infection

ಕೋವಿಡ್-19: ರಾಜ್ಯದಲ್ಲಿ 23 ದಿನಗಳಲ್ಲಿ 2 ಲಕ್ಷ ಕೇಸ್ ಪತ್ತೆ!
ರಾಜ್ಯದಲ್ಲಿ ಬುಧವಾರ 4,436 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 28,19,465ಕ್ಕೆ ತಲುಪಿದೆ. ಬುಧವಾರದ ಅಂಕಿ ಸಂಖ್ಯೆಯೊಂದಿಗೆ ರಾಜ್ಯದಲ್ಲಿ 23 ದಿನಗಳಲ್ಲಿ 2 ಲಕ್ಷ ಪ್ರಕರಣಗಳು ಪತ್ತೆಯಾದಂತಾಗಿದೆ.

ಕೋವಿಡ್-19: ಭಾರತದಲ್ಲಿಂದು 50,848 ಹೊಸ ಕೇಸ್ ಪತ್ತೆ; 1,358 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 50,848 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,358 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ: ದೇಶದಲ್ಲಿಂದು 42,640 ಹೊಸ ಕೇಸ್ ಪತ್ತೆ; 1,167 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,640 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 91 ದಿನದಲ್ಲೇ ದೃಢಪಟ್ಟ ಕನಿಷ್ಠ ಸಂಖ್ಯೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 1,167 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ: 83 ದಿನಗಳ ಬಳಿಕ 4 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ
ರಾಜ್ಯದ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 83 ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 4 ಸಾವಿರದೊಳಗೆ ಹೊಸ ಪ್ರಕರಣ ವರದಿಯಾಗಿದೆ.

ಕೋವಿಡ್-19: ಭಾರತದಲ್ಲಿಂದು 58,419 ಹೊಸ ಕೇಸ್ ಪತ್ತೆ, 1,576 ಮಂದಿ ಸಾವು
ಭಾರತದಲ್ಲಿ ಕೊರೋನಾ ಅಬ್ಬರದ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1576 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 60,753 ಹೊಸ ಕೇಸ್ ಪತ್ತೆ; 1,647 ಮಂದಿ ಸಾವು
ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡು ಬಂದಿದೆ. ಸಾವಿನ ಸಂಖ್ಯೆ 62 ದಿನದ ಕನಿಷ್ಟ ದಾಖಲಾಗಿದ್ದರೆ, 74 ದಿನಗಳ ಬಳಿಕ ಸಕ್ರಿಯ ಪ್ರಕರಣ ಸಂಖ್ಯೆ 8 ಲಕ್ಷಕ್ಕಿಂತ ಕೆಳಗೆ ಇಳಿದಿದೆ.

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 62,480 ಹೊಸ ಕೇಸ್ ಪತ್ತೆ, 1,587 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು. ಶುಕ್ರವಾರ 62,480 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ದೇಶದಲ್ಲಿ 1,587 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಏರಿಳಿತ: ದೇಶದಲ್ಲಿಂದು 67,208 ಹೊಸ ಕೇಸ್ ಪತ್ತೆ; 2,330 ಮಂದಿ ಸಾವು
ಭಾರತದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಗುರುವಾರ ಕೊಂಚ ಏರಿಕೆ ಕಂಡಿದೆ. ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 67,208 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 2,330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 62,224 ಹೊಸ ಕೇಸ್ ಪತ್ತೆ, 2542 ಮಂದಿ ಸಾವು
ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 62,224 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 2542 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

