ್ದರಾಮಯ್ಯಗೆ ಎಎಬಿ ಮನವಿ
ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಶಾಸಕ ರಮೇಶ್ ಜಾರಕಿಹೊಳಿಯಿಂದ ಬ್ಯಾಂಕ್‌ಗೆ ರೂ.439 ಕೋಟಿ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್: ಬಂಧನದಿಂದ ರಕ್ಷಣೆ ವಿಸ್ತರಿಸಿದ ಹೈಕೋರ್ಟ್
ಕಳೆದ ಡಿಸೆಂಬರ್ 24 ರಂದು ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು,

ಕಾರಂತ್ ಲೇಔಟ್ ನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ: ಬಿಡಿಎಗೆ ಹೈಕೋರ್ಟ್ ಸೂಚನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ನಡುವೆಯೇ ಹೈಕೋರ್ಟ್ ಬಡಾವಣೆ ನಿರ್ಮಾಣದ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಆದೇಶಿಸಿದೆ.

ನಗರದಲ್ಲಿ ಅಕ್ರಮ ಜಾಹೀರಾತು ಅಳವಡಿಕೆ: ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬೆಂಗಳೂರಿನಲ್ಲಿ ಅಕ್ರಮವಾಗಿ ಹಾಕಲಾಗಿರುವ ಜಾಹೀರಾತು ಫಲಕ/ಹೋರ್ಡಿಂಗ್‌ಗಳ ತೆರವು ಮಾಡುವುದು ಮತ್ತು ಹೊಸದಾಗಿ ಜಾಹೀರಾತು ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮದ ವರದಿ ಸಲ್ಲಿಸುವಂತೆ ಗುರುವಾರ ಹೈಕೋರ್ಟ್ ಬಿಬಿಎಂಪಿಗೆ ಗುರುವಾರ ನಿರ್ದೇಶಿಸಿದೆ.

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಶ್ರೀರಂಗಪಟ್ಟಣ ಜುಮ್ಮಾ ಮಸೀದಿಯಲ್ಲಿ ಮದರಸಾ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಜುಮ್ಮಾ ಮಸೀದಿಯ ಆವರಣದಲ್ಲಿ ಅಕ್ರಮವಾಗಿ ಮದರಸಾ ನಡೆಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

