JDS

ಅಪ್ಪನ ಮಾತು ಕೇಳಿ ಜೆಡಿಎಸ್ ಸೇರಿದ್ದರೆ ಎಂಎಲ್ಎ, ಮಂತ್ರಿ ಆಗುತ್ತಿರಲಿಲ್ಲ: ಸಿಟಿ ರವಿ
ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರ ಅಭಿಮಾನಿಯಾಗಿದ್ದ ತಂದೆಯ ಸಲಹೆಯನ್ನು ಪಾಲಿಸಿದ್ದರೆ ಜೆಡಿಎಸ್ ವರಿಷ್ಠರು ಹಾಗೂ ಅವರ ಪುತ್ರರ ಕೊಂಡಾಡುವುದರಲ್ಲೇ ಜೀವನ ಮುಗಿಯುತ್ತಿತ್ತೇ ಹೊರತು ಎಂದಿಗೂ ಶಾಸಕ ಅಥವಾ ಸಚಿವನಾಗುತ್ತಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸೋಮವಾರ ಹೇಳಿದ್ದಾರೆ.

'ತಂದೆ ಸ್ಥಾನದಲ್ಲಿರುವ ದೇವೇಗೌಡರಿಗೆ ವಿಷ ಹಾಕುವ ಕೆಲಸ ಮಾಡಿದ್ದೀ ಶಿವಲಿಂಗು! ನಿನಗೆ ಆ ಶಾಪ ತಟ್ಟಲಿದೆ'
‘ತಂದೆ ಸ್ಥಾನದಲ್ಲಿರುವ ದೇವೇಗೌಡರಿಗೆ ಈ ವಯಸ್ಸಿನಲ್ಲಿ ವಿಷ ಹಾಕುವ ಕೆಲಸ ಮಾಡಿದ್ದೀ ಶಿವಲಿಂಗು, ನಿನಗೆ ಆ ಶಾಪ ತಟ್ಟಲಿದೆ’ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ: ಹಾಲಿ ಶಾಸಕ ಶಿವಲಿಂಗೇಗೌಡಗೆ ಸೆಡ್ಡು ಹೊಡೆದ ಕುಮಾರಸ್ವಾಮಿ
ಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಕೆ ಎಂ ಶಿವಲಿಂಗೇಗೌಡ ಜೆಡಿಎಸ್ ನಿಂದ ಒಂದು ಕಾಲು ಹೊರಗಿಟ್ಟು ಎಷ್ಟೋ ಸಮಯವಾಗಿದೆ. ತೆನೆ ಇಳಿಸಿ ಕೈ ಹಿಡಿಯುವ ದಿನ ಹತ್ತಿರವಾಗುತ್ತಿದ್ದಂತೆ ಇತ್ತ ಜೆಡಿಎಸ್ ನಾಯಕರು ನೀವಿಲ್ಲದಿದ್ದರೇನಂತೆ ನಮಗೆ ಬೇರೆ ಅಭ್ಯರ್ಥಿಗಳಿದ್ದಾರೆ ಎಂದು ತೋರಿಸಿಕೊಟ್ಟಿದ್ದಾರೆ.

ಅಡಿಕೆ ಆಮದು ಗಣನೀಯ ಹೆಚ್ಚಳ: ರೈತರ ಹಿತಾಸಕ್ತಿ ಕಾಪಾಡಿ; ಡಬಲ್ ಎಂಜಿನ್ ಸರ್ಕಾರಕ್ಕೆ ಜೆಡಿಎಸ್ ಒತ್ತಾಯ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಳ್ಳಲಾಗಿರುವ ಸಂಗತಿ ವರದಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ನಮ್ಮ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ
ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು.

ಭವಾನಿ ರೇವಣ್ಣ ಈ ಚುನಾವಣೆಯಲ್ಲಿ ಅನಿವಾರ್ಯವಲ್ಲ, ಟಿಕೆಟ್ ಗೊಂದಲವನ್ನು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ: ಹೆಚ್ ಡಿ ಕುಮಾರಸ್ವಾಮಿ
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಇಂದು ಜೆಡಿಎಸ್ ನ ಪಂಚರತ್ನ ಯಾತ್ರೆಯ ಮಧ್ಯೆ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಶಿವಾಜಿ, ಬಸವಣ್ಣ, ಬುದ್ಧ, ಗಾಂಧೀಜಿ, ಅಂಬೇಡ್ಕರ್ ಅವರನ್ನು ಬಿಡದವರು ನನ್ನನ್ನು ಬಿಡುತ್ತಾರೆಯೇ: ಎಚ್ಡಿ ಕುಮಾರಸ್ವಾಮಿ
ಪೇಶ್ವೆ ಡಿಎನ್ಎ ಬಗೆಗಿನ ಜೆಡಿಎಸ್ ನಾಯಕ ಕುಮಾರಸ್ವಾಮಿಯವರ ಕುರಿತು ಬಿಜೆಪಿ ನಾಯಕರು ಟೀಕೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದು, ಈ ನಡುವಲ್ಲೇ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕುಮಾರಸ್ವಾಮಿಯವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಾವೊಂದು ಸಮೀಕ್ಷೆಯೂ ಜೆಡಿಎಸ್ ಪರ ಭವಿಷ್ಯ ನುಡಿಯದ ಕಾರಣ ಹೆಚ್'ಡಿಕೆ ಹತಾಶೆಗೊಳಗಾಗಿದ್ದಾರೆ: ಆರ್.ಅಶೋಕ್
ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜಯ ಸಿಗಲಿದೆ ಎಂದು ಇತ್ತೀಚಿನ ಯಾವುದೇ ಸಮೀಕ್ಷೆಗಳು ಭವಿಷ್ಯ ನುಡಿಯದ ಕಾರಣ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಗೊಳಗಾಗಿದ್ದಾರೆಂದು ಬಿಜೆಪಿ ನಾಯಕ ಆರ್.ಅಶೋಕ್ ಅವರು ಬುಧವಾರ ಹೇಳಿದ್ದಾರೆ.

ಪ್ರಹ್ಲಾದ್ ಜೋಶಿ ಕಚೇರಿಯಲ್ಲಿ ಲಂಚ ಸ್ವೀಕಾರ ಆರೋಪ ಮಾಡಿದ ಜೆಡಿಎಸ್: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಕೇಂದ್ರ ಸಚಿವ
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ.

