• Tag results for investigation

ಮೈಸೂರು ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಭೂ ಹಗರಣ ಕಾರಣ, ತನಿಖೆ ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ರಾಜ್ಯದ ಇಬ್ಬರು ಐಎಎಸ್ ಅಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಭೂ ಹಗರಣ ಕಾರಣ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಸರ್ಕಾರ ಕೂಡಲೇ ಹಗರಣದ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆ ಮೂಲಕ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

published on : 9th June 2021

ಡಿಜೆ ಹಳ್ಳಿ ಗಲಭೆ: 18 ಆರೋಪಿಗಳಿಗೆ ಎನ್ಐಎ ಕೋರ್ಟ್ ಜಾಮೀನು ನಿರಾಕರಣೆ

ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಕೋರ್ಟ್ 18 ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ.

published on : 26th April 2021

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 8 ಗಂಟೆಗಳ ಕಾಲ ಸಿಬಿಐ ಡ್ರಿಲ್!

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸುತ್ತಿರುವ ಸಿಬಿಐನಿಂದ ಇಂದು 8 ಗಂಟೆಗಳ ಕಾಲ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು  ಪ್ರಶ್ನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

published on : 14th April 2021

ಕೂಚ್ ಬೆಹಾರ್ ಘರ್ಷಣೆ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಮಮತಾ ಬ್ಯಾನರ್ಜಿ

ಕೂಚ್ ಬೆಹಾರ್‌ನ ಸೀತಾಲಕುಚಿಯಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ.

published on : 14th April 2021

ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ವಶಕ್ಕೆ ಪಡೆದ ಎನ್ಐಎ!

ದೇಶದ ಅಗ್ರ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

published on : 28th March 2021

ಸಿಡಿ ಪ್ರಕರಣ: ಯಾರ ಒತ್ತಡ, ಪ್ರಭಾವಕ್ಕೂ ತಲೆಕೆಡಿಸಿಕೊಳ್ಳದೆ ಎಸ್‌ಐಟಿ ತನಿಖೆ ನಡೆಯುತ್ತೆ ಎಂದ ಬಸವರಾಜ ಬೊಮ್ಮಾಯಿ

ರಾಸಲೀಲೆ ಸಿಡಿ ಪ್ರಕರಣದಲ್ಲಿ ಯಾರ ಒತ್ತಡ, ಪ್ರಭಾವಕ್ಕೆ ತಲೆಕೆಡಿಸಿಕೊಳ್ಳದೇ ಎಸ್‌ಐಟಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

published on : 27th March 2021

ಎಸ್​ಐಟಿ ತನಿಖೆ ಮೇಲೆ ಸಿಡಿ ಯುವತಿಗೆ ನಂಬಿಕೆ ಇಲ್ಲ: ವಕೀಲ ಜಗದೀಶ್

ಎಸ್​ಐಟಿ ತನಿಖೆ ಮೇಲೆ ಸಿಡಿಯಲ್ಲಿರುವ ಯುವತಿಗೆ ನಂಬಿಕೆ ಇಲ್ಲ ಎಂದು ಆಕೆಯ ಪರ ವಕೀಲ ಜಗದೀಶ್ ಹೇಳಿದರು.

published on : 26th March 2021

ಮಾಡೆಲ್ ಮೇಲೆ ಹಲ್ಲೆ ಆರೋಪ: ತಾತ್ಕಾಲಿಕವಾಗಿ ತನಿಖೆಯನ್ನು ನಿಲ್ಲಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು

ಜೊಮ್ಯಾಟೊ ಡೆಲಿವರಿ ಬಾಯ್ ಹಲ್ಲೆ ಆರೋಪ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಧಾರಗಳು ದೊರೆಯದ ಕಾರಣಕ್ಕೆ ತಾತ್ಕಾಲಿಕವಾಗಿ ತನಿಖೆಯನ್ನು ನಿಲ್ಲಿಸಲು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ನಿರ್ಧರಿಸಿದ್ದಾರೆ. 

published on : 21st March 2021

ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸಿದ ಎಸ್ಐಟಿ

ಪತ್ರಕರ್ತ ನರೇಶ್ ಗೌಡ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ಎಸ್ಐಟಿ ಅಧಿಕಾರಿಗಳು ಶುಕ್ರವಾರ ವಿಚಾರಣೆಗೊಳಪಡಿಸಿದ್ದು, ವಿಚಾರವಣೆ ವೇಳೆ ಯಾವುದೇ ರೀತಿ ಮಹತ್ವದ ಸುಳಿವುಗಳೂ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

published on : 20th March 2021

ಶಿವಮೊಗ್ಗ ಸ್ಫೋಟ ಪ್ರಕರಣ: ತನಿಖೆಗೆ 6 ತಂಡ ರಚನೆ

ನಗರದ ಹೊರವಲಯದ ಹುಣಸೋಡು ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖಗೆ ರಾಜ್ಯ ಸರ್ಕಾರ 6 ತಂಡಗಳನ್ನು ರಚನೆ ಮಾಡಿದೆ. 

published on : 26th January 2021

ಎಲ್ಲಾ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಲು ಮುಖ್ಯಮಂತ್ರಿ ಸೂಚನೆ

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

published on : 24th January 2021

ಡಿಜೆ ಹಳ್ಳಿ ಗಲಭೆ ಪ್ರಕರಣ: ಪೊಲೀಸರಿಗೆ ಸಹಾಯ ಮಾಡುವ ಸಲುವಾಗಿ ನಮ್ಮನ್ನು ಸ್ಥಳಕ್ಕೆ ಕರೆಯಲಾಗಿತ್ತು- ಎನ್ಐಎಗೆ ಶಾಸಕರ ಹೇಳಿಕೆ

ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ನನ್ನನ್ನು ಕರೆದಿದ್ದು ಅಚ್ಚರಿ ಮೂಡಿಸಿದೆ. ಡಿಜೆ ಹಳ್ಳಿ ಗಲಭೆ ಸ್ಥಳಕ್ಕೆ ಭೇಟಿ ನೀಡಿದ್ದೆವು ಎಂಬ ಕಾರಣಕ್ಕೆ ಕರೆದಿದ್ದರು.

published on : 16th October 2020

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ: ಸರ್ಕಾರದ ಆದೇಶ

ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

published on : 10th October 2020